ಚಿಕ್ಕಾಟಿ ಗ್ರಾಮಕ್ಕೆತಹಶೀಲ್ದಾರ್ ಭೇಟಿ, ಪರಿಶೀಲನೆ
Team Udayavani, Oct 7, 2020, 2:07 PM IST
ಗುಂಡ್ಲುಪೇಟೆ: ತಾಲೂಕಿನ ಚಿಕ್ಕಾಟಿ ಗ್ರಾಮದಲ್ಲಿನ ಕನಕ ಭವನದಲ್ಲಿ ನಡೆಸುತ್ತಿದ್ದ ವಿದ್ಯಾಗಮ ತರಗತಿಗೆ ಬಂದಿದ್ದ ದಲಿತ ವಿದ್ಯಾರ್ಥಿಗಳನ್ನು ಮೆಟ್ಟಿಲ ಬಳಿ ಕೂರಿಸಲಾಗಿದೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ತಹಶೀಲ್ದಾರ್ ನಂಜುಂಡಯ್ಯ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳಿಂದ ಘಟನೆ ಬಗ್ಗೆ ಮಾಹಿತಿ ಪಡೆದರು.
ಘಟನೆ ವಿವರ: ಇದೇ ತಿಂಗಳ ಅ.1ರಂದು ವಿದ್ಯಾಗಮ ಕಾರ್ಯಕ್ರಮದ ಅನ್ವಯ ಗ್ರಾಮದ ಕನಕ ಭವನದಲ್ಲಿ ನಡೆಸುತ್ತಿದ್ದ ತರಗತಿಗೆ ಬಂದಿದ್ದ ದಲಿತ ವಿದ್ಯಾರ್ಥಿಗಳನ್ನು ಮೆಟ್ಟಿಲ ಬಳಿ ಕೂರಿಸಲಾಗಿದೆ ಎಂದು ಆರೋಪಿಸಿ ಕೆಲವು ದಲಿತ ಸಂಘಟನೆ ಸದಸ್ಯರು ಆರೋಪಿಸಿದ್ದರು.ಹೇಳಿಕೆ ದಾಖಲು:ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಿದ್ದರೂ ಕರ್ತವ್ಯಲೋಪ ಎಸಗಿದ ಶಿಕ್ಷಕರ ಅಮಾನತಿಗೆ ಸಂಘಟನೆಗಳು ಪಟ್ಟು ಹಿಡಿದಿದ್ದವು. ಹೀಗಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪ್ರಮೋದ್ ಕುಮಾರ್, ಬಿಇಒ ಎಸ್.ಸಿ.ಶಿವಮೂರ್ತಿ ಹಾಗೂ ಅಧಿಕಾರಿಗಳ ತಂಡ ಗ್ರಾಮಕ್ಕೆ ತೆರಳಿ ವಿದ್ಯಾರ್ಥಿಗಳು, ಪಾಲಕರು ಹಾಗೂ ಗ್ರಾಮಸ್ಥರ ಹೇಳಿಕೆ ದಾಖಲಿಸಿತು.
ಕ್ರಮಕ್ಕೆ ವರದಿ: ವಿದ್ಯಾರ್ಥಿಗಳು ತಮ್ಮನ್ನು ಗ್ರಾಮದ ಹಿರಿಯರೊಬ್ಬರು ಗದರಿಸಿ ಕೆಳಗೆ ಕುಳಿತು ಕೊಳ್ಳಿ ಎಂದು ಹೇಳಿದ್ದರು. ಈ ಸಂದರ್ಭದಲ್ಲಿ ಶಿಕ್ಷಕರು ಬಂದಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಎಲ್ಲರ ಹೇಳಿಕೆಗಳನ್ನೂ ವಿಡಿಯೋ ಮಾಡಲಾಗಿದೆ. ಹೀಗಾಗಿ ಈ ವಿಷಯವನ್ನು ಶಿಕ್ಷಣ ಇಲಾಖೆ ಗಮನಕ್ಕೆ ತರಲು ವಿಫಲರಾದ ಶಿಕ್ಷಕಿ ಹಾಗೂ ಮುಖ್ಯ ಶಿಕ್ಷಕರ ವಿರುದ್ಧ ಕ್ರಮಕೈಗೊಳ್ಳುವಂತೆ ಉಪನಿರ್ದೇಶಕರಿಗೆ ವರದಿ ಸಲ್ಲಿಸುವುದಾಗಿ ಬಿಇಒ ಶಿವಮೂರ್ತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.