ಕೋವಿಡ್ 19 ತಡೆಗೆ ಕ್ರಮ ಕೈಗೊಳ್ಳಿ
Team Udayavani, Jul 7, 2020, 5:43 AM IST
ಹನೂರು: ಹಸಿರು ವಲಯದಲ್ಲಿದ್ದ ತಾಲೂಕಿಗೂ ಕೋವಿಡ್ 19 ಸೋಂಕು ಹರಡಿದ್ದು, ಇದನ್ನು ತಡೆಗಟ್ಟಲು ಸರ್ಕಾರಿ ಆದೇಶಗಳನ್ನು ಎಲ್ಲಾ ಇಲಾಖೆಗಳು ಕಟ್ಟುನುಟ್ಟಾಗಿ ಪಾಲಿಸಬೇಕು ಎಂದು ಶಾಸಕ ಆರ್. ನರೇಂದ್ರ ಸೂಚಿಸಿದರು. ಪಟ್ಟಣದಲ್ಲಿ ಕೋವಿಡ್-19 ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ತಾಲೂಕು ವ್ಯಾಪ್ತಿಯಲ್ಲಿ ಈಗಾಗಲೇ 3 ಕೋವಿಡ್ 19 ಪ್ರಕರಣ ದೃಢಪಟ್ಟಿವೆ. ತಾಲೂಕಾದ್ಯಂತ ಜಾತ್ರೆ, ಗ್ರಾಮದೇವತೆ ಹಬ್ಬ, ಕ್ರೀಡಾ ಪಂದ್ಯಾವಳಿ ರದ್ದುಪಡಿಸಲು ಗ್ರಾಮಸ್ಥರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಬೇಕು. ಮದುವೆ ಶುಭ ಸಮಾರಂಭಗಳಿಗೆ 50ಕ್ಕಿಂತ, ಅಂತ್ಯಸಂಸ್ಕಾರಕ್ಕೆ 20ಕ್ಕಿಂತ ಹೆಚ್ಚು ಜನ ಸೇರದಂತೆ ಕ್ರಮ ವಹಿಸಬೇಕು. ಹಣಕಾಸು ವ್ಯವಹಾರಗಳಲ್ಲಿ ಮುಂದಿನ 3 ತಿಂಗಳು ಬಲವಂತದ ವಸೂಲಾತಿ ಮಾಡಬಾರದು ಎಂದು ಸೂಚಿಸಿದರು.
ತಾಳಬೆಟ್ಟದಲ್ಲಿ ಪರೀಕ್ಷೆ: ತಾಲೂಕಿನ ಧಾರ್ಮಿಕ ಪುಣ್ಯಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತರನ್ನು ತಾಳಬೆಟ್ಟದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು. ಅಲ್ಲದೆ ಶ್ರೀ ಕ್ಷೇತ್ರಕ್ಕೆ ಸರಕು ಸಾಗಣೆ ವಾಹನಗಳಿಗೆ ಪ್ರವೇಶ ನಿರ್ಬಂಧಿಸಬೇಕು. ತಾಲೂಕಿನ ಎಲ್ಲಾ ಪಿಡಿಒಗಳು ಕೇಂದ್ರಸ್ಥಾನದಲ್ಲಿ ಉಳಿದು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ತಹಶೀಲ್ದಾರರಾದ ಕುನಾಲ್, ಬಸವರಾಜು ಚಿಗರಿ, ಡಿವೈಎಸ್ಪಿ ನವೀನ್‌ಕುಮಾರ್, ತಾಪಂ ಇಒ ಶ್ರೀನಿವಾಸ್, ರಾಮಾಪುರ ಸಿಪಿಐ ಮನೋಜ್ ಕುಮಾರ್, ಮಹದೇಶ್ವರಬೆಟ್ಟ ಸಿಪಿಐ ಮಹೇಶ್, ಸಿಪಿಐ ಅಶೋಕ್‌ಕುಮಾರ್, ವೈದ್ಯಾಧಿಕಾರಿ ಡಾ.ಪುಷ್ಪಾರಾಣಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೂರ್ತಿ, ಆರೋಗ್ಯ ನಿರೀಕ್ಷಕ ಮಾದೇಶ್, ಆರ್‌ಐ ಮಾದೇಶ್, ವಿಎ ಶೇಷಣ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.