ಶೈಕ್ಷಣಿಕ ಕ್ಷೇತ್ರದಲ್ಲಿ ಹನೂರಿಗೆ ಉನ್ನತ ಸ್ಥಾನ
Team Udayavani, Sep 6, 2020, 12:44 PM IST
ಹನೂರು: ತಾಲೂಕು ಆರ್ಥಿಕವಾಗಿ ಹಿಂದುಳಿದಿದ್ದರೂ, ಶೈಕ್ಷಣಿಕವಾಗಿ ಉನ್ನತ ಸ್ಥಾನದಲ್ಲಿದೆ. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹನೂರು ತಾಲೂಕು ರಾಜ್ಯದಲ್ಲಿಯೇ 2ನೇ ಸ್ಥಾನದಲ್ಲಿದೆ. ಮುಂದಿನ ಸಾಲಿನಲ್ಲಿ ಪ್ರಥಮ ಸ್ಥಾನ ಗಳಿಸಲು ಶ್ರಮವಹಿಸಬೇಕು ಎಂದು ಶಾಸಕ ಆರ್.ನರೇಂದ್ರ ಹೇಳಿದರು.
ಪಟ್ಟಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಲ್ಲಿ ರಾಜ್ಯಕ್ಕೆ 2ನೇ ಸ್ಥಾನ ಪಡೆಯಲು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಪಾತ್ರವಿದೆ. ಮುಂದಿನ ದಿನಗಳಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ಇಡೀ ರಾಜ್ಯವೇ ಹನೂರು ತಾಲೂಕಿನತ್ತ ತಿರುಗಿ ನೋಡುವಂತಾಗಬೇಕು ಎಂದರು.
ಜಿಪಂ ಸದಸ್ಯ ಬಸವರಾಜು ಮಾತನಾಡಿ, ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದೆ. ಅಂತಹ ವಿದ್ಯಾರ್ಥಿಗಳನ್ನು ದೇಶದ ಸತ್ಪ್ರಜೆ ಗಳನ್ನಾಗಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಆದ್ದರಿಂದ ಶಿಕ್ಷಕರು ರಾಧಾಕೃಷ್ಣನ್ ಅವರ ಆದರ್ಶವನ್ನು ಮೈಗೂಡಿಸಿಕೊಂಡು ರಾಷ್ಟ್ರ ನಿರ್ಮಾಣ ಮಾಡಬೇಕು ಎಂದರು.
ನಿವೃತ್ತ ಶಿಕ್ಷಕರು ಮತ್ತು ಬಿಇಒ ಸ್ವಾಮಿ ಮತ್ತು ಬಿಆರ್‌ಸಿ ಕ್ಯಾತ ಅವನ್ನು ಸನ್ಮಾನಿಸಲಾಯಿತು. ತಾಪಂ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷೆ ರುಕ್ಮಿಣಿ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಗುರುಸ್ವಾಮಿ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಜಾನ್‌ಬ್ರಿಟ್ಟೋ, ರಾಜೇಂದ್ರ, ಅಮಲ್‌ರಾಜ್, ಶಿವಮಲ್ಲು, ಮಾದೇಶ್, ರೂಪಶ್ರೀ ಹಾಜರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.