ಮೋದಿ ಭೇಟಿ: ಹ್ಯಾಲಿಪ್ಯಾಡ್ ನಿರ್ಮಾಣ ಚುರುಕು
Team Udayavani, Apr 6, 2023, 2:44 PM IST
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಏ.9ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವುದು ಅಧಿಕೃತವಾದ ಹಿನ್ನೆಲೆ ಮೇಲುಕಾಮನಹಳ್ಳಿ ಬಳಿಯ ಸಫಾರಿ ಕೇಂದ್ರ ಬಳಿ ಹ್ಯಾಲಿಪ್ಯಾಡ್ ನಿರ್ಮಾಣ ಕಾರ್ಯ ಚುರುಕುಗೊಂಡಿದೆ.
ಮೋದಿ ಭೇಟಿ ಹಿನ್ನೆಲೆ ಎಚ್ಚೆತ್ತ ಅರಣ್ಯ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತ ಬಂಡೀಪುರ ರಾಷ್ಟ್ರೀಯ ಹೆದ್ದಾರಿಯ ಸ್ವತ್ಛತಾ ಕಾರ್ಯಕ್ಕೆ ಮುಂದಾಗಿದ್ದು, ವರ್ಷಗಳಿಂದ ಹೆದ್ದಾರಿ ರಸ್ತೆಯ ಎರಡು ಬದಿಯಲ್ಲಿ ಬೆಳೆದಿದ್ದ ಕಳೆ ಗಿಡಗಳನ್ನು ತೆರವುಗೊಳಿಸಲಾಗುತ್ತಿದೆ. ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ವಸ್ತುಗಳನ್ನು ಹಾಯಿಸಲಾಗುತ್ತಿದ್ದು, ಕಾಡು ಪ್ರಾಣಿಗಳ ಮೇಲು ಕೂಡು ರಸ್ತೆ ದಾಟದಂತೆ ನಿಗಾ ವಹಿಸಲಾಗುತ್ತಿದೆ.
ಹೊರಗಿನವರ ಮಾಹಿತಿ ನೀಡಿ: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿ ಕೊಳ್ಳಬೇಕಾಗಿದ್ದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಹೊರಗಿನಿಂದ ಬರುವ ಅಪರಿ ಚಿತರ ಮಾಹಿತಿ ನೀಡುವಂತೆ ಗ್ರಾಮಸ್ಥರಿಗೆ ಈಗಾಗಲೇ ಅಧಿ ಕಾರಿಗಳು ಸೂಚನೆ ನೀಡಲಾಗಿದ್ದು, ಅನುಮಾನಾಸ್ಪದವಾಗಿ ಸಂಚಾರ ಮಾಡುವವರು ಹಾಗೂ ವಾಹನಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಅಧಿಕಾರಿಗಳ ಭೇಟಿ-ಪರಿಶೀಲನೆ: ಏ.9ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಅಧಿಕೃತವಾದ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ, ಎಡಿಸಿ ಕಾತ್ಯಾಯಿಸಿ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಬಂಡೀಪುರಕ್ಕೆ ಭೇಟಿ ಹ್ಯಾಲಿ ಪ್ಯಾಡ್ ನಿರ್ಮಾಣ ಸೇರಿದಂತೆ ಸೂಕ್ತ ಭದ್ರತೆ ಒದಗಿಸುವ ಸಂಬಂಧ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
MUST WATCH
ಹೊಸ ಸೇರ್ಪಡೆ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.