ಕೆರೆಯಲ್ಲಿ ತೇಲುತ್ತಿದ್ದ ಜಿಂಕೆ ಶವ ಹೊರಕ್ಕೆ
Team Udayavani, Feb 12, 2019, 7:25 AM IST
ಸಂತೆಮರಹಳ್ಳಿ: ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ತಪ್ಪಲಿನ ಕೃಷ್ಣಯ್ಯನಕಟ್ಟೆಯ ನೀರಿನಲ್ಲಿ ತೇಲುತ್ತಿದ್ದ ಜಿಂಕೆಯ ಕಳೇಬರವನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಸೋಮವಾರ ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಮುಕ್ತಿ ನೀಡಿದರು.
ಕಳೆದ ನಾಲ್ಕು ದಿನಗಳಿಂದಲೂ ಕೃಷ್ಣಯ್ಯನಕಟ್ಟೆಯ ನೀರಿನಲ್ಲಿ ಜಿಂಕೆ ಶವ ತೇಲುತ್ತಿತ್ತು. ಆದರೆ, ಅರಣ್ಯ ಇಲಾಖೆಗೆ ಇದರ ಬಗ್ಗೆ ಮಾಹಿತಿಯೇ ಇರಲಿಲ್ಲ. ಈ ಕುರಿತು ‘ಉದಯವಾಣಿ’ಯಲ್ಲಿ ಫೆ.10ರಂದು ‘ಕೃಷ್ಣಯ್ಯನಕಟ್ಟೆಯಲ್ಲಿ ತೇಲುತ್ತಿರುವ ಜಿಂಕೆ ಕಳೇಬರ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಇಲಾಖೆ ಸಿಬ್ಬಂದಿ, ಸೋಮವಾರ ಬೆಳಗ್ಗೆ ಕೃಷ್ಣಯ್ಯನಕಟ್ಟೆಗೆ ಧಾವಿಸಿ ನೀರಿನಲ್ಲಿ ತೇಲುತ್ತಿದ್ದ ಜಿಂಕೆಯ ಕಳೇಬರವನ್ನು ಹೊರ ತೆಗೆದರು. ನಂತರ ಪಶು ವೈದ್ಯ ಡಾ. ರಾಘವೇಂದ್ರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.
ಈ ಭಾಗದಲ್ಲಿ ಸೀಳುನಾಯಿಗಳು ಹೆಚ್ಚಾಗಿವೆ. ಅವು ಗುಂಪುಗುಂಪಾಗಿ ಜಿಂಕೆಗಳ ಮೇಲೆ ದಾಳಿ ನಡೆಸುತ್ತವೆ. ಹೀಗಾಗಿ ಸೀಳುನಾಯಿಗಳ ದಾಳಿಯಿಂದ ರಕ್ಷಿಸಿಕೊಳ್ಳಲು ಜಿಂಕೆ ನೀರಿಗಿಳಿದರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಮರಣೋತ್ತರ ವರದಿ ಬಂದ ಮೇಲೆ ಖಚಿತವಾಗಿ ಏನಾಗಿದೆ ಎಂಬುದು ತಿಳಿಯಲಿದೆ. ಈಗ ಕಳೇಬರವನ್ನು ಸುಟ್ಟು ಹಾಕಲಾಗಿದೆ ಎಂದು ಅರಣ್ಯ ಇಲಾಖೆಯ ರಘುರಾಮ್ ತಿಳಿಸಿದ್ದಾರೆ.
ಬಿಆರ್‌ಟಿ ಅರಣ್ಯ ಧಾಮವು ರಾಜ್ಯದಲ್ಲಿ ವಿಶಿಷ್ಟ ಕಾಡು ಪ್ರಭೇಧವನ್ನು ಒಳಗೊಂಡಿದೆ. ಈಗ ಬೇಸಿಗೆ ಕಾಲವಾಗಿದೆ. ಈಗಾಗಲೇ ಬೆಂಕಿರೇಖೆಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ನಿರ್ಮಿಸಿದ್ದಾರೆ. ಆದರೂ ಬೆಂಕಿ ಅವಘಡಗಳನ್ನು ಸಂಭವಿಸದಂತೆ ಕಾಯ್ದುಕೊಳ್ಳಲು ಕಟ್ಟೆಚ್ಚರ ವಹಿಸಬೇಕಿದೆ. ಆದರೂ ಅಲ್ಲಲ್ಲಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತದೆ. ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಇರುವ ನೀರನ್ನು ಸಂರಕ್ಷಿಸಿಕೊಳ್ಳಬೇಕು ಎಂಬುದು ಪರಿಸರಪ್ರಿಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ
Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್ ಆಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.