ಬಂಡೀಪುರದಲ್ಲಿ ಬೆಂಕಿರೇಖೆ ನಿರ್ಮಾಣ ಶೀಘ್ರ ಪೂರ್ಣ


Team Udayavani, Feb 14, 2018, 4:01 PM IST

cham-1.jpg

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದ 13 ವಲಯ ಗಳಲ್ಲಿಯೂ ಫೈರ್‌ಲೈನ್‌ (ಬೆಂಕಿರೇಖೆ) ನಿರ್ಮಾಣ ಕಾರ್ಯ ಮುಕ್ತಾಯದ ಹಂತದಲ್ಲಿದೆ. ಪ್ರತಿ ವರ್ಷ ಬೇಸಿಗೆಯಲ್ಲಿ ಬೆಂಕಿ ಆಕಸ್ಮಿಕದಿಂದ ಸಾಕಷ್ಟು ವನ್ಯ ಸಂಪತ್ತು, ಸಣ್ಣ ಜೀವಿಗಳು ಭಸ್ಮವಾಗುತ್ತಿದ್ದವು. ಇದನ್ನು ತಪ್ಪಿಸಲು ಕಳೆದ ಎರಡು ಮೂರು ವರ್ಷಗಳಿಂದ ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ. ಈ ಬಾರಿ ಹೆಚ್ಚಿನ ಜಾಗ್ರತೆವಹಿಸಿದ್ದು, ಕೆಲವು ಕಡೆ ಎರಡು ಬಾರಿ ಬೆಂಕಿ ರೇಖೆ ನಿರ್ಮಿಸುತ್ತಿದೆ.

ಮಾರ್ಚ್‌ 2014ರಲ್ಲಿ ಬಂಡೀಪುರಕ್ಕೆ ಹಾಗೂ 2017 ಫೆಬ್ರವರಿಯಲ್ಲಿ ಕಲ್ಕೆರೆಗೆ ಆಕಸ್ಮಿಕವಾಗಿ ಬಿದ್ದ ಬೆಂಕಿಯು ನಿಯಂತ್ರಣಕ್ಕೆ ಬಾರದೆ ಸಾವಿರಾರು ಎಕರೆಯಲ್ಲಿನ ವನ್ಯ ಸಂಪತ್ತು ನಾಶವಾಗಿತ್ತು. ಕಳೆದ ವರ್ಷ ಬಿದ್ದ ಉತ್ತಮ ಮಳೆಯಿಂದ ಗಿಡ ಮರಗಳು ಎಲೆಗಳನ್ನು ತುಂಬಿಕೊಂಡು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದವು. ಪ್ರಾಣಿಗಳಿಗೂ ಆಹಾರ ಸಿಕ್ಕಿತ್ತು. ಇದೀಗ ಬೇಸಿಗೆ ಆರಂಭವಾಗುತ್ತಿದ್ದು, ಮರಗಳು ಎಲೆ ಉದುರಿಸಲಾರಂಭಿಸಿವೆ. ಹಸಿರು ಹುಲ್ಲು ಒಣಗಿನಿಂತಿದೆ.

ಈ ಬಾರಿ ಬೇಸಿಗೆ ಪ್ರಾರಂಭವಾಗುವ ಮೊದಲೇ ಮೇಲುಕಾಮನಹಳ್ಳಿ ಬಳಿಯಿಂದ ಕೆಕ್ಕನಹಳ್ಳ, ಮದ್ದೂರಿನಿಂದ ಮೂಲೆಹೊಳೆ ವರೆಗಿನ ರಸ್ತೆ ಬದಿಯಲ್ಲಿನ ಒಣ ಹುಲ್ಲು ಹಾಗೂ ಬಳ್ಳಿ ಸುಡುವ ಕಾರ್ಯ ಭರದಿಂದ ಸಾಗಿದೆ. ಜನವರಿ ಮೊದಲನೇ ವಾರದಲ್ಲಿ ಮೊದಲಿಗೆ ಲಂಟಾನ ಹಾಗೂ ಕಳೆಗಳನ್ನು ತೆರವುಗೊಳಿಸಲಾಯಿತು. ಅಲ್ಲದೆ, ಕಾಡಿ ನೊಳಗೂ ಬೆಂಕಿಯು ವ್ಯಾಪಿಸಲು ಸಾಧ್ಯವಾಗದಂತೆ ಫೈರ್‌ಲೈನ್‌ ನಿರ್ಮಾಣ ಮಾಡಲಾಗಿದೆ. 

ಈ ಕಾರ್ಯವನ್ನು ಫೆಬ್ರವರಿ ತಿಂಗಳೊಳಗೆ ಮುಗಿಸಲು ನಿರ್ಧರಿಸಲಾಗಿದ್ದು, ಉದ್ಯಾನದ 13 ವಲಯಗಳಲ್ಲಿಯೂ 300 ಇಲಾಖೆಯ ಸಿಬ್ಬಂದಿ ಜೊತೆಗೆ ದಿನಗೂಲಿ ನೌಕರರನ್ನು ಬಳಸಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ. ಕಳೆದ ಕೆಲವು ದಿನಗಳಿಂದಲೂ ಪ್ರತಿ ದಿನವೂ 25 ರಿಂದ 40 ದಿನಗೂಲಿ ನೌಕರರ ನೆರವಿನಿಂದ ಕನಿಷ್ಠ ದಿನಕ್ಕೆ 5 ಕಿ.ಮೀ. ಫೈರ್‌ಲೈನ್‌ ರಚನೆ ಮಾಡಲಾಗುತ್ತಿದೆ.

 ದಿನೇ ದಿನೆ ಬಿಸಿಲಿನ ಝಳ ಹೆಚ್ಚಾಗುತ್ತಿದೆ. ಬೆಂಕಿಯ ಶಾಖದಿಂದ ಹೆಚ್ಚಿನ ಪ್ರಮಾಣದ ನೀರಿನ ಅಗತ್ಯವಿದೆ. ಫೈರ್‌ಲೈನ್‌ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ ಪ್ರತಿ ಸಿಬ್ಬಂದಿಗೂ 5 ಲೀಟರ್‌ ನೀರಿನ ಕ್ಯಾನ್‌ ಒದಗಿಸಲಾಗಿದೆ. ಬೆಂಕಿಯು ನಿಗದಿತ ರೇಖೆಯಿಂದ ಬೇರೆಡೆಗೆ ಹರಡದಂತೆ ಹಸಿರು ಸೊಪ್ಪು ಹಾಗೂ ಬಳ್ಳಿಯಿಂದ ಬಡಿದು ಆರಿಸುವ, ಸಾಧ್ಯವಾಗದಿದ್ದಲ್ಲಿ ನೀರು ಹಾಕಿ ನಿಯಂತ್ರಿಸುವ ಕೆಲಸ ಎಚ್ಚರಿಕೆಯಿಂದ ಮಾಡಲಾಗುತ್ತಿದೆ. ಇದಕ್ಕಾಗಿ ಟ್ಯಾಂಕರ್‌ಗಳಲ್ಲಿ ನೀರನ್ನು ಕೊಂಡೊಯ್ಯಲಾಗುತ್ತಿದೆ.

ಸ್ವಯಂಸೇವಾ ಸಂಸ್ಥೆಗಳ ನೆರವಿನಿಂದ ನೀಡಲಾದ ಬೆಂಕಿ ನಂದಿಸುವ ಉಪಕರಣಗಳನ್ನು ಬಳಕೆ ಮಾಡಲಾಗುತ್ತಿದ್ದು, ಟ್ರ್ಯಾಕ್ಟರ್‌ಗಳಿಗೆ ಟ್ಯಾಂಕರ್‌ ಅಳವಡಿಸಿ ನೀರು ತುಂಬಿಸಿಟ್ಟುಕೊಳ್ಳಲಾಗಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಎಲ್ಲಾ ವಲಯ ಗಳಲ್ಲಿಯೂ ಫೈರ್‌ಲೈನ್‌ ನಿರ್ಮಾಣ ಕಾರ್ಯ ಕೊನೆ ಹಂತ ದಲ್ಲಿದೆ. ಅರಣ್ಯ ನಾಶದ ಬಗ್ಗೆ ಅರಿವು ಮೂಡಿಸುವ ಮೂಲಕ ಕಾಡಂಚಿನ ಗ್ರಾಮಗಳ ಜನರ ಸಹಕಾರ ಪಡೆಯಲಾಗುತ್ತಿದೆ. ಸದ್ಯ ಮರಗಳಿಂದ ಉದುರುತ್ತಿರುವ ಎಲೆಗಳಿಗೆ ಮತ್ತೂಮ್ಮೆ ಬೆಂಕಿಯಿಟ್ಟು ಸುಟ್ಟುಹಾಕ ಲಾಗುತ್ತಿದೆ. ಈ ಬಾರಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.
ಅಂಬಾಡಿ ಮಾಧವ್‌, ನಿರ್ದೇಶಕ, ಹುಲಿಯೋಜನೆ, ಬಂಡೀಪುರ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.