ಗ್ರಾಮಸಭೆಯಿಂದ ಸಮಸ್ಯೆ ಇತ್ಯರ್ಥಕ್ಕೆ ಚಿಂತನೆ
Team Udayavani, Apr 29, 2019, 3:00 AM IST
ಕೊಳ್ಳೇಗಾಲ: ಲೋಕಸಭಾ ಚುನಾವಣೆಯ ನೀತಿ ಸಂಹಿತೆ ತೆರವಾದ ಕೂಡಲೇ ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮಸಭೆ ಏರ್ಪಡಿಸಿ ಗ್ರಾಮಸ್ಥರ ಸಮಸ್ಯೆಗಳನ್ನು ಇತ್ಯರ್ಥಪಡಿಸುವುದಾಗಿ ರಾಜ್ಯ ಬಿಎಸ್ಪಿ ಉಸ್ತುವಾರಿ ಹಾಗೂ ಶಾಸಕ ಎನ್.ಮಹೇಶ್ ಹೇಳಿದರು.
ನಗರದ ತಮ್ಮ ನಿವಾಸದ ಬಳಿ ಭಾನುವಾರ ಏರ್ಪಡಿಸಿದ್ದ ಕ್ಷೇತ್ರದ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಮತದಾರರು ನನ್ನ ಮೇಲೆ ಅಪಾರ ನಿರೀಕ್ಷೆ ಹೊಂದಿದ್ದಾರೆ. ಅವರ ನಿರೀಕ್ಷೆಗಳನ್ನು ಪೂರೈಸುವ ಸಲುವಾಗಿ ಈ ರೀತಿಯ ಕಾರ್ಯಕ್ರಮವೊಂದನ್ನು ರೂಪಿಸುವ ಪ್ರಯತ್ನ ಮಾಡುತ್ತಿದ್ದು, ಪ್ರತಿದಿನ ಎರಡು ಗ್ರಾಪಂಗಳಲ್ಲಿ ಎಲ್ಲಾ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದರು.
ಮೇ ತಿಂಗಳಲ್ಲಿ ಜಿಲ್ಲೆಯ ಎಲ್ಲಾ ವೈದ್ಯರ ಸಹಕಾರದೊಂದಿಗೆ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮವನ್ನು ರೂಪಿಸಿ ಗ್ರಾಮಸ್ಥರ ಆರೋಗ್ಯ ಕಾಪಾಡಲು ಮುಂದಾಗುವುದಾಗಿ ಹೇಳಿದ ಅವರು, ಕಾರ್ಯಕರ್ತರು ಗಾಳಿ ಮಾತುಗಳಿಗೆ ಕಿವಿಗೊಡದೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಹೆಚ್ಚು ಸಂಘಟಿತರಾಗಬೇಕು ಎಂದು ಕಾರ್ಯಕರ್ತರಿಗೆ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಡಾ. ಶಿವಕುಮಾರ್ ರವರನ್ನು ಕಣಕ್ಕೆ ಇಳಿಸಿದ ವೇಳೆ ಕ್ಷೇತ್ರದ ಜನರು ಮೆಚ್ಚುಗೆ ವ್ಯಕ್ತಪಡಿಸಿ ಉತ್ತಮ ಪ್ರತಿಕ್ರಿಯೆ ತೋರುವ ಮೂಲಕ ಮತ ನೀಡಿದ್ದಾರೆ. ಮತದಾರರ ಕುಂದುಕೊರತೆ ನಿವಾರಣೆ ಮಾಡುವಲ್ಲಿ ಯಾವಾಗಲು ಹಿಂದೆ ಸರಿಯುವುದಿಲ್ಲ ಎಂದು ಮತದಾರರಿಗೆ ಕೃತಜ್ಞತೆ ಹೇಳಿದರು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಣ ಬಲದ ಜೊತೆಗೆ ಸ್ವಾಭಿಮಾನ ಬಲವನ್ನು ಮತದಾರರು ಕಂಡಿದ್ದು, ಮತದಾರರು ಹಣ ಬಲಕ್ಕೆ ಮಾರು ಹೋಗದೆ ಬಿಎಸ್ಪಿ ಸ್ವಾಭಿಮಾನ ಬಲಕ್ಕೆ ಪ್ರಾಮುಖ್ಯತೆ ನೀಡಿದ್ದಾರೆ. ಕಾಂಗ್ರೆಸಿಗರು ಗಾಳಿ ಸುದ್ದಿ ಹಬ್ಬಿಸುವಲ್ಲಿ ನಿಸ್ಸೀಮರು ಎಂದು ದೂರಿದರು.
ರಾಜ್ಯ ಬಿಎಸ್ಪಿ ಉಸ್ತುವಾರಿಯನ್ನು ಪಕ್ಷದ ವರಿಷ್ಠರು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ಕೃತಜ್ಞತೆ ಅರ್ಪಿಸಬೇಕಾಗಿದ್ದು, ಎಲ್ಲಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಮತದಾರರಿಗೆ ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಹೇಳಿದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಡಾ. ಶಿವಕುಮಾರ್ ಮಾತನಾಡಿ, ನಿರಂತರ ಚಳುವಳಿಯಲ್ಲಿ ಬಾಗಿಯಾಗಿ ಹೋರಾಟ ಮಾಡಿ ಪಕ್ಷವನ್ನು ಮತ್ತಷ್ಟು ಬಲವರ್ಧನಗೆ ಪ್ರಯತ್ನಿಸುವುದಾಗಿ ಹೇಳಿದ ಅವರು ಬಿಎಸ್ಪಿ ಅಭ್ಯರ್ಥಿ ಉತ್ತಮ ಅಭ್ಯರ್ಥಿ ಎಂದು ಪರಿಗಣಿಸಿ ಕ್ಷೇತ್ರ ವ್ಯಾಪಿ ಉತ್ತಮ ಪ್ರತಿಕ್ರಿಯೆ ತೋರದ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು.
ಕಡಿಮೆ ಅವಧಿಯಲ್ಲಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು, ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಸ್ಪಂದನೆ ಲಭಿಸಿದೆ ಮತ್ತು ಕ್ಷೇತ್ರ ವ್ಯಾಪಿ ಕಾರ್ಯಕರ್ತರು ಪ್ರಚಾರದಲ್ಲಿ ತೊಡಗಿ ಉತ್ತಮ ಮತ ಗಳಿಸುವಲ್ಲಿ ಯಶಸ್ವಿಯಾಗಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೂ ಇದೇ ರೀತಿಯ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಕಾರ್ಯಕರ್ತರ ಮತ್ತು ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ರಾಜ್ಯ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಮಾದೇಶ್ ಉಪ್ಪಾರ, ಜಿಲ್ಲಾ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ವಲಯ ಅಧ್ಯಕ್ಷ ಕರಾಟೆ ಸಿದ್ಧರಾಜು, ಜಿಲ್ಲಾ ಉಪಾಧ್ಯಕ್ಷ ಸೋಮಣ್ಣ ಉಪ್ಪಾರ್,
ತಾಲೂಕು ಅಧ್ಯಕ್ಷ ಶಿವನಂಜಪ್ಪ, ಕ್ಷೇತ್ರ ಅಧ್ಯಕ್ಷ ಸಿದ್ಧರಾಜು, ನಗರಸಭಾ ಸದಸ್ಯರಾದ ನಾಸೀರ್ ಷರೀಪ್, ಜಯರಾಜು, ಪ್ರಕಾಶ್, ಜಯಮೇರಿ, ಟೌನ್ ಅದ್ಯಕ್ಷ ಜಕಾವುಲ್ಲಾ, ಮುಖಂಡರಾದ ಮಹದೇವಸ್ವಾಮಿ ನಾಯಕ, ನಟರಾಜು, ಸೆಲ್ವರಾಜ್, ಜಗದೀಶ್, ರಾಜಶೇಖರಮೂರ್ತಿ, ಹಣ್ಣು ಮತ್ತು ತರಕಾರಿ ಮಾಲೀಕರ ಸಂಘದ ಅಧ್ಯಕ್ಷ ಸಮೀವುಲ್ಲಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.