10 ಹಳ್ಳಿಯ 18 ಕೋಮಿನವರು ಆಚರಿಸುವ ಗ್ರಾಮಹಬ್ಬ
Team Udayavani, Mar 11, 2019, 7:41 AM IST
ಸಂತೆಮರಹಳ್ಳಿ: ಗ್ರಾಮೀಣ ಭಾಗದಲ್ಲಿ ಇನ್ನೂ ಕೆಲವೆಡೆ ಸೌಹಾರ್ದತೆಯು ಜೀವಂತವಾಗಿದೆ. ಇದಕ್ಕೆ ಅಗರ-ಮಾಂಬಳ್ಳಿ ಗ್ರಾಮದಲ್ಲಿ ನಡೆಯುವ ಧಾರ್ಮಿಕ ಉತ್ಸವಗಳೇ ಸಾಕ್ಷಿಯಾಗಿದ್ದು ಈ ಪ್ರಜ್ಞೆ ಎಲ್ಲಾ ಕಡೆ ಮೂಡಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು.
ತಾಲೂಕಿನ ಅಗರ-ಮಾಂಬಳ್ಳಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹಿಂಡಿ ಮಾರಮ್ಮ ದೇಗುಲದ 15ನೇ ವರ್ಷದ ವಾರ್ಷಿಕೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸೌಹಾರ್ದತೆ ಹಬ್ಬ: ನಾಡು ದೇಶದ ವತಿಯಿಂದ ಅಗರ, ಮಾಂಬಳ್ಳಿ, ಕಿನಕಹಳ್ಳಿ, ಕಟ್ನವಾಡಿ, ಬಸವಾಪುರ, ಬನ್ನಿಸಾರಿಗೆ ಚಿಕ್ಕ ಉಪ್ಪಾರಬೀದಿ ಮತ್ತಿತರ ಗ್ರಾಮಗಳ 18 ಕೋಮಿನ ಜನರು ಪ್ರತಿ ವರ್ಷ ಸೌಹಾರ್ದತೆಯಿಂದ ಹಬ್ಬ ಆಚರಿಸಿಕೊಂಡು ಬರುತ್ತಿದ್ದಾರೆ. ಜೊತೆಗೆ 15 ವರ್ಷದ ವಾರ್ಷಿಕೋತ್ಸವ ನಿಮಿತ್ತ ಇಲ್ಲಿ 14 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡುತ್ತಿರುವುದು ಶ್ಲಾಘನೀಯ ಎಂದರು.
ನೆರವು: ಸಂಸದ ಆರ್. ಧ್ರುವನಾರಾಯಣ ಮಾತನಾಡಿ, ವಿವಾಹಗಳು ಅದ್ಧೂರಿಯಾಗುತ್ತಿವೆ. ಬಡವರು ಹಣ ಖರ್ಚು ಮಾಡಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲಿ ಬಡ ವಧುವರರಿಗೆ ನೆರವಾಗಬಲ್ಲ ಇಂತಹ ಸಾಮೂಹಿಕ ವಿವಾಹ ಕಾರ್ಯಕ್ರಮ ಮಾದರಿಯಾಗಿದೆ.
ಜಾತ್ಯತೀತವಾಗಿ ಬಡವರ ಪರವಾಗಿ ನಡೆಯುವ ಇಂತಹ ಕಾರ್ಯಕ್ರಮಗಳು ಇತರರಿಗೆ ಮಾದರಿಯಾಗಬೇಕು. ಇಂತಹ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೆರವು ಹಾಗೂ ಉತ್ತೇಜನ ನೀಡಬೇಕು ಎಂದು ಸಲಹೆ ನೀಡಿದರು. ಇದೇ ವೇಳೆ, ಅವರು ನವಜೋಡಿಗಳಿಗೆ ಉಡುಗೊರೆ ನೀಡುವ ಮೂಲಕ ಶುಭ ಹಾರೈಸಿದರು.
ಜಾತ್ಯತೀತ ಕಾರ್ಯಕ್ರಮ: ಶಾಸಕ ಎನ್. ಮಹೇಶ್ ಮಾತನಾಡಿ, ಹಿಂಡಿ ಮಾರಮ್ಮ ದೇಗುಲ ಈ ಭಾಗದ ಶಕ್ತಿ ದೇವರಾಗಿದೆ. ಇಲ್ಲಿಗೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಪ್ರತಿ ವರ್ಷ ಕಾರ್ತೀಕ ಮಾಸದಲ್ಲಿ ಹಲವು ದಿನ ಹಬ್ಬ ಆಚರಿಸುವ ವಾಡಿಕೆ ಇದೆ. ಜಾತ್ಯತೀತವಾಗಿ ನಡೆಯುವ ಇಂತಹ ಸಾಮೂಹಿಕ ವಿವಾಹಗಳು ಇಡೀ ಸಮಾಜಕ್ಕೆ ಒಂದು ಒಳ್ಳೆ ಸಂದೇಶವನ್ನು ನೀಡುತ್ತದೆ.
ಇಂತಹ ವೈವಾಹಿಕ ಕಾರ್ಯಕ್ರಮ ನಡೆಸುತ್ತಿರುವ ದೇವಸ್ಥಾನದ ಆಡಳಿತ ಮಂಡಲಿಯ ಕಾರ್ಯ ಶ್ಲಾಘನೀಯವಾಗಿದೆ. ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಇಲ್ಲಿನ ಜನರು ಇತರರಿಗೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಗೀತೆಗಾಯನ: ಸಮರ್ಪಣ ಸಂಸ್ಥೆಯ ವತಿಯಿಂದ ಖ್ಯಾತ ಗಾಯಕರಾದ ಶಶಿಧರ್ ಕೋಟೆ, ಎಚ್. ಫಲ್ಗುಣ, ಬಿ. ಬಸವರಾಜು ಅವರು ನಡೆಸಿಕೊಟ್ಟ ಭಕ್ತಿ ಗೀತೆ ಹಾಗೂ ಭಾವಗೀತೆ ಕಾರ್ಯಕ್ರಮಗಳು ಮನಸೊರೆಗೊಂಡವು. ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.
ಕಾರ್ಯಕ್ರಮಲ್ಲಿ ಮಾಜಿ ಶಾಸಕ ಎಸ್.ಜಯಣ್ಣ, ಎಸ್.ಬಾಲರಾಜು, ಎ.ಆರ್.ಕೃಷ್ಣಮೂರ್ತಿ, ಜಿ.ಎನ್. ನಂಜುಂಡಸಾವ್ವಿು, ಜಿಪಂ ಉಪಾಧ್ಯಕ್ಷ ಜೆ. ಯೋಗೇಶ್, ಸದಸ್ಯೆ ಎನ್.ಉಮಾವತಿ, ತಾಪಂ ಅಧ್ಯಕ್ಷ ನಿರಂಜನ್, ಉಪಾಧ್ಯಕ್ಷೆ ಮಲ್ಲಾಜಮ್ಮ, ಸದಸ್ಯರಾದ ವೆಂಕಟೇಶ್, ಸಿದ್ದರಾಜು, ಅಗರ ಗ್ರಾಪಂ ಅಧ್ಯಕ್ಷ ರಾಚಯ್ಯ, ನಾಡುದೇಶ ಗೌಡರಾದ ಎಂ.ಸಿ.ರಮೇಶ್, ಎಸ್.ಗುರುಸ್ವಾಮಿ, ರವಿಕುಮಾರ್, ಮಹದೇವಸ್ವಾಮಿ, ಮಾಂಬಳ್ಳಿ ನಂಜುಂಡಸ್ವಾಮಿ, ಬಸವರಾಜು, ಸಿದ್ದರಾಜು, ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.