ಖಾಯಂ ತಹಶೀಲ್ದಾರ್ ಇಲ್ಲದೇ ಪ್ರಗತಿ ಇಲ್ಲ

Team Udayavani, Feb 8, 2020, 2:19 PM IST

cn-tdy-1

ಯಳಂದೂರು: ತಾಲೂಕಿಗೆ ಕಾಯಂ ತಹಶೀಲ್ದಾರ್‌ ಹುದ್ದೆ ನೇಮಕವಾಗದೇ ಕಳೆದ ಒಂದು ತಿಂಗಳಿಂದ ಪ್ರಭಾರ ತಹಶೀಲ್ದಾರ್‌ ಸೇವೆ ಸಲ್ಲಿಸುತ್ತಿದ್ದಾರೆ. ಇದರಿಂದ ನಿರೀಕ್ಷಿತ ಅಭಿವೃದ್ಧಿ ಕಾರ್ಯಗಳು ಆಮೆ ವೇಗದಲ್ಲಿ ಸಾಗುತ್ತಿವೆ. ಕಾಯಂ ತಹಶೀಲ್ದಾರ್‌ ನೇಮಕ ಯಾವಾಗ ಎಂಬ ಪ್ರಶ್ನೆ ತಾಲೂಕಿನ ಸಾರ್ವಜನಿಕರಲ್ಲಿ ಮೂಡಿದೆ.

ರಾಜ್ಯದಲ್ಲೇ ಅತ್ಯಂತ ಚಿಕ್ಕ ತಾಲೂಕು ಎಂದು ಯಳಂದೂರು ಗುರುತಿಸಿಕೊಂಡಿದೆ. 33 ಗ್ರಾಮಗಳನ್ನು ಒಳಗೊಂಡಿರುವ ಪುಟ್ಟ ತಾಲೂಕಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ಜನಾಂಗದ ಜನರೇ ಹೆಚ್ಚು ವಾಸ ಮಾಡುತ್ತಿದ್ದಾರೆ. ಆದರೆ, ಕನಿಷ್ಠ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಒಂದು ತಾಲೂಕು ಎನಿಸಿಕೊಳ್ಳಲು ಅಗತ್ಯವಿರುವ ಕನಿಷ್ಠ ಮೂಲ ಸೌಲಭ್ಯ ಇರಬೇಕು. ಆದರೆ, ಯಳಂದೂರು ತಾಲೂಕಿನಲ್ಲಿ ಮೂಲ ಸೌಲಭ್ಯ ಮರಿಚೀಕೆಯಾಗಿರುವುದು ವಿಪರ್ಯಾಸವಾಗಿದೆ.

ಅಭಿವೃದ್ಧಿ ಕಾರ್ಯಗಳಿಗೆ ತೊಂದರೆ: ಈ ಹಿಂದೆ ವರ್ಷಾ ಅವರು ಕಾಯಂ ತಹಶೀಲ್ದಾರ್‌ ಸೇವೆ ಸಲ್ಲಿಸಿ, ನಂತರ ಕನಕಪುರ ತಾಲೂಕಿಗೆ ಡಿ.31ರಂದು ವರ್ಗಾವಣೆಗೊಂಡರು. ತಹಶೀಲ್ದಾರ್‌ ಮಹೇಶ್‌ ಕಳೆದ ಒಂದು ತಿಂಗಳಿಂದಲೂ ಪ್ರಭಾರ ತಹಶೀಲ್ದಾರ್‌ ರಾಗಿ ಚಾಮರಾಜನಗರ ಹಾಗೂ ಯಳಂದೂರು ತಾಲೂಕು ಸೇರಿ ಎರಡು ಕಡೇ ಸೇವೆ ಸಲ್ಲಿಸುತ್ತಿದ್ದಾರೆ. ಇದರಿಂದಅಭಿವೃದ್ಧಿಕಾರ್ಯಕ್ಕೆ ಎರಡು ಕಡೆಗಳಲ್ಲೂ ತೊಂದರೆಯಾಗುತ್ತಿದೆ. ಜೊತೆಗೆ ಮೇ 27ರಂದು ಬಿಳಿಗಿರಿ ರಂಗನಾಥ ಸ್ವಾಮಿ ದೇವಸ್ಥಾನದ ಮಹಾ ಸಂಪ್ರೋಕ್ಷಣೆ ಕಾರ್ಯಕ್ರಮ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ನಡೆಯುವುದರಿಂದ ಅಗತ್ಯ ಸಿದ್ಧತೆಗಳನ್ನು ರೂಪಿಸಲು ತಹಶೀಲ್ದಾರ್‌ ಪಾತ್ರ ಹಿರಿದಾಗಿದ್ದು, ತೊಂದರೆಯಾಗುವ ಅಪಾಯವಿದೆ.

ಸೇವೆಗಳಿಗೆ ಆಮೆ ವೇಗ: ಜಾತಿ ಮತ್ತು ಆದಾಯ ದೃಢೀಕರಣ ಪತ್ರ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕರ ಪೋಷಣಾ ಭತ್ಯೆ, ವಿಧವಾ ವೇತನ, ಭೂ ರಹಿತ ದೃಢೀಕರಣ ಪತ್ರ, ಪಹಣಿ, ವಾಸಸ್ಥಳ ಪತ್ರ, ಜನನ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಭೂ ಹಿಡುವಳಿ ದೃಢೀಕರಣ ಪತ್ರ, ಆಧಾರ್‌ ನೋಂದಾಣಿ, ಪಡಿತರ ಚೀಟಿ ಸೇರಿದಂತೆ 100ಕ್ಕೂ ಹೆಚ್ಚು ಯೋಜನೆಗಳ ಸೌಲಭ್ಯಗಳು ತಾಲೂಕಿನ ಜನರಿಗೆ ಆಮೆವೇಗದಲ್ಲಿ ಸಾಗುತ್ತಿದ್ದು, ಇದರಿಂದ ಅಭಿವೃದ್ಧಿ ಕಾರ್ಯಗಳು ವಿಳಂಬವಾಗಿದೆ ಎಂಬ ಆರೋಪಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.

ಭ್ರಷ್ಟಾಚಾರದ ಆರೋಪ: ಕಂದಾಯ ವಿಭಾಗದ ಆಡಳಿತ ವ್ಯವಸ್ಥೆಯಲ್ಲಿ ಕಾಯಂ ತಹಶೀಲ್ದಾರ್‌ ಇಲ್ಲದ ಪರಿಣಾಮ ಭ್ರಷ್ಟಾಚಾರವು ಹೆಚ್ಚಾಗಿ ಕಂಡು ಬರುತ್ತಿರುವ ಆರೋಪಗಳು ಕೇಳಿ ಬರುತ್ತಿವೆ. ಯರಿಯೂರು ಗ್ರಾಮದ ನಿವಾಸಿ ಎಸ್‌. ನಾಗರಾಜು ಕಳೆದ ಡಿಸೆಂಬರ್‌ 23ರಂದು ರಾಜಸ್ವ ನಿರೀಕ್ಷಕರ ಮೇಲೆ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಇವರು ಮೇಲೆ ಋಣಮುಕ್ತ ಅರ್ಜಿ ವಿಷಯಕ್ಕೆ ಸಂಬಂಧಿಸಿದಂತೆ ಲಂಚವನ್ನು ಕೇಳಿದೆ. ಈ ಬಗ್ಗೆ ಹಿಂದಿನ ತಹಶೀಲ್ದಾರ್‌ ಅವರಿಗೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ವಹಿಸಲಿಲ್ಲ. ಈ ಬಗ್ಗೆ ಲೋಕಾಯುಕ್ತ ಇನ್ಸ್‌ಪೆಕ್ಟರ್‌ಗೆ ದೂರು ಸಲ್ಲಿಸಲಾಗಿದೆ. ಕಾಯಂ ತಹಶೀಲ್ದಾರ್‌ ಇಲ್ಲದಿರುವುದರಿಂದ ಮತ್ತಷ್ಟು ತೊಂದರೆಯಾಗಬಹುದು ಎಂಬ ಆತಂಕ ಸಾರ್ವಜನಿಕರಲ್ಲಿ ಮೂಡಿದೆ.

ಯಳಂದೂರು ತಾಲೂಕಿಗೆ ತಹಶೀಲ್ದಾರ್‌ ಅವರು ಪ್ರಭಾರಿಯಾಗಿದ್ದಾರೆ. ಇಲ್ಲಿನ ಸಮಸ್ಯೆ ನಿವಾರಣೆಗೆ ಕಾಯಂ ತಹಶೀಲ್ದಾರ್‌ ನೇಮಕಕ್ಕೆ ಪತ್ರ ಬರೆದು ಕ್ರಮ ವಹಿಸಲಾಗುವುದು. ಎಂ.ಆರ್‌. ರವಿ, ಜಿಲ್ಲಾಧಿಕಾರಿ

-ಫೈರೋಜ್‌ ಖಾನ್

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.