ನಿಗಮದಿಂದ ಗ್ರಾಮದಲ್ಲೇ ಕೌಶಲ್ಯ ತರಬೇತಿ ನೀಡಲು ಚಿಂತನೆ

ಜಿಲ್ಲೆಯಲ್ಲಿ ವಿವಿಧ ಯೋಜನೆಯಡಿ 2146 ಮಂದಿಗೆ 16 ಕೋಟಿ ರೂ. ಸಾಲ: ರಘು ಕೌಟಿಲ್ಯ

Team Udayavani, Sep 19, 2021, 3:25 PM IST

ನಿಗಮದಿಂದ ಗ್ರಾಮದಲ್ಲೇ ಕೌಶಲ್ಯ ತರಬೇತಿ ನೀಡಲು ಚಿಂತನೆ

ಚಾಮರಾಜನಗರ: ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದಿಂದ ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ 2146 ಮಂದಿಗೆ 16 ಕೋಟಿ ರೂ.ವಿವಿಧ ಸಾಲ ನೀಡಲಾಗಿದ್ದು, ಸರ್ಕಾರ ಯೋಜನೆಗಳನ್ನು ಅರ್ಹರಿಗೆ ತಲುಪಿಸಿ ಅವರ ಆರ್ಥಿಕ ಅಭಿವೃದ್ಧಿಗೆ ಹೆಚ್ಚಿನ ಶ್ರಮ ವಹಿಸುತ್ತಿದೆ ಎಂದು ಡಿ. ದೇವರಾಜ ಅರಸು ಅಭಿವೃದ್ಧಿ ನಿಗಮ ಅಧ್ಯಕ್ಷ ಆರ್‌.ರಘು ಕೌಟಿಲ್ಯ ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2017-18 ಸಾಲಿನಲ್ಲಿ ನಿಗಮದಿಂದ ಜಿಲ್ಲೆಯಲ್ಲಿ ಚೈತನ್ಯ ಯೋಜನೆಯ ಸಬ್ಸಿಡಿ ಸಾಲ, ಅರಿವು ಯೋಜನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಫ‌ಲಾನುಭವಿಗಳನ್ನು ಆಯ್ಕೆ ಮಾಡಿ ಅವರಿಗೆ ಸಲವತ್ತು ಕಲ್ಪಿಸಿದೆ. ಕಳೆದ 2 ವರ್ಷದಿಂದ ಕೊರೊನಾದಿಂದಾಗಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸಾಧ್ಯವಾಗಿಲ್ಲ. ಈಗ ಅನುದಾನವನ್ನು ಕ್ರೋಢೀಕರಿಸಿಕೊಂಡು ಸರ್ಕಾರದ ಅನುಮತಿ ಪಡೆದು ಜಿಲ್ಲೆಯಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಫ‌ಲಾನುಭವಿಗಳನ್ನು ಆಯ್ಕೆ ಮಾಡಿ ಸವಲತ್ತು ಕಲ್ಪಿಸುವ ಗುರಿ ನಮ್ಮದಾಗಿದೆ ಎಂದು ತಿಳಿಸಿದರು.

ಗ್ರಾಪಂ ಮಟ್ಟದಲ್ಲಿ ನಿರುದ್ಯೋಗಿ ಯುವಕ ಯುವತಿಯನ್ನು ಗುರುತಿಸಿ ಅವರಿಗೆ ನಿಗಮದಿಂದ ಕೌಶಲ್ಯ ತರಬೇತಿ ನೀಡಿ, ಆಯಾ ಗ್ರಾಮದಲ್ಲಿಯೇ ಅವರು ಸ್ವಾವಲಂಬನೆ ಜೀವನ ನಡೆಸಲು ಅನುಕೂಲ ಮಾಡಿಕೊಡಲು ನಿಗಮ ಚಿಂತನೆ ಮಾಡಿದೆ. ಯುವತಿಯರಿಗೆ ಹೊಲಿಗೆ ಯಂತ್ರ, ಯುವಕರಿಗೆ ಕಂಪ್ಯೂಟರ್‌ ತರಬೇತಿ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾವಲಂಬನೆ ಭಾರತಕ್ಕಾಗಿ ಹಳ್ಳಿಗಳ ಉದ್ಧಾರ ಮತ್ತು ಯುವಕರು ಪಟ್ಟಣಗಳಿಗೆ ವಲಸೆ ಬರುವುದನ್ನು ತಪ್ಪಿಸಲು ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:ಕಾಂಗ್ರೆಸ್‌ನವರಿಗಷ್ಟೇ ನಿರುದ್ಯೋಗ ಕಾಡುತ್ತಿದೆ

ಅಲ್ಲದೇ ಅರಿವು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅವಕಾಶ, ಗಂಗಾಕಲ್ಯಾಣ ಯೋಜನೆಯಡಿ ಸಣ್ಣ ಹಾಗೂ ಅತಿ ಸಣ್ಣ ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಕೊಳವಿ ಬಾವಿ ಕೊರೆಸಿ ಮೋಟರ್‌ ಪಂಪ್‌ಗ್ಳನ್ನು ನೀಡಿ, ಉತ್ತಮ ಕೃಷಿಕರನ್ನಾಗಿ ಮಾಡಲಾಗುತ್ತಿದೆ. ಪ್ರತಿ ವರ್ಷವು ಸಹ ಜಿಲ್ಲೆಗೆ ಒಂದು ಕಂಪನಿಯಿಂದ ಟೆಂಡರ್‌ ಆಹ್ವಾನಿಸಿ ಆ ಮೂಲಕ ಫ‌ಲಾನುಭವಿಗಳಿಗೆ ಸವಲತ್ತು ಕಲ್ಪಿಸಲಾಗಿತ್ತು. ಇದರಿಂದ ಯೋಜನೆ ವಿಳಂಬವಾಗುತ್ತಿತ್ತು. ರೈತರು ಟೆಂಡರ್‌ ಪಡೆದುಕೊಂಡವನ ಬಳಿ ಅಲೆಯಬೇಕಾಗಿತ್ತು. ಇದನ್ನು ತಪ್ಪಿಸಲು ಮೋಟರ್‌ , ಪಂಪ್‌ಸೆಟ್‌ ಮತ್ತು ಬೋರ್‌ವೆಲ್‌ ಕೊರೆಯುವ ಆಯ್ಕೆಯನ್ನು ರೈತರಿಗೆ ನೀಡಲಾಗಿದೆ. ಇನ್ನು ಸೋಲಾರ್‌ ಪ್ಯಾನಲ್‌ ಅಳವಡಿಸಿ ವಿದ್ಯುತ್‌ ಉಳಿತಾಯ ಮಾಡುವ ಕುರಿತು ಸಹ ಚಿಂತನೆ ಮಾಡಲಾಗಿದೆ ಎಂದು ರಘು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ತೆಂಗು ಬೆಳೆಗಾರರ ಸಂಘದ ಉಪಾಧ್ಯಕ್ಷ ಪುಟ್ಟರಸು, ನಿಗಮದ ವ್ಯವಸ್ಥಾಪಕಿ ಶ್ವೇತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪರಿಷತ್‌ಗೆ ಅವಕಾಶ ನೀಡಿದರೆ ಗೆಲುವು: ರಘು ಡಿಸೆಂಬರ್‌ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಯಾಗಿ ಈ ಬಾರಿಯೂ ಸ್ಪರ್ಧೆ ಮಾಡುವವನಿದ್ದೇನೆ. ಪಕ್ಷ ಅವಕಾಶ ನೀಡಿದರೆ ಸ್ಪರ್ಧೆ ಮಾಡಿ ಗೆಲುವು ಸಾಧಿಸುವ ವಿಶ್ವಾಸ ನನ್ನದಾಗಿದೆ ಎಂದು ದೇವರಾಜ ಅರಸು ಅಭಿವೃದ್ಧಿ ನಿಗಮ ಅಧ್ಯಕ್ಷ ಆರ್‌.ರಘು ಕೌಟಿಲ್ಯ ತಿಳಿಸಿದರು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Gundlupete: ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದ ಸವಾರ ಸಾವು

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

Kollegala: ಬೆಂಗಳೂರಿನಿಂದ ತಮಿಳುನಾಡಿಗೆ ತಿಮಿಂಗಿಲದ ವಾಂತಿ ಸಾಗಾಟ… ಇಬ್ಬರ ಬಂಧನ

5

Gundlupete: ಎರಡು ಬೈಕ್ ಗಳ ನಡುವೆ ಅಪಘಾತ; ಇಬ್ಬರು ಸಾವು

10-gundlupete

Gundlupete: ಬೈಕ್ ಸವಾರನ ಮೇಲೆ ದಾಳಿಗೆ ಮುಂದಾದ ಕಾಡಾನೆ

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.