ಅಕ್ರಮವಾಗಿ ಅರಣ್ಯ ಪ್ರವೇಶಿಸಿದ್ದ ಮೂವರ ಬಂಧನ: 2 ನಾಡಬಂದೂಕು, ಮುದ್ದುಗುಂಡು ವಶ
Team Udayavani, Nov 13, 2020, 2:05 PM IST
ಹನೂರು (ಚಾಮರಾಜನಗರ) : ಅಕ್ರಮವಾಗಿ ಅರಣ್ಯ ಪ್ರವೇಶ ಮಾಡಿ ಬೇಟೆಗೆ ಹೊಂಚು ಹಾಕುತ್ತಿದ್ದ 3 ಜನರನ್ನು ಬಂಧಿಸುವಲ್ಲಿ ಕಾವೇರಿ ವನ್ಯಜೀವಿ ವಲಯದ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ತಾಲೂಕಿನ ಗಡಿಯಂಚಿನ ಆತೂರು ಗ್ರಾಮದ ಅಯ್ಯನ್, ಮಾರೀಮುತ್ತು ಮತ್ತು ಶಿವಕುಮಾರ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದು, ಈ 3 ಜನರ ತಂಡ ಅಕ್ರಮವಾಗಿ ಗೋಪಿನಾಥಂ ವಿಭಾಗದ ಮೇಟಗಲು ಅರಣ್ಯ ಪ್ರದೇಶವನ್ನು ಪ್ರವೇಶಿಸಿದ್ದಾರೆ.
ಇದನ್ನು ಗಮನಿಸಿದ ಗುಂಡಪಟ್ಟಿ ಕಳ್ಳಬೇಟೆ ತಡೆ ಶಿಬಿರ ಮತ್ತು ಪುಂಗಂ ಗಸ್ತಿನ ಅರಣ್ಯ ರಕ್ಷಕ ಚಂದ್ರಶೇಖರ್ ಕಂಬಾರ ಗಸ್ತಿನಲ್ಲಿರುವಾಗ ಈ ತಂಡವನ್ನು ಪತ್ತೆ ಹಚ್ಚಿ ಬಂಧನಕ್ಕೊಳಪಡಿಸಿದ್ದಾರೆ. ಈ ವೇಳೆ ಬಂಧಿತರಿಂದ 2 ನಾಡಬಂದೂಕು, 1 ಹೋಂಡಾ ಶೈನ್ ದ್ವಿಚಕ್ರ ವಾಹನ, 2 ಕತ್ತಿ, ತಲೆ ಬ್ಯಾಟರಿ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಳಿಕ ಇವರನ್ನು ವಿಚಾರಣೆಗೊಳಪಡಿಸಿದಾಗ ಈ ಹಿಂದೆ ಜಿಂಕೆ ಬೇಟೆಯಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಅರಣ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.