ಅರಣ್ಯ ಪ್ರದೇಶಕ್ಕೆ ಆಕ್ರಮ ಪ್ರವೇಶ ಮಾಡಿ ಜಿಂಕೆ ಬೇಟೆಯಾಡಿದ್ದ ಮೂವರ ಬಂಧನ
Team Udayavani, Jul 25, 2020, 12:02 PM IST
ಹನೂರು(ಚಾಮರಾಜನಗರ): ಕಾವೇರಿ ವನ್ಯಜೀವಿ ವ್ಯಾಪ್ತಿಯ ಅರಣ್ಯ ಪ್ರದೇಶಕ್ಕೆ ಆಕ್ರಮವಾಗಿ ಪ್ರವೇಶ ಮಾಡಿ ಜಿಂಕೆಯೊಂದನ್ನು ಬೇಟೆಯಾಡಿದ್ದ ಮೂವರು ಆರೋಪಿಗಳನ್ನು ಅರಣ್ಯಾ ಇಲಾಖೆಯ ಅಧಿಕಾರಿಗಳು ಬಂಧಿಸಿ ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಘಟನೆ ಶುಕ್ರವಾರ ಜರುಗಿದೆ.
ಹನೂರು ತಾಲೂಕಿನ ಕುರಟ್ಟಿಹೊಸೂರು ಗ್ರಾಪಂ ವ್ಯಾಪ್ತಿಯ ಡಿಎಲ್ ಪಿಎಸ್ ಪ್ರೊಜೆಕ್ಟ್ ಗ್ರಾಮದ ಕೃಷ್ಣ, ಶ್ರೀನಿವಾಸ್, ಹಾಗೂ ಪುಟ್ಟರಾಜು ಬಂಧಿತ ಆರೋಪಿಗಳಾಗಿದ್ದಾರೆ
ಕೌದಳ್ಳಿ ವಲಯದ ಅರಬಗೆರೆ ಅರಣ್ಯ ಪ್ರದೇಶಕ್ಕೆ ಆಕ್ರಮವಾಗಿ ಪ್ರವೇಶ ಮಾಡಿ ಜಿಂಕೆಯೊಂದನ್ನು ಬೇಟೆಯಾಡಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ವಿನಯ್, ಕಾವೇರಿ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಡಾ.ರಮೇಶ್ಕುಮಾರ್ ಮಾರ್ಗದರ್ಶನದಲ್ಲಿ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಕೊಳ್ಳೇಗಾಲ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.