ಪೌರತ್ವ ತಿದ್ದುಪಡಿ ಕಾನೂನು ವಿರೋಧಿಸಿ ನಾಳೆ ಪ್ರತಿಭಟನೆ

Team Udayavani, Jan 23, 2020, 3:00 AM IST

powratva

ಚಾಮರಾಜನಗರ: ಪೌರತ್ವ ತಿದ್ದುಪಡಿ ಕಾನೂನು, ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ರಾಷ್ಟೀಯ ಜನಸಂಖ್ಯಾ ನೋಂದಣಿ ಕಾಯ್ದೆಗಳನ್ನು ವಿರೋಧಿಸಿ ಜ.24ರಂದು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ದಸಂಸ ಮೈಸೂರು ವಿಭಾಗೀಯ ಸಂಚಾಲಕ ಕೆ. ಸಿದ್ದರಾಜು ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ದಲಿತ ಸಂಘರ್ಷ ಸಮಿತಿಯಿಂದ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಿಎಎ, ಎನ್‌ಆಸಿ ಮತ್ತು ಎನ್‌ಪಿಆರ್‌ ವಿರುದ್ಧ ಧರಣಿ ನಡೆಸಲು ಕರೆ ನೀಡಲಾಗಿದೆ. ಆ ಹಿನ್ನೆಲೆಯಲ್ಲಿ ಜಿಲ್ಲಾ ಶಾಖೆಯು ಧರಣಿ ಹಮ್ಮಿಕೊಂಡು ಬೆಂಬಲ ಸೂಚಿಸುತ್ತಿದೆ. ಈ ಕಾಯ್ದೆಗಳನ್ನು ಜಾರಿ ಮಾಡಿ ಇಲ್ಲಿಯ ಮೂಲ ನಿವಾಸಿಗಳ ಪೌರತ್ವ ಸಾಬೀತು ಮಾಡಲು ದಾಖಲೆಗಳನ್ನು ಕೇಳುವುದು ಸರಿಯಲ್ಲ. ವಲಸೆ ಬಂದಿರುವವರ ದಾಖಲೆಗಳನ್ನು ಕೇಳಿ ಪರಿಶೀಲಿಸಲಿ ಎಂದು ಹೇಳಿದರು.

ಪೊನ್ನಾಚಿ ನಿವಾಸಿಗಳಲ್ಲಿ ದಾಖಲೆಗಳಿಲ್ಲ: ಮಲೆ ಮಹದೇಶ್ವರ ಬೆಟ್ಟದ ವ್ಯಾಪ್ತಿಯ ಪೊನ್ನಾಚಿ ಗ್ರಾಮದಲ್ಲಿ ಕಳೆದ 75 ವರ್ಷಗಳಿಂದ ಜನರು ವಾಸವಿದ್ದಾರೆ. ಅವರ ಬಳಿ ಯಾವುದೇ ದಾಖಲೆಗಳಿಲ್ಲ. ಅರಣ್ಯಾಧಿಕಾರಿಗಳು ಅವರಿಗೆ ಹಕ್ಕು ಪತ್ರ ನೀಡುತ್ತಿಲ್ಲ. ಅರಣ್ಯ ಪ್ರದೇಶದಲ್ಲಿ ಸೋಲಿಗರು ವಾಸವಿದ್ದಾರೆ. ಅವರ ಬಳಿಯೂ ಹಕ್ಕುಪತ್ರವಿಲ್ಲ. 75 ವರ್ಷಗಳಿಂದ ವಾಸವಿರುವವರ ಬಳಿಯೇ ದಾಖಲೆಗಳಿಲ್ಲ.

ಇನ್ನು ನಮ್ಮ ತಂದೆ, ತಾಯಿ, ಅಜ್ಜ ಅಜ್ಜಿಯರ ದಾಖಲೆ ಕೇಳಿದರೆ, ಅನಕ್ಷರಸ್ಥರಾದ ಅವರು ಎಲ್ಲಿಂದ ದಾಖಲೆ ತರಲಾಗುತ್ತದೆ? ಎಂದು ಪ್ರಶ್ನೆ ಮಾಡಿದರು. ಯಾರನ್ನೋ ಗುರಿಯಾಗಿಸಿ ಮೂಲ ನಿವಾಸಿಗಳಾದ ದಲಿತರು, ಅಲೆಮಾರಿಗಳು, ಗಿರಿಜನರಿಗೆ ತೊಂದರೆ ನೀಡುವುದು ಸರಿಯಲ್ಲ. ಎಲ್ಲ ಶೂದ್ರ ಸಮುದಾಯಗಳು ಒಗ್ಗಟ್ಟಿನಿಂದ ಈ ಕಾನೂನುಗಳ ವಾಪಸ್‌ ಪಡೆಯುವಂತೆ ಹೋರಾಟ ಮಾಡಬೇಕು ಎಂದು ಒತ್ತಾಯಿಸಿದರು.

ಆರ್ಥಿಕ ಪರಿಸ್ಥಿತಿ ಕುಸಿತ: ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿದಿದೆ. ಜಿಡಿಪಿ ಕೆಳ ಮಟ್ಟಕ್ಕೆ ಬಂದಿದೆ. ನಿರುದ್ಯೋಗ ತಾಂಡವವಾಡುತ್ತಿದೆ. ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ಸಿಗುತ್ತಿಲ್ಲ. ಹಣದುಬ್ಬರ ಏರುತ್ತಿದೆ ಇವುಗಳ ಬಗ್ಗೆ ಗಮನಹರಿಸಿ, ಪರಿಹರಿಸುವುದನ್ನು ಬಿಟ್ಟು ಧರ್ಮಾಧಾರಿತ ಕಾನೂನುಗಳನ್ನು ಜಾರಿ ಮಾಡಲು ಹೊರಡಿರುವುದು ಸರಿಯಲ್ಲ ಎಂದು ಖಂಡಿಸಿದರು.

ವೈಫ‌ಲ್ಯ ಮುಚ್ಚಿಕೊಳ್ಳಲು ಕಾನೂನು ಜಾರಿ: ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸೈಯದ್‌ ಆರೀಫ್ ಮಾತನಾಡಿ, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ತನ್ನ ಆಡಳಿತ ವೈಫ‌ಲ್ಯವನ್ನು ಮುಚ್ಚಿಕೊಳ್ಳಲು ಈ ಮೂರು ಕಾನೂನುಗಳನ್ನು ಜಾರಿ ಮಾಡಿದೆ. ಜನರ ಮನಸ್ಸನ್ನು ಬೇರೆಡೆಗೆ ಸೆಳೆಯಲು ಮುಂದಾಗಿದೆ ಎಂದು ದೂರಿದರು. ಎಸ್‌ಡಿಪಿಐ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ.

ಯಾವುದೇ ಘಟನೆ ನಡೆದರೂ ಅದರ ತಲೆಗೆ ಕಟ್ಟಲಾಗುತ್ತಿದೆ. ಎಸ್‌ಡಿಪಿಐ ಒಂದು ರಾಜಕೀಯ ಪಕ್ಷವಾಗಿದ್ದು ಕಾನೂನು ಬದ್ಧವಾಗಿ ಅಸ್ತಿತ್ವದಲ್ಲಿದೆ. ಬಿಜೆಪಿ ತನ್ನ ವೈಫ‌ಲ್ಯಗಳನ್ನು ಮುಚ್ಚಿಕೊಳ್ಳಲು ಎಸ್‌ಡಿಪಿಐ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಜನಹಿತ‌ಶಕ್ತಿ ಹೋರಾಟ ಸಮಿತಿ ಅಧ್ಯಕ್ಷ ರಾಮಸಮುದ್ರ ಸುರೇಶ್‌, ಮುಖಂಡರಾದ ಬಂಗಾರಸ್ವಾಮಿ, ಆಲೂರು ನಾಗೇಂದ್ರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.