ಸಂಜೆ 6ರ ಬಳಿಕ ವ್ಯಾಪಾರ ನಿರ್ಬಂಧ
Team Udayavani, Jun 25, 2020, 4:47 AM IST
ಚಾಮರಾಜನಗರ: ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ -19ರ ಹರಡುವಿಕೆ ತಡೆಗಟ್ಟುವ ಉದ್ದೇಶ ದಿಂದ ಜೂ.24ರಿಂದ ಜಾರಿಗೆ ಬರುವಂತೆ ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿ ಪ್ರದೇಶ ಗಳಲ್ಲಿ ಸಂಜೆ 6 ಗಂಟೆ ಬಳಿಕ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ನಿರ್ಬಂ ಧಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ
. ಜಿಲ್ಲೆಯಲ್ಲಿ ಕೋವಿಡ್-19ರ ಸಂಬಂಧ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಸರ್ಕಾರದ ನಿರ್ದೇಶನದಂತೆ ಜಿಲ್ಲಾದ್ಯಂತ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆವರೆಗೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನರ ಅನಗತ್ಯ ಸಂಚಾರ ತಡೆಗಟ್ಟಿ ಸೋಂಕು ನಿಯಂತ್ರಿಸಲು ವ್ಯಾಪಾರ ವಹಿವಾಟು ಸಂಜೆ 6 ಗಂಟೆವರೆಗೆ ಮಾತ್ರ ಅನುಮತಿ ನೀಡಲಾಗಿದೆ.
ಸಂಜೆ 6 ಗಂಟೆ ಬಳಿಕ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ನಿರ್ಬಂಧಿಸಲಾಗಿದೆ. ಜೀವನಾವಶ್ಯಕ ವಸ್ತುಗಳ ಮಾರಾಟಕ್ಕೆ ನಿರ್ಬಂಧ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಪ್ರತಿದಿನ ಸಂಜೆ 6ರಿಂದ ಬೆಳಗ್ಗೆ 6 ಗಂಟೆವರೆಗೆ ಚಾಮರಾಜನಗರ ಜಿಲ್ಲೆಯಲ್ಲಿನ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿ ಪ್ರದೇಶಗಳಲ್ಲಿ ನಿಷೇಧಾಜ್ಞೆ ಮುಂದಿನ ಆದೇಶದವರೆಗೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.