ಉದ್ಭವ ಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ


Team Udayavani, Feb 19, 2023, 3:28 PM IST

tdy-17

ಯಳಂದೂರು: ಯಳಂದೂರು ತಾಲೂಕಾ ದ್ಯಂತ ಶನಿವಾರ ಮಹಾಶಿವರಾತ್ರಿ ಹಬ್ಬವನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಇದರ ನಿಮಿತ್ತ ತಾಲೂಕಿನ ವಿವಿಧ ಶಿವನ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆದವು.

ಪುರಾಣ ಪ್ರಸಿದ್ಧ ಬಿಳಿಗಿರಿರಂಗನಬೆಟ್ಟದಲ್ಲಿರುವ ಉದ್ಭವ ಗಂಗಾಧರೇಶ್ವರ ದೇಗುಲದಲ್ಲಿ ಸೋಲಿಗ ಜನರೂ ಸೇರಿದಂತೆ ಬೆಟ್ಟಕ್ಕೆ ಬಂದ ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಪಟ್ಟಣದಲ್ಲಿರುವ ಐತಿಹಾಸಿಕ ಗೌರೇಶ್ವರ, ಪಾರ್ವತಾಂಬೆ ದೇಗುಲಗಳಲ್ಲೂ ವಿಶೇಷ ಪೂಜೆ ನಡೆದವು. ದೇಗುಲದ ಹಿಂಭಾಗ ದಲ್ಲಿರುವ ಪಂಚಲಿಂಗಗಳಿಗೂ ಕೊಳಗ ಧಾರಣೆ ಮಾಡಿ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು. ದೇಗುಲದ ಮುಂಭಾಗದ ಲ್ಲಿರುವ ಬಳೇಮಂಟಪವನ್ನು ವಿದ್ಯುತ್‌ ದೀಪಗಳಿಂದ ಸಿಂಗರಿಸಲಾಗಿತ್ತು. ರಾತ್ರಿ ವೇಳೆ 5 ಜಾವದಲ್ಲಿ ರುದ್ರಾ ಭಿಷೇಕವನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿ ಅಭಿಷೇಕಕ್ಕೂ 101 ಎಳನೀರನ್ನು ದೇವರಿಗೆ ಸಮರ್ಪಿಸಲಾಯಿತು.

ದೇವಸ್ಥಾನದಲ್ಲಿ ಹೋಮ ಹವನಗಳನ್ನು ಮಾಡಿ ದೇವರಿಗೆ ಬಿಲ್ವಪತ್ರೆ ಸೇರಿದಂತೆ ವಿವಿದ ಹೂವುಗಳಿಂದ ಅಲಂಕಾರಗಳನ್ನು ಮಾಡಿ ನಂತರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿ ದೇವರ ದರ್ಶನ ಪಡೆದರು. ಅಲ್ಲದೆ ದೇವಾಲಯಕ್ಕೆ ಬಂದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಕಾರ್ಯ ನಡೆಯಿತು ಎಂದು ದೇಗುಲದ ಅರ್ಚಕ ಮಹೇಶ್‌ ಚಂದ್ರಮೌಳಿ ದೀಕ್ಷಿತ್‌ ತಿಳಿಸಿದರು.

ತಾಲೂಕಿನ ಪ್ರಸಿದ್ಧ ಕಂದಹಳ್ಳಿ ಗ್ರಾಮದ ಮಹದೇಶ್ವರ ದೇಗುಲದಲ್ಲೂ ವಿಶೇಷ ಪೂಜೆಗಳು ನಡೆದವು. ದರ್ಶನಕ್ಕೆ ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು. ಅಗರ-ಮಾಂಬಳ್ಳಿ, ಗೌಡಹಳ್ಳಿ, ಮಲಾರಪಾಳ್ಯ, ಗುಂಬಳ್ಳಿ, ಯರಗಂಬಳ್ಳಿ, ಹೊನ್ನೂರು, ಕೆಸ್ತೂರು ಗ್ರಾಮಗಳಲ್ಲೂ ಸಹ ಈಶ್ವರ ದೇಗುಲಗಳಲ್ಲಿ ವಿಶೇಷ ಪೂಜೆಗಳು ನಡೆದವು.

ಸಂತೆಮರಹಳ್ಳಿಯಲ್ಲೂ ಹಬ್ಬದ ಸಂಭ್ರಮ: ಸಂತೆಮರಹಳ್ಳಿ ಗ್ರಾಮವೂ ಸೇರಿದಂತೆ ಇತರೆಡೆ ಮಹಾಶಿವರಾತ್ರಿ ಹಬ್ಬವನ್ನು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು. ಗ್ರಾಮದ ಮಹದೇಶ್ವರಸ್ವಾಮಿ ದೇಗುಲ, ಶಂಕರದೇವರ ಬೆಟ್ಟದ ಶಂಕರೇಶ್ವರ ಹಾಗೂ ಸಮೀಪದ ಐತಿಹಾಸಿಕ ಕಂದಹಳ್ಳಿ ಮಹದೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನಡೆಯಿತು. ಸಾವಿರಾರು ಭಕ್ತರು ದೇವರ ದರ್ಶನ ಪಡೆದರು. ಇದಕ್ಕಾಗಿ ದೇಗುಲಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ, ವಿಶೇಷ ವಿದ್ಯುತ್‌ ದೀಪಗಳು ಹಾಗೂ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.