ಭೂಗರ್ಭ ಮ್ಯೂಸಿಯಂ ಸ್ಥಾಪನೆ: ಸಮೀಕ್ಷೆ ಪೂರ್ಣ
ಮಲ್ಲಯ್ಯನಪುರ, ಗಾಳಿಪುರ, ಬದನಗುಪ್ಪೆ ಗ್ರಾಮದಲ್ಲಿ ಅಧಿಕಾರಿಗಳ ತಂಡ ಪರಿಶೀಲನೆ
Team Udayavani, Oct 14, 2020, 2:31 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಪ್ರಾಕೃತಿಕ ಭೂಗರ್ಭ ಮ್ಯೂಸಿಯಂ ಸ್ಥಾಪನೆ ಪರಿಶೀಲನೆಗಾಗಿ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ಮಲ್ಲಯ್ಯನಪುರ ಗ್ರಾಮ ವ್ಯಾಪ್ತಿಯಲ್ಲಿ ಮೂರು ದಿನಗಳಭೂವೈಜ್ಞಾನಿಕ ಸಮೀಕ್ಷೆ ಕಾರ್ಯವನ್ನು ಕೈಗೊಂಡು ಪೂರ್ಣಗೊಳಿಸಿದ್ದಾರೆ.
ಮಲ್ಲಯ್ಯನಪುರಗ್ರಾಮವ್ಯಾಪ್ತಿಯಲ್ಲಿ ವಿಶಿಷ್ಟವಾದ ಖನಿಜಗಳು ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ಅವರು ಸ್ಥಳಕ್ಕೆ ಭೇಟಿ ನೀಡಿವಿದ್ಯಾರ್ಥಿಗಳಿಗೆ ಹಾಗೂ ಪ್ರವಾಸಿಗರು ಜಿಲ್ಲೆಯ ಜನರ ಜ್ಞಾನಾರ್ಜನೆ, ಅಧ್ಯಯನಕ್ಕೆ ಇಲ್ಲಿಯೇ ಭೂಗರ್ಭ ಮ್ಯೂಸಿಯಂಸ್ಥಾಪನೆಮಾಡಬಹುದೆಂಬ ಚಿಂತನೆ ನಡೆಸಿದ್ದರು. ಜಿಲ್ಲೆಯ ಗಣಿಮತ್ತುಭೂವಿಜ್ಞಾನ ಅಧಿಕಾರಿಗಳೊಂದಿಗೆಚರ್ಚೆ ನಡೆಸಿದ್ದರು. ಬಳಿಕ ಭೂಗರ್ಭ ಮ್ಯೂಸಿಯಂ ಸ್ಥಾಪನೆ ಸಂಬಂಧ ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಯವರು ಜಿಯೋಲಾಜಿ ಕಲ್ ಸರ್ವೆ ಆಫ್ ಇಂಡಿಯಾದ ಪ್ರಧಾನ ನಿರ್ದೇಶಕರಿಗೆ ಪತ್ರ ಬರೆದಿದ್ದರು.
ಸ್ಪಂದನೆ: ಪತ್ರಕ್ಕೆ ಸ್ಪಂದಿಸಿದ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾದ ಹಿರಿಯ ಅಧಿಕಾರಿಗಳು ತಾಂತ್ರಿಕ ಅಧಿಕಾರಿಗಳು ಹಾಗೂ ಭೂವಿಜ್ಞಾನಿಗಳನ್ನೊಳಗೊಂಡ ತಂಡವನ್ನು ಜಿಲ್ಲೆಗೆ ಕಳುಹಿಸಿಕೊಟ್ಟಿದ್ದರು. ಈ ತಂಡ ಕಳೆದ ಅ.8ರಿಂದ 10 ರವರೆಗೆ ಒಟ್ಟು ಮೂರು ದಿನಗಳ ಕಾಲ ಚಾಮರಾಜನಗರ ತಾಲೂಕಿನ ಮಲ್ಲಯ್ಯನಪುರ, ಗಾಳಿಪುರ, ಬದನಗುಪ್ಪೆ ಸುತ್ತಮುತ್ತ ಚಾಮರಾಜ ನಗರ ಜಿಲ್ಲೆಯ ತಾಂತ್ರಿಕ ಅಧಿಕಾರಿ ಗಳೊಡನೆ ಕ್ಷೇತ್ರ ಪ್ರವಾಸ ಕೈಗೊಂಡುಭೂವೈಜ್ಞಾನಿಕ ಸಮೀಕ್ಷೆ ನಡೆಸಿದೆ.
ಈ ಪ್ರದೇಶದಲ್ಲಿ ದೊರಕುವಶಿಲೆಗಳನ್ನು ಯಾಥಾಸ್ಥಿತಿಯಲ್ಲಿ ಸಂರಕ್ಷಿಸಿ, ಚಾಮರಾಜನಗರ ಜಿಲ್ಲೆ ಹಾಗೂ ರಾಜ್ಯಾದ್ಯಾಂತ ದೊರೆಯುವ ಎಲ್ಲಾ ಶಿಲಾ ಮಾದರಿಗಳನ್ನು ಸಂಗ್ರಹಿಸಿ ಈ ಸ್ಥಳದಲ್ಲಿ ಭೂಗರ್ಭ ಮ್ಯೂಸಿಯಂ ಸ್ಥಾಪಿಸುವುದರಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಭೂರ್ಗಭ ಹಾಗೂ ಶಿಲಾಸ್ಥರಗಳ ಬಗ್ಗೆ ಹೆಚ್ಚಿನಜ್ಞಾನವನ್ನು ನೀಡಲು ಅನುಕೂಲವಾಗಲಿದೆ ಎಂಬ ಆಶಾಭಾವ ಕಂಡು ಬಂದಿದೆ.
ಶಿಲಾ ಮಾದರಿ: ಈ ಪ್ರಾಕೃತಿಕ ಭೂಗರ್ಭ ಮ್ಯೂಸಿಯಂ ಸ್ಥಾಪಿಸಲು ಉದ್ದೇಶಿಸಿರುವ ಪ್ರದೇಶದಲ್ಲಿ ಫೆಲಿಸೈಟ್,ಗ್ರಾನೈಟ್, ಫಚ್‌ಸೈಟ್, ಕ್ವಾರ್ಟ್‌ಜೈಟ್, ಡೋಲರೈಟ್ ಡೈಕ್, ನ್ಪೋಕಿ ಕ್ವಾರ್ಟ್, ಪೆಗ್ಮಟೈಟ್, ಗಾರ್ನೆಟ್, ಐರನ್ ಬಂಡ್ ಸೇರಿದಂತೆ ಇತರೆ ಶಿಲಾ ಸ್ಥರಗಳು ಇರುವುದು ದೃಢಪಟ್ಟಿದೆ. ಈ ಪ್ರದೇಶದಲ್ಲಿ ಲಭ್ಯವಿರುವ ಶಿಲಾ ಸ್ಥರಗಳಿಂದ ಶಿಲಾ ಮಾದರಿಗಳನ್ನು ಭೂವೈಜ್ಞಾನಿಕ ಸಮೀಕ್ಷೆ, ವಿಶ್ಲೇಷಣೆಗಾಗಿ ಸಂಗ್ರಹಿಸಿ, ಪ್ರಯೋಗಾಲಯಕ್ಕೆಕಳುಹಿಸಲಾಗಿದೆ. ತಾಂತ್ರಿಕ ವರದಿ: ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ತಾಂತ್ರಿಕ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಲಿದ್ದಾರೆ. ವರದಿ ಬಂದ ನಂತರ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯನ್ನು ಬಳಸಿಕೊಂಡು ಭೂಗರ್ಭ ಮ್ಯೂಸಿಯಂಸ್ಥಾಪನೆಗೆ ಅವಕಾಶ ಲಭಿಸಬಹುದೆಂಬನಿರೀಕ್ಷೆ ಹೊಂದಲಾಗಿದೆ ಎಂದು ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.