ಪಿಎಫ್ಐ, ಎಸ್‌ಡಿಪಿಐ ನಿಷೇಧಿಸಲು ಆಗ್ರಹ
Team Udayavani, Jul 31, 2022, 4:15 PM IST
ಚಾಮರಾಜನಗರ: ರಾಜ್ಯದಲ್ಲಿ ನಿರಂತರವಾಗಿ ಹಿಂದೂ ಸಂಘಟನೆಗಳ ಮುಖಂಡರ ಹತ್ಯೆ ನಡೆಸಲಾಗುತ್ತಿದ್ದು ಇದಕ್ಕೆ ಪಿಎಫ್ಐ ಹಾಗೂ ಎಸ್‌ಡಿಪಿಐ ಸಂಘಟನೆಗಳು ಕಾರಣವಾಗಿವೆ ಎಂದು ಆರೋಪಿಸಿ ನಗರದಲ್ಲಿ ಶನಿವಾರ ಹಿಂದೂ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆ ಹೊರಟು ಭುನವೇಶ್ವರಿ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ ನಡೆಸಿ, ಬಳಿಕ ಬಿ. ರಾಚಯ್ಯ ಜೋಡಿ ರಸ್ತೆಮಾರ್ಗವಾಗಿ ಜಿಲ್ಲಾಡಳಿತ ಭವನ ದಲ್ಲಿ ಧರಣಿ ನಡೆಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಮುಖಂಡ ಸಂದೇಶ್ ಮಾತನಾಡಿ, ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಮೂಲಕ ಅಶಾಂತಿಯನ್ನು ಸೃಷ್ಟಿ ಮಾಡಿ, ಹಿಂದೂಗಳ ಪರವಾಗಿ ಧ್ವನಿ ಎತ್ತುವವರನ್ನು ಹತ್ಯೆ ಮಾಡುವಮೂಲಕ ಜನರದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲುಎಸ್‌ಡಿಪಿಐ, ಪಿಎಫ್ಐ ಸಂಘಟನೆಗಳು ಸಂಚು ಹಾಕುತ್ತಿವೆ.ಪ್ರದೀಪ್ ಹತ್ಯೆ ಹಿಂದೆ ಈ ಸಂಘಟನೆಗಳ ಕೈವಾಡವಿದೆ. ಕೇರಳದಿಂದ ಬಂದಿರುವ ಹಂತಕರು ಪ್ರವೀಣ್ ಕೊಲೆ ಮಾಡಿ ಹೋಗಿದ್ದಾರೆ. ಇಂಥ ಸಂಘಟನೆಗಳನ್ನು ಬೆಳೆಯಲು ಬಿಟ್ಟರೆ ಮುಂದಿನ ದಿನಗಳಲ್ಲಿ ಹಿಂದೂ ರಾಷ್ಟ್ರದಲ್ಲಿಯೇ ಹಿಂದೂಗಳಿಗೆ ಉಳಿಗಾಲವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಾಸಕ ನಿರಂಜನಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ ಕೆ.ಆರ್.ಮಲ್ಲಿಕಾರ್ಜುನಪ್ಪ, ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಕಾಡಾ ಅಧ್ಯಕ್ಷ ಜಿ. ನಿಜಗುಣರಾಜು, ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್, ಮುಖಂಡರಾದ ಎಂ. ರಾಮಚಂದ್ರ, ಡಾ.ಎ.ಆರ್. ಬಾಬು, ಆರ್. ಸುಂದರ್, ಜಿ. ನಾಗಶ್ರೀಪ್ರತಾಪ್, ಎಸ್.ಬಾಲಸುಬ್ರಹ್ಮಣ್ಯ, ಚಾಮುಲ್ ಅಧ್ಯಕ್ಷ ವೈ.ಸಿ. ನಾಗೇಂದ್ರ,ನಿರ್ದೇಶಕ ಶಿವಕುಮಾರ್, ಮಂಡಲ ಅಧ್ಯಕ್ಷ ಬಸವಣ್ಣ,ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಎಚ್.ಎಂ. ಬಸವಣ್ಣ, ಚುಡಾ ಮಾಜಿಅಧ್ಯಕ್ಷ ಕುಲಗಾಣ ಶಾಂತಮೂರ್ತಿ, ನಗರಸಭಾ ಅಧ್ಯಕ್ಷೆ ಆಶಾ ನಟರಾಜು, ಸದಸ್ಯರಾದ ಶಿವರಾಜು, ಚಂದ್ರಶೇಖರ್,ರಾಘವೇಂದ್ರ, ಚಿಕ್ಕರಾಜು, ಮಂಗಲ ಶಿವಕುಮಾರ್, ಎಂ.ರೇವಣ್ಣ, ಬಸವರಾಜಪ್ಪ, ಪದ್ಮಾ, ವನಜಾಕ್ಷಿ, ಮಮತಾ, ಗಾಯತ್ರಿ, ರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.