ಸರ್ಕಾರದಿಂದ ನೀಡುವ ಸವಲತ್ತು ಸಮರ್ಪಕವಾಗಿ ಬಳಸಿ
Team Udayavani, May 5, 2019, 3:00 AM IST
ಕೊಳ್ಳೇಗಾಲ: ಆರ್‌ಟಿಇ ನಿಂದ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಸವಲತ್ತುಗಳು ಸಮರ್ಪಕವಾಗಿ ದೊರೆಯುವಂತೆ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದೆಂದು ಮೈಸೂರು ಡಯಟ್ ಪ್ರಾಂಶುಪಾಲ ಮಹದೇವಪ್ಪ ಹೇಳಿದರು.
ನಗರದ ಗುರುಭವನದಲ್ಲಿ ಕೆರೆಯಲಾಗಿದ್ದ ವಿವಿಧ ಶಾಲೆಗಳಿಗೆ ಆರ್‌ಟಿಇ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳ ಪೋಷಕರ ಕುಂದು-ಕೊರತೆ ಸಭೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವುದೇ ತರಹದ ತೊಂದರೆಗಳು ಎದುರಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ದೂರಿನ ಸುರಿಮಳೆ: ಪೋಷಕರು ಶಾಲೆಗಳಲ್ಲಿ ಸರಿಯಾಗಿ ಪುಸ್ತಕ ವಿತರಣೆ ಮಾಡುತ್ತಿಲ್ಲ. ನೋಟ್ ಬುಕ್, ಶೂ, ಸಮವಸ್ತ್ರ ಸೇರಿದಂತೆ ಸೇರಿದಂತೆ ಹಲವಾರು ಸಾಮಗ್ರಿಗಳನ್ನು ಸರಿಯಾಗಿ ವಿತರಿಸುತ್ತಿಲ್ಲ ಮತ್ತು ಆರ್‌ಟಿಇನಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳನ್ನು ಶಾಲೆಗಳಲ್ಲಿ ಪ್ರತ್ಯೇಕವಾಗಿ ಆಸನ ನೀಡುತ್ತಾರೆ. ಆರ್‌ಟಿಇ ವಿದ್ಯಾರ್ಥಿಗಳ ಓದಿನ ಬಗ್ಗೆ ಕಾಳಹಿ ವಹಿಸುತ್ತಿಲ್ಲ.
ಡೋನೇಷನ್ ನೀಡಿ ಬಂದಂತಹ ವಿದ್ಯಾರ್ಥಿಗಳಂತೆ ಕಾಣದೆ ಆರ್‌ಟಿಇ ವಿದ್ಯಾರ್ಥಿಗಳನ್ನು ವಿಶೇಷ ರೀತಿಯಲ್ಲಿ ನೋಡುತ್ತಾರೆ ಎಂದು ದೂರಿದರು. ಆರ್‌ಟಿಇ ವಿದ್ಯಾರ್ಥಿಗಳನ್ನು ಕಡೆಗಣಿಸುತ್ತಿರುವ ಬಗ್ಗೆ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರು ಶಿಕ್ಷಣ ಸಚಿವರಾಗಿದ್ದ ವೇಳೆ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಪ್ರತ್ಯೇಕವಾಗಿ ಕಾಣುತ್ತಿರುವ ಬಗ್ಗೆ ಮತ್ತು
ಆರ್ಥಿಕ ವಿದ್ಯಾರ್ಥಿಗಳು ಸಹ ಹಣ ನೀಡುವಂತೆ ಒತ್ತಾಯಿಸುತ್ತಿರುವ ಬಗ್ಗೆ ದೂರುಗಳನ್ನು ನೀಡಲಾಗಿತ್ತು. ಸಚಿವರು ಹೇಳಿದರೂ ಸಹ ಖಾಸಗಿ ಶಾಲೆಯ ಆಡಳಿತ ಮಂಡಳಿಯವರು ಗಾಳಿಗೆ ತೂರಿದ್ದಾರೆ ಎಂದು ದೂರಿನ ಸುರಿಮಳೆಗೈದಿರುವುದನ್ನು ಆಲಿಸಿದ ಪ್ರಾಂಶುಪಾಲರು ಈ ರೀತಿ ನಡೆಯಲು ಅವಕಾಶ ನೀಡವುದಿಲ್ಲ ಪೋಷಕರು ಸಹಕರಿಸಬೇಕೆಂದು ಮನವಿ ಮಾಡಿದರು.
ಮಕ್ಕಳಿಗೆ ಸಲಹೆ ನೀಡಿ: ಶಾಲೆಗಳಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಹೇಳಿಕೊಡುವ ಮಾದರಿಯಲ್ಲೇ ಪಾಠ ಪ್ರವಚನಗಳು ನಡೆಯುತ್ತದೆ. ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಹೆಚ್ಚು ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಆಗ ಮಾತ್ರ ಮಕ್ಕಳಲ್ಲಿ ಮತ್ತಷ್ಟು ಶಿಕ್ಷಣದ ಬಗ್ಗೆ ಒಲವು ಹೆಚ್ಚಾಗುತ್ತದೆ ಎಂದು ಸಲಹೆ ನೀಡಿದರು.
ತೊಂದರೆಯಾಗದಂತೆ ನಿಗಾ: ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟೀಲ್ ಮಾತನಾಡಿ, ಶಾಲೆಗಳಲ್ಲಿ ಆರ್‌ಟಿಇ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎನ್ನಲಾದ ದೂರುಗಳ ಬಗ್ಗೆ ಜಿಲ್ಲಾ ಶಿಕ್ಷಣಾಧಿಕಾರಿಗಳ ಗಮನಕ್ಕೂ ತರಲಾಗಿದೆ. ಈ ಬಾರಿಯಿಂದ ಆರ್‌ಟಿಇ ಆಯ್ಕೆಗೆ ಸರ್ಕಾರಿ ಶಾಲೆಯ ಮೂರು ಶಾಲೆಗಳನ್ನು ಮಾತ್ರ ತೆಗೆದುಕೊಳ್ಳಲಾಗಿದ್ದು, ಎಲ್ಲಾ ವಿದ್ಯಾರ್ಥಿಗಳು ಸರ್ಕಾರಿ ಶಾಲೆಯಲ್ಲೇ ವ್ಯಾಸಂಗ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿದೆ. ಮುಂದಿನ ದಿನಗಳಲ್ಲಿ ಆರ್‌ಟಿಇ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ನಿಗಾವಹಿಸಲಾಗುವುದೆಂದು ಭರವಸೆ ನೀಡಿದರು.
ಗೊಂದಲ: ಆರ್‌ಟಿಇ ವಿದ್ಯಾರ್ಥಿಗಳಿಗೆ ವಿವಿಧ ಶಾಲೆಯಲ್ಲಿ ಉಂಟಾಗುತ್ತಿರುವ ನ್ಯೂನತೆಗಳನ್ನು ಸರಿಪಡಿಸಲು ಪೋಷಕರ ಸಭೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಹ್ವಾನ ಮಾಡಿದ್ದು, ಬೃಹತ್ ಸಂಖ್ಯೆಯಲ್ಲಿ ಸೇರಿರುವ ಪೋಷಕರ ಅಳಲನ್ನು ತೊಡಿಕೊಳ್ಳಲು ಬಂದಿರುವ ಸಭೆಗೆ ಪತ್ರಿಕಾ ಮಾಧ್ಯಮದವರನ್ನು ಏಕೆ ಆಹ್ವಾನ ಮಾಡಿಲ್ಲ ಎಂದು ಪ್ರಶ್ನಿಸಿದ ಪೋಷಕರು, ಇದೊಂದು ಸಮಸ್ಯೆಗಳನ್ನು ಮುಚ್ಚುಹಾಕುವ ಕುತಂತ್ರವೇ ಎಂದು ಕೇಳಿದ ಪ್ರಶ್ನೆಗೆ ಸಭೆಯಲ್ಲಿ ಗೊಂದಲ ಉಂಟಾಯಿತು.
ಬಿಆರ್‌ಸಿ ಮಂಜುಳಾ, ಸಿಬ್ಬಂದಿ ಅಮಿತ್, ವರದರಾಜು, ಜಯರಾಜು ಹಾಗೂ ಪೋಷಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು
Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್ ನೇಮಕ ಸಂದರ್ಶನ
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.