ಕೇರಳದಿಂದ ಬರುತಲೇ ಇರುವ ಕಸ ತಡೆಗೆ ನಿರ್ಲಕ್ಷ್ಯ ಏಕೆ?

ಕೇರಳ ತ್ಯಾಜ್ಯ ಗುಂಡ್ಲುಪೇಟೆ ಗಡಿಗೆ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ನಡೆಯದ ವಾಹನ ತಪಾಸಣೆ

Team Udayavani, Nov 13, 2021, 12:28 PM IST

ಕಸ ತ್ಯಾಜ್ಯ

ಗುಂಡ್ಲುಪೇಟೆ: ಕೇರಳದ ಆಟೋ ಸೇರಿದಂತೆ ಲಾರಿ ಚಾಲಕರು ಅನ್ಯ ವಸ್ತುಗಳ ಸೋಗಿನಲ್ಲಿ ಕೇರಳ ತ್ಯಾಜ್ಯವನ್ನು ಗುಂಡ್ಲುಪೇಟೆ ಗಡಿ ಪ್ರದೇಶದಲ್ಲಿ ತಂದು ಎಸೆಯುತ್ತಿದ್ದಾರೆ. ದಿನ ಕಳೆದಂತೆ ಇದರ ಪ್ರಮಾಣವೂ ಹೆಚ್ಚಾಗ ತೊಡಗಿದೆ. ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಅರಣ್ಯ ಮತ್ತು ಪೊಲೀಸ್‌ ಇಲಾಖೆ ಸಿಬ್ಬಂದಿ ಸಮರ್ಪಕವಾಗಿ ವಾಹನಗಳ ತಪಾಸಣೆ ಮಾಡದ ಕಾರಣ ಕೇರಳ ತ್ಯಾಜ್ಯ ವಸ್ತುಗಳು ಗುಂಡ್ಲುಪೇಟೆ-ಸುಲ್ತಾನ್‌ ಬತ್ತೇರಿ ಹೆದ್ದಾರಿಯ ರಸ್ತೆ ಬದಿಯಲ್ಲಿ ವ್ಯಾಪಕವಾಗಿ ಬಂದು ಬೀಳುತ್ತಿವೆ.

ಇದರ ಅರಿವಿದ್ದರೂ ಪಟ್ಟಣ ಪುರಸಭೆ, ತಾಲೂಕು ಆಡಳಿತ, ಶಾಸಕ ಸಿ.ಎಸ್‌.ನಿರಂಜನಕುಮಾರ್‌ ನಿರ್ಲಕ್ಷ್ಯವಹಿಸಿದ್ದಾರೆ. ಶುಕ್ರವಾರ ಕೇರಳದ ಅಶೋಕ ಲೈಲ್ಯಾಂಡ್‌ ಪಿಕ್‌ ಅಪ್‌ ವಾಹನದ ಚಾಲಕನೋರ್ವ ಸುಮಾರು 5-6 ಚೀಲದಲ್ಲಿ ತ್ಯಾಜ್ಯ ವಸ್ತುಗಳನ್ನು ತನ್ನ ವಾಹನದಲ್ಲಿ ಕೇರಳದಿಂದ ತಂದು ಗುಂಡ್ಲುಪೇಟೆ-ಬತ್ತೇರಿ ರಸ್ತೆ ಪಕ್ಕ ಸುರಿಯಲು ಯತ್ನಿಸಿದ್ದಾನೆ.

ಇದನ್ನೂ ಓದಿ:- ಬಿದ್ದು ಮೂರು ತಿಂಗಳಾದರೂ ಇನ್ನೂ ದುರಸ್ತಿ ಕಾಣದ ದಾಂಡೇಲಿ ನಗರಸಭೆಯ ಆವರಣ ಗೋಡೆ

ಈ ಸಂದರ್ಭದಲ್ಲಿ ಕಾವಲು ಸಂಘಟನೆ ಪದಾಧಿಕಾರಿಗಳು ಆತನನ್ನು ಹಿಡಿದು ತರಾಟೆಗೆ ತೆಗೆದುಕೊಂಡು, ಕೇರಳ ರಾಜ್ಯದ ತ್ಯಾಜ್ಯವನ್ನು ಇಲ್ಲಿ ಸುರಿಯಲು ಕಾರಣವೇನು, ನಿನಗೆ ಕುಮ್ಮಕ್ಕು ನೀಡಿದವರ್ಯಾರು ಎಂದು ಪ್ರಶ್ನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೇರಳ ವಾಹನ ಚಾಲಕ ಕಕ್ಕಾಬಿಕ್ಕಿಯಾಗಿದ್ದಾರೆ. ನಂತರ ಕಾವಲು ಪಡೆ ಸದಸ್ಯರು ತ್ಯಾಜ್ಯ ಸುರಿದರೆ ಠಾಣೆಗೆ ಕರೆದೊಯ್ಯುವ ಎಚ್ಚರಿಕೆ ನೀಡಿದ ಹಿನ್ನೆಲೆ ಆತ ತ್ಯಾಜ್ಯವನ್ನು ಮತ್ತೆ ಕೇರಳಕ್ಕೆ ಕೊಂಡೊಯ್ದಿದ್ದಾನೆ.

ಅಧಿಕಾರಿಗಳ ಬೇಜವಾಬ್ದಾರಿ: ಮೂಲೆ ಚೆಕ್‌ಪೋಸ್ಟ್‌ನಲ್ಲಿ ಅರಣ್ಯ ಮತ್ತು ಪೊಲೀಸ್‌ ಇಲಾಖೆಯವರು ಸರಿಯಾದ ರೀತಿಯಲ್ಲಿ ವಾಹನ ತಪಾಸಣೆ ಮಾಡದೆ ಕಾರಣ ಕೇರಳ ತ್ಯಾಜ್ಯ ವಸ್ತುಗಳು ಪ್ರತಿದಿನ ರಾಶಿಗಟ್ಟಲೆ ಬಂದು ಬೀಳುತ್ತಿವೆ. ಇದಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ತನವೇ ಕಾರಣ.

ಇತ್ತ ಗಮನ ಹರಿಸಿ ತ್ಯಾಜ್ಯ ವಸ್ತುಗಳಿಗೆ ಕಡಿವಾಣ ಹಾಕದಿದ್ದರೆ ಮೂಮದಿನ ದಿನಗಳಲ್ಲಿ ದೊಡ್ಡ ಮಟ್ಟದ ಸಮಸ್ಯೆ ತಲೆ ದೋರಲಿದೆ ಎಂದು ಕಾವಲು ಪಡೆ ತಾಲೂಕು ಅಧ್ಯಕ್ಷ ಎ.ಅಬ್ದುಲ್‌ ಮಾಲಿಕ್‌ ತಿಳಿಸಿದ್ದಾರೆ.

ತನಿಖೆ ನಡೆಸಿ: ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಇದು ಹಲವು ವ್ಯಕ್ತಿಗಳ ಕುಮ್ಮಕ್ಕಿನ ಮೇರೆಗೆ ನಡೆಯುತ್ತಿದೆ. ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ಕೇರಳ ತ್ಯಾಜ್ಯ ಗುಂಡ್ಲುಪೇಟೆ ಗಡಿಯೊಳಗೆ ನುಸುಳದಂತೆ ಕ್ರಮ ವಹಿಸಬೇಕೆಂದು ಪುರಸಭಾ ಸದಸ್ಯ ಎನ್‌.ಕುಮಾರ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.