ದೌರ್ಜನ್ಯ ಪ್ರಕರಣ: ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಕಲ್ಪಿಸಿ
Team Udayavani, Apr 9, 2022, 2:57 PM IST
ಚಾಮರಾಜನಗರ: ಪ.ಜಾತಿ, ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ನಿಯಮಾನುಸಾರ ಪರಿಹಾರ ಹಾಗೂ ಸೌಲಭ್ಯಗಳನ್ನು ತ್ವರಿತವಾಗಿ ಕಲ್ಪಿಸಬೇಕೆಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚನೆ ನೀಡಿದರು.
ಶುಕ್ರವಾರ, ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ.ಜಾತಿ, ಪರಿಶಿಷ್ಟ ಪಂಗಡದ ದೌರ್ಜನ್ಯ ಪ್ರಕರಣಗಳ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಕಳೆದ 2021 ಹಾಗೂ 2022ನೇ ಸಾಲಿನಲ್ಲಿ ದಾಖಲಾಗಿರುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ಈವರೆಗೆ ನೀಡಿರುವ ಪರಿಹಾರಗಳು ಹಾಗೂ ಇನ್ನೂ ಪರಿಹಾರ ನೀಡಬೇಕಿರುವ ಪ್ರಕರಣಗಳ ಕುರಿತು ವಿವರವಾಗಿ ಮಾಹಿತಿ ಪಡೆದ ಜಿಲ್ಲಾಧಿಕಾರಿಯವರು, ವಿಳಂಬ ಮಾಡದೇ ಅಗತ್ಯ ದಾಖಲಾತಿಗಳನ್ನು ಪಡೆದು ಕೊಂ ಡು ಪರಿಹಾರ ನೀಡುವಂತೆ ನಿರ್ದೇಶನ ನೀಡಿದರು.
ಹನೂರು ತಾಲೂಕಿನ ಸುಳ್ವಾಡಿ ದುರಂತದ ಸಂತ್ರಸ್ತರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಹುದ್ದೆ ನೀಡುವ ಸಂಬಂಧ ಕೈಗೊಂಡಿರುವ ಕ್ರಮಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಇದೇ ವೇಳೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಕೆಂಪನಪುರ ಸಿದ್ದರಾಜು, ಆಸೀಫ್ಉಲ್ಲಾ ಮಾತನಾಡಿ ಕೆಲವು ಸಂತ್ರಸ್ತ ಅವಲಂಬಿತರ ಪ್ರಸ್ತಾವನೆಗಳು ತಿರಸ್ಕೃತವಾಗಿವೆ. ಇವರಿಗೆ ಮಾನವೀಯತೆ ಆಧಾರದ ಮೇಲೆ ಪರ್ಯಾಯವಾಗಿ ಉದ್ಯೋಗ ನೀಡುವ ನಿಟ್ಟಿನಲ್ಲಿ ಪರಿಗಣಿಸಬೇಕಿದೆ ಎಂದರು.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ನಾಲ್ವರು ಸಂತ್ರಸ್ತ ಅವಲಂಬಿತರಿಗೆ ಸರ್ಕಾರಿ ಹುದ್ದೆ ನೀಡುವ ಸಂಬಂಧ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ. ಇನ್ನೂ ಇಬ್ಬರು ಸಂತ್ರಸ್ತ ಅವಲಂಬಿತರ ದಾಖಲಾತಿ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ. ಸುತ್ತೋಲೆ ಪ್ರಕಾರ ಕ್ರಮ ತೆಗೆದುಕೊಳ್ಳಬೇಕಿದೆ ಎಂದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಕೆಂಪನಪುರ ಸಿದ್ದರಾಜು, ನಲ್ಲೂರು ಸೋಮೇಶ್ವರ, ಕಲಿಗೌಡನಹಳ್ಳಿ ಸಿದ್ದರಾಜು, ಟಿ.ಎಸ್. ರಾಜೇಂದ್ರ, ಆಸೀಫ್ ಉಲ್ಲಾ ಮಾತನಾಡಿ ಸುಳ್ವಾಡಿ ಪ್ರಕರಣದಲ್ಲಿ ನೊಂದವರಿಗೆ ಆರೋಗ್ಯ ತಪಾಸಣೆ ಶಿಬಿರವನ್ನು ಇತ್ತೀಚೆಗೆ ಜಿಲ್ಲಾಡಳಿತ ಆಯೋಜಿಸಿದ್ದು ಶ್ಲಾಘನೀಯ ಕಾರ್ಯವಾಗಿದೆ. ಇನ್ನೂ ಹಲವರು ಅನಾರೋಗ್ಯದಿಂದ ಬಳಲುತ್ತಿದ್ದು ನಿರಂತರವಾಗಿ ಚಿಕಿತ್ಸೆ ನೆರವು ಅಗತ್ಯವಿದೆ. ಇದಕ್ಕಾಗಿ ವಿಶೇಷವಾಗಿ ಆರೋಗ್ಯ ಕಾರ್ಡ್ ಇತರೆ ಸೌಲಭ್ಯಗಳ ಮೂಲಕ ಚಿಕಿತ್ಸೆಗೆ ಮುಂದಾಗಬೇಕಿದೆ ಎಂದರು.
ಈ ಬಗ್ಗೆ ಜಿಲ್ಲಾಧಿಕಾರಿಯವರು ಪ್ರತಿಕ್ರಿಯಿಸಿ ಆರೋಗ್ಯ ಇಲಾಖೆ ವತಿಯಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಲಾಗುವುದು. ಸುಳ್ವಾಡಿಯಲ್ಲಿಯೇ ವಿಶೇಷ ಶಿಬಿರ ಆಯೋಜಿಸಿ ಆರೋಗ್ಯ ಕಾರ್ಡ್ ಇನ್ನಿತರ ಪೂರಕ ಸೌಲಭ್ಯಗಳನ್ನು ಕಲ್ಪಿಸಲು ಕ್ರಮವಹಿಸಲಾಗುವುದು ಎಂದರು.
ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರು ಮಾತನಾಡಿ, ಪ.ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ಎಸಗುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಅನುಷ್ಠಾನದಲ್ಲಿ ರುವ ಕಾಯ್ದೆ, ಶಿಕ್ಷೆ ಬಗ್ಗೆ ಎಲ್ಲಾ ವರ್ಗದ ಜನರಿಗೆ ಮನವರಿಕೆ ಮಾಡಿಕೊಡುವ ಕಾರ್ಯಗಾರ ತರಬೇತಿ ಶಿಬಿರಗಳನ್ನು ಪರಿಣಾಮಕಾರಿಯಾಗಿ ಏರ್ಪಡಿಸಬೇಕು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.