ಮೂಲಸ್ವರೂಪದಂತೆ ದೇಗುಲ ಪುನರ್‌ ನಿರ್ಮಾಣ

Team Udayavani, Mar 4, 2021, 8:07 PM IST

virendra heggade

ಗುಂಡ್ಲುಪೇಟೆ: ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದರು.

ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಜೀರ್ಣೋದ್ಧಾರಗೊಳಿಸಿದ ಶ್ರೀ ಮೂಲಸ್ಥಾನೇಶ್ವರ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ನಮ್ಮನ್ನು ನಾವು ಉದ್ದರಿಸಿಕೊಂಡರೆ ಮಾತ್ರ ಲೋಕ ವನ್ನು ಉದ್ದರಿಸಲು ಸಾಧ್ಯ. ಗ್ರಾಮೀಣ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗು ವುದರಿಂದ ಸ್ವಸಹಾಯ ಸಂಘಗಳ ಮೂಲಕ ಪ್ರತಿ ಯೊಬ್ಬರನ್ನೂ ಸಬಲರನ್ನಾಗಿಸಿ ಸಮುದಾಯವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.

ದುಶ್ಚಟಗಳನ್ನು ಬಿಡಿಸುವ ಮೂಲಕ ಸದೃಢರನಾಗಿಸಲಾಗುತ್ತಿದೆ. ಸಂಕಷ್ಟಕ್ಕೆ ಸಿಲುಕಿದವರನ್ನು ದೂರವಿಡುವಂತೆ ಹಳೆಯ ದೇವಸ್ಥಾನಗಳನ್ನು ಪಾಳು ಬಿಡಲಾಗುತ್ತಿದೆ. ಆದ್ದರಿಂದಲೇ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದ ಈವರೆಗೆ ರಾಜ್ಯಾದ್ಯಂತ 250 ಪುರಾತನ ದೇವಾಲಯಗಳನ್ನು ಅವುಗಳ ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಪುನರ್‌ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ದೇವಾಲಯಗಳು ಸಾಮಾಜಿಕ ಶಕ್ತಿ ಕೇಂದ್ರ ಗಳಾಗಿವೆ. ಅವುಗಳ ಉಳಿವಿನಿಂದ ಶಾಂತಿ ನೆಲೆಸಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಎಲ್ಲರೂ ಶ್ರದ್ಧಾಕೇಂದ್ರಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.  ತಾಲೂಕಿನಲ್ಲಿ 28 ಸಾವಿರ, ಜಿಲ್ಲೆಯಲ್ಲಿ 1 ಲಕ್ಷ 31 ಸಾವಿರ ಸ್ವಸಹಾಯ ಸದಸ್ಯರಿದ್ದು, ಇವರಿಂದ ತಲಾ 10 ರೂಪಾಯಿಯಂತೆ 210 ಕೋಟಿ ರೂ. ಹಣ ಸಣ್ಣ ಉಳಿತಾಯ ಮಾಡಿಸಲಾಗಿದೆ. 300 ಕೋಟಿ ಹಣ ವನ್ನು ಅವಶ್ಯಕತೆ ಇರುವವರಿಗೆ ನೆರವು ನೀಡಲಾಗಿದೆ. ಈ ಯಶಸ್ಸಿಗೆ ಸಿಬ್ಬಂದಿಗಳ ಮತ್ತು ಸದಸ್ಯರ ಸೇವಾ ಮನೋಭಾವನೆ ಕಾರಣವಾಗಿದೆ ಎಂದರು.

ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಕ್ಷೇತ್ರದ ಶಾಸಕ ಸಿ.ಎಸ್‌.ನಿರಂಜನಕುಮಾರ್‌ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯು ಸಾರ್ವಜನಿಕರ ಭಕ್ತಿಭಾವನೆಗಳಿಗೆ ಗೌರವ ನೀಡಿ ಹಳೆಯ ದೇವಸ್ಥಾನಗಳನ್ನು ಪುನರುಜ್ಜೀವನಗೊಳಿಸಿದ್ದಾರೆ.

ಸ್ವಸಹಾಯ ಸಂಘಗಳ ಮೂಲಕ ಸಮಾಜದ ದುರ್ಬಲರ ಅಭಿವೃದ್ಧಿಗೆ ನೆರವಾಗುವ ಮೂಲಕ ಸರ್ಕಾರಗಳಿಗೆ ಮಾದರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ರವಿಶಂಕರ್‌, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್‌.ಮಹೇಶ್‌, ಮುಖಂಡ ಎಚ್‌.ಎಂ.ಗಣೇಶ್‌ ಪ್ರಸಾದ್‌, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವಮಲ್ಲದೇವರು ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Tiger

Gundlupet: ಬಂಡೆ ಮೇಲೆ ಹುಲಿ; ಆತಂಕ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.