ಸೌಕರ್ಯ ಒದಗಿಸದಿದ್ರೆ ಮತದಾನ ಬಹಿಷ್ಕಾರ


Team Udayavani, Apr 12, 2019, 2:42 PM IST

cham-
ಚಾಮರಾಜನಗರ: ಯಳಂದೂರು ತಾಲೂಕಿನ ಅಂಬಳೆ ಅಂಬೇಡ್ಕರ್‌ ಬಡಾವಣೆಗೆ ರಸ್ತೆ, ಸಾರಿಗೆ, ನ್ಯಾಯ ಬೆಲೆ ಅಂಗಡಿ ಸೌಲಭ್ಯಗಳನ್ನು ಕಲ್ಪಿಸಬೇಕು. ಇಲ್ಲದಿದ್ದರೆ ಏ.18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ನಿವಾಸಿಗಳು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾ ತಹಶೀಲ್ದಾರ್‌ ನಂದೀಶ್‌ ಅವರಿಗೆ ಬಡಾವಣೆಯ ನಿವಾಸಿಗಳು ಮನವಿ ಪತ್ರ ಸಲ್ಲಿಸಿದರು. ಅಂಬಳೆ ಅಂಬೇಡ್ಕರ್‌ ಬಡಾವಣೆಯಿಂದ ಯಳಂದೂರಿಗೆ ಹೋಗುವ ರಸ್ತೆಯ ಕಾಮಗಾರಿಯ ನಡೆಯುತ್ತಿದ್ದು, ಬಡಾವಣೆಯಿಂದ ವೈ.ಕೆ.ಮೋಳೆ ಮಾರ್ಗವಾಗಿ ಯಳಂದೂರಿಗೆ ಹೋಗುವ ರಸ್ತೆ ಹಾಗೂ ಗ್ರಾಮದ ವೀರಶೈವ ಬೀದಿಯಿಂದ ಯಳಂದೂರಿಗೆ ಹೋಗುವ ರಸ್ತೆ ಕಾಮಗಾರಿಯನ್ನು 6 ತಿಂಗಳಿನಿಂದ ಏಕಾಏಕಿ ಅರ್ಧಕ್ಕೆ ನಿಲ್ಲಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ ಅಧ್ಯಕ್ಷರು, ಪಂಚಾಯಿತಿ ಅಭಿವೃದಿ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡರು.
ಸ್ವಾತಂತ್ರ್ಯ ಬಂದು 72 ವರ್ಷಗಳೇ ಕಳೆದರೂ ನಮ್ಮ ಗ್ರಾಮ ಸಾರಿಗೆ ಸೌಲಭ್ಯದಿಂದ ವಂಚಿತವಾಗಿದೆ. ಗ್ರಾಮದಿಂದ ಯಳಂದೂರಿಗೆ ಸುಮಾರು 4 ಕಿ.ಮೀ.ದೂರವಿದ್ದು, ಶಾಲೆಗೆ ಹೋಗುವ ವಿದ್ಯಾರ್ಥಿಗಳು ಸುಮಾರು 50 ದಿಂದ 100 ಇದ್ದು, ಇದರಲ್ಲಿ ಹೆಣ್ಣು ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಗ್ರಾಮದ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಚಾಮರಾ ಜನಗರ, ಕೊಳ್ಳೇಗಾಲದ ಶಾಲಾ, ಕಾಲೇಜುಗಳಿಗೆ ವ್ಯಾಸಂಗ ಮಾಡುತ್ತಿರುವರಿಂದ ಪ್ರತಿ ದಿನಯಳಂದೂರಿಗೆ ನಡೆದುಕೊಂಡು ಹೋಗಿ ಪ್ರಯಾಣ ಮಾಡಬೇಕಾಗಿದೆ. ಆಸ್ಪತ್ರೆಗೆ ಹೋಗುವ ರೋಗಿಗಳಿಗೆ ತುಂಬಾ ಸಮಸ್ಯೆಯಾಗಿದೆ. ಆದರಿಂದ ಕೂಡಲೇ ಸಾರಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಅಂಬಳೆ ಗ್ರಾಮದಲ್ಲಿ 2 ನ್ಯಾಯ ಬೆಲೆ ಅಂಗಡಿಗಳಿದ್ದು, ಅಂಬಳೆ ಅಂಬೇಡ್ಕರ್‌ ಬಡಾವಣೆ 1.5 ಕಿ.ಮೀ ದೂರದಲ್ಲಿ ಪ್ರತ್ಯೇಕವಾಗಿರುತ್ತದೆ. ನಾವುಗಳು ಪ್ರತಿ ತಿಂಗಳ ಪಡಿತರ ಪಡೆಯಲು ಅಂಬಳೆಗೆ, ಒಂದು ದಿನ ಬಯೋಮೆಟ್ರಿಕ್‌ ಹಾಕಲು ಮತ್ತೂಂದು ಪಡಿತರ ಪಡೆಯಲು ಎರಡು ದಿನ ಕೂಲಿ ಕೆಲಸ ಬಿಟ್ಟು ಹೋಗಬೇಕಾಗಿರುತ್ತದೆ.
ಆದ್ದರಿಂದ ಅಂಬಳೆ ಗ್ರಾಮದಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಠ ಜಾತಿಯ 250ಕ್ಕೂ ಹೆಚ್ಚು ಕುಟುಂಬವನ್ನು ಹೊಂದಿರುವ ಅಂಬೇಡ್ಕರ್‌ ಬಡಾವಣೆಯಲ್ಲಿ ಸುಮಾರು 250 ರಿಂದ 300 ಪಡಿತರ ಕಾರ್ಡ್‌ಗಳಿದ್ದು, ಪ್ರತ್ಯೇಕವಾಗಿ ಅಂಬೇಡ್ಕರ್‌ ಬಡಾವಣೆಗೆ ನ್ಯಾಯ ಬೆಲೆ ಅಂಗಡಿ ಮಂಜೂರು ಮಾಡಿಕೊಡುವಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ ಯಾವುದೇ ಪ್ರಯೋಜನವಾಗಿಲ್ಲ ಎಂದರು.
 ಮೇಲಿನ ಮೂರು ಸಮಸ್ಯೆಗಳನ್ನು ಈಡೇರಿಸದಿದ್ದಲ್ಲಿ ಏ. 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಾಗಿ ಅಂಬಳೆ ಅಂಬೇಡ್ಕರ್‌ ಬಡಾವಣೆಯ ಯಜ ಮಾನರು, ಮಹಿಳಾ ಸ್ವಸಹಾಯ ಸಂಘ, ಅಂಬೇಡ್ಕರ್‌ ಯುವಜನ ಸಂಘ ಪದಾಧಿಕಾರಿಗಳು, ನಿವಾಸಿಗಳು, ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಎಚ್ಚರಿಸಿದ್ದಾರೆ. ಬಡಾವಣೆಯ ಮುಖಂಡರಾದ ಎಸ್‌.ನಂಜುಂಡಸ್ವಾಮಿ, ನಾಗಯ್ಯ, ಪಿ. ಹೊನ್ನಯ್ಯ, ಆರ್‌.ಮಹೇಶ್‌, ಎಸ್‌.ಶಂಕರಪ್ಪ, ಚಾಮರಾಜ ಹಾಜರಿದ್ದರು.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

9-chamarajanagara

Chamarajanagar: ದಲಿತರಿಗೆ ಬಾಡಿಗೆ ಮನೆ ನೀಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.