ಆಂಜನೇಯಪುರದಲ್ಲಿ ನೀರಿಗೆ ಹಾಹಾಕಾರ

ನೀರಿನ ಸಮಸ್ಯೆ ಇದ್ದರೂ ಬಗೆಹರಿಸದ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ಜನಪ್ರತಿನಿಧಿಗಳು: ಆರೋಪ

Team Udayavani, May 21, 2019, 8:04 AM IST

chamarajnagar-tdy-1..

ಬತ್ತಿಹೋಗಿರುವ ನೀರಿನ ತೊಂಬೆ ಬಳಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು.

ಕೊಳ್ಳೇಗಾಲ: ಒಂದೆಡೆ ಬೇಸಿಗೆ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮತ್ತೂದೆಡೆ ಸಕಾಲದಲ್ಲಿ ಮಳೆಯಾಗದೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದು, ಸಂಬಂಧಿಸಿದ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಮುಂದಿನ ದಿನಗಳಲ್ಲಿ ನೀರಿನ ಹಾಹಾಕಾರವನ್ನು ಹೋಗಲಾಡಿಸಿ ಜನರ ಸಮಸ್ಯೆ ಬಗೆಹರಿಸುವರೇ ಎಂದು ತಾಲೂಕಿನ ಮಧುವನಹಳ್ಳಿ ಗ್ರಾಪಂನ ಆಂಜನೇಯಪುರ ಗ್ರಾಮಸ್ಥರ ಕಾದುಕುಳಿತಿದ್ದಾರೆ.

ಹನಿ ನೀರಿಗೂ ಹಾಹಾಕಾರ: ಮಧುವನಹಳ್ಳಿ ಗ್ರಾಪಂ ಸಮೀಪದಲ್ಲೇ ಆಂಜನೇಯಪುರ 7ನೇ ವಾರ್ಡ್‌ ಇದ್ದು, ಇಲ್ಲಿ ಸಾವಿರಾರು ಉಪ್ಪಾರ ಸಮಾಜದ ಬಡಜನರು ವಾಸವಾಗಿದ್ದಾರೆ. ಇಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಸಲುವಾಗಿ ಎರಡು ನೀರಿನ ತೊಂಬೆಗಳನ್ನು ನಿರ್ಮಾಣ ಮಾಡಲಾಗಿದೆ ಆದರೆ, ಆ ನೀರಿನ ತೊಂಬೆಗಳು ಬತ್ತಿ ಹೋಗಿ ಅನೇಕ ತಿಂಗಳುಗಲೇ ಕಳೆದಿದ್ದು ಇಲ್ಲಿನ ಗ್ರಾಮಸ್ಥರು ಹನಿ ನೀರಿಗೂ ಪರಿತಪಿಸುವಂತಾಗಿದೆ.

ಬತ್ತಿ ಹೋಗಿರುವ ತೊಂಬೆಗಳು: ಬತ್ತಿಹೋಗಿರುವ ತೊಂಬೆಯಲ್ಲಿ ಹನಿ ನೀರು ಸಿಗದೆ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಪಾರ ತೊಂದರೆ ಎದುರಿ ಸುವಂತಾಗಿದ್ದು, ನೀರಿಗಾಗಿ ಗ್ರಾಮದ ಕೊನೆಯ ಲ್ಲಿರುವ ಸರ್ಕಾರಿ ಶಾಲೆಯ ಮುಂಭಾಗದಲ್ಲಿರುವ ಕೊಳವೆ ಬಾವಿಯಲ್ಲಿನ ನೀರನ್ನು ಬಳಸಿ ತಮ್ಮ ದೈನಂ ದಿನ ಕೆಲಸ ಮಾಡುವಂತಹ ಸ್ಥಿತಿ ಉಲ್ಬಣವಾಗಿದೆ.

ಗಮನಹರಿಸದ ಅಧಿಕಾರಿಗಳು: ಸರ್ಕಾರ ಬರ ಮತ್ತು ಬೇಸಿಗೆಯನ್ನು ಸುಸೂತ್ರವಾಗಿ ನಿಭಾಯಿಸಲು ಹಣದ ಕೊರತೆ ಇಲ್ಲ ಎಂದು ಹೇಳುತ್ತಾರೆ. ಆದರೆ ಇಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಇದ್ದರೂ ಸಹ ಗ್ರಾಪಂ ಅಧಿಕಾರಿಗಳಾಗಲಿ, ಚುನಾಯಿತ ಪ್ರತಿನಿಧಿಗಳಾಗಲಿ ಇತ್ತ ಗಮನ ಹರಿಸದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಮಸ್ಥರ ಆರೋಪ: ಗ್ರಾಪಂನ ಮಾಜಿ ಸದಸ್ಯೆ ಶಿವನಂಜಮ್ಮ ಮತ್ತು ವಿವಿಧ ಮಹಿಳಾ ಸಂಘದ ಬಸಮ್ಮಣಿ, ರುದ್ರಮ್ಮ, ಚೆನ್ನಾಜಮ್ಮ ಸೇರಿದಂತೆ ಹಲವಾರು ಮಹಿಳೆಯರು ಕಳೆದ ಆರು ತಿಂಗಳ ಹಿಂದೆ ಗ್ರಾಪಂ ಅಧಿಕಾರಿಗಳಿಗೆ ಮತ್ತು ಗ್ರಾಪಂ ಅಧ್ಯಕ್ಷೆ ಯಶೋಧಮ್ಮ ಅವರನ್ನು ಸಂಪರ್ಕಿಸಿ ಗ್ರಾಮದಲ್ಲಿ ಕುಡಿಯುವ ನೀರಿಗೆ ಅಪಾರ ತೊಂದರೆ ಎದುರಾಗಿದ್ದು, ಕೂಡಲೇ ಕೊಳವೆ ಬಾವಿಯೊಂದನ್ನು ನಿರ್ಮಾಣ ಮಾಡಿಕೊಡುವಂತೆ ಹಲವಾರು ಬಾರಿ ಮನವಿ ಮಾಡಿದ್ದರೂ ಸಹ ಈ ಬಗ್ಗೆ ಯಾರು ಗಮನ ಹರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ನೀರು ಗಂಟಿ ನಾಪತ್ತೆ: ಗ್ರಾಪಂ ವತಿಯಿಂದ ನಿಯೋಜನೆಗೊಂಡಿರುವ ವಾಟರ್‌ಮ್ಯಾನ್‌ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಕುಡಿಯುವ ನೀರಿನ ತೊಂದರೆಯನ್ನು ನಿವಾರಣೆ ಮಾಡಬೇಕಾಗಿರುವುದು ಅವನ ಕೆಲಸ. ಆದರೆ ವಾಟರ್‌ಮ್ಯಾನ್‌ ಬಂದಾಪುಟ್ಟ, ಹೋದಾ ಪುಟ್ಟ ಅನ್ನುವ ಗಾದೆ ಮಾತಿನಂತೆ ಎಲ್ಲೋ ಒಂದು ದಿನ ಬಂದು ಮುಖ ತೋರಿಸಿ ಹೋದರೆ ಮರಳಿ ಗ್ರಾಮಕ್ಕೆ ಬರುವುದೇ ಇಲ್ಲ ಎಂದು ಗ್ರಾಮಸ್ಥರು ದೂರಿದರು.

ಗಮನಹರಿಸದ ಚುನಾಯಿತ ಪ್ರತಿನಿಧಿಗಳು: ಮತ ಪಡೆಯಲು ರಾಜಕಾರಣಿಗಳು ಬೀದಿ ಬೀದಿಗೆ ಅಲೆಯುತ್ತಾರೆ. ಆದರೆ ಗೆದ್ದ ಬಳಿಕ ನಮ್ಮತ್ತ ಯಾರೂ ನೋಡುವುದಿಲ್ಲ. ನಮ್ಮ ಕಷ್ಟ ಕೇಳುವವರು ಇಲ್ಲ. ಇದರಿಂದಾಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಹಾಹಾಕಾರ ಉಂಟಾಗಿದ್ದು, ಅಧಿಕಾರಿಗಳು ಮತ್ತು ಚುನಾಯಿತಿ ಪ್ರತಿನಿಧಿಗಳು ಎಚ್ಚೆತ್ತು ಕುಡಿಯುವ ನೀರು ಪೂರೈಕೆಗೆ ಗಮನ ಹರಿಸುವರೇ ಗ್ರಾಮಸ್ಥರ ಯಕ್ಷಪ್ರಶ್ನೆಯಾಗಿದೆ.

● ಡಿ.ನಟರಾಜು

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.