ಅಂಗಡಿಗಳಲ್ಲಿ ಕನ್ನಡ ಫಲಕ ಅಳವಡಿಕೆಗೆ ವಾರ ಗಡುವು
Team Udayavani, Dec 19, 2021, 1:07 PM IST
ಚಾಮರಾಜನಗರ: ನಗರದ ಅಂಗಡಿ ಮುಂಗಟ್ಟು, ವಾಣಿಜ್ಯ ಸಮುಚ್ಚಯಗಳಲ್ಲಿ ಕನ್ನಡಭಾಷೆಯ ನಾಮಫಲಕ ಅಳವಡಿಕೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾಸೇನೆ(ಕರಸೇ) ವತಿಯಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.
ನಗರದ ನಗರಸಭೆ ಕಚೇರಿ ಆವರಣದಲ್ಲಿ ಕರ್ನಾಟಕ ರಕ್ಷಣಾಸೇನೆ ಪದಾಧಿಕಾರಿಗಳು ಧರಣಿ ನಡೆಸಿ ಘೋಷಣೆ ಕೂಗಿದರು. ಕರ್ನಾಟಕ ರಕ್ಷಣಾಸೇನೆ ಜಿಲ್ಲಾಧ್ಯಕ್ಷ ಮಿಂಚುಾಗೇಂದ್ರ ಮಾತನಾಡಿ, ನಗರದ ವಿವಿಧ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡುತ್ತಿಲ್ಲ. ಕನ್ನಡ ಅಕ್ಷರಗಳನ್ನು ಚಿಕ್ಕದಾಗಿಯೂ, ಇಂಗ್ಲಿಷ್ ಅಕ್ಷರಗಳನ್ನು ದೊಡ್ಡದಾಗಿಯೂ ಬರೆಸಲಾಗುತ್ತದೆ. ಕರ್ನಾಟಕದಲ್ಲಿ ಅಂಗಡಿಗಳ ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಅನ್ಯಭಾಷೆಗಿಂತ ದಪ್ಪ ಅಕ್ಷರದಲ್ಲಿ ಫಲಕ ಬರೆಸಬೇಕೆಂಬ ನಿಯಮವಿದೆ. ಆದರೆ ಇದನ್ನು ಉಲ್ಲಂಘಿಸಲಾಗುತ್ತಿದೆ ಎಂದರು.
ವಾರದೊಳಗೆ ನಗರದ ಎಲ್ಲ ಅಂಗಡಿಮುಂಗಟ್ಟು, ವಾಣಿಜ್ಯ ಸಮುಚ್ಚಯಗಳ ನಾಮಫಲಕಗಳಲ್ಲಿ ಕನ್ನಡಭಾಷೆಯ ಅಕ್ಷರಗಳು ದೊಡ್ಡದಾಗಿ ಕಾಣಿಸುವಂತೆ ಬರೆಸಲು ನಗರಸಭೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಸಿ.ಡಿ.ಪ್ರಕಾಶ್, ನಗರಘಟಕದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಕಾರ್ಯದರ್ಶಿ ರುದ್ರ, ಸಂಚಾಲಕ ಮಹೇಶ್, ಆಟೋಮಹದೇವಸ್ವಾಮಿ ಸೇರಿದಂತೆ ಗ್ರಾಮಘಟಕದ ಪದಾಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ
RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ
Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!
Mourning: ಮನಮೋಹನ್ ಸಿಂಗ್ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ
Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್ ಆಸ್ಪತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.