ಬೈಕ್ ರ್ಯಾಲಿ ಮೂಲಕ ಸ್ವಾಗತ
Team Udayavani, Jan 28, 2021, 4:30 PM IST
ಚಾಮರಾಜನಗರ: ನಗರದಲ್ಲಿ ಗುರುವಾರ ನಡೆಯಲಿರುವ ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷರಾದ ತಿಪ್ಪರಾಜು ಹವಾಲ್ದಾರ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಜಂಗಲ್ ರೆಸಾರ್ಟ್ ಅಧ್ಯಕ್ಷ ಅಪ್ಪಣ್ಣ ಅವರನ್ನು ಬಿಜೆಪಿ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬರಮಾಡಿಕೊಂಡರು.
ಗುರುವಾರ ಸಂಜೆ ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷರು, ಎಸ್‌ಟಿ ಮೋರ್ಚಾ ಅಧ್ಯಕ್ಷರು ಮತ್ತಿತರ ಮುಖಂಡರನ್ನು ನಗರದ ಸಂತೆಮರಹಳ್ಳಿ ವೃತ್ತದಲ್ಲಿ ರಾಜ್ಯ ಎಸ್‌ಟಿ ಮೋರ್ಚಾದ ಉಪಾಧ್ಯಕ್ಷ ಎಂ.ರಾಮಚಂದ್ರ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಸುಂದರ್, ರೈತ ಮುಖಂಡ ಮಲ್ಲೇಶ್ ಮತ್ತಿತರರು ಹೂಗುತ್ಛ ನೀಡಿ ಸ್ವಾಗತಿಸಿದರು.
ನಂತರ ಹೂವಿನ ಅಲಂಕೃತ ತೆರದ ವಾಹನದಲ್ಲಿ ಆದಿಶಕ್ತಿ ದೇವಸ್ಥಾನದ ಆವರಣದಿಂದ ಮೆರವಣಿಗೆಯಲ್ಲಿ ಸಂತೇಮರಹಳ್ಳಿ ವೃತ್ತ, ಡೀವಿಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಸತ್ಯಮಂಗಲ ರಸ್ತೆ ಮೂಲಕ ಅಂಬೇಡ್ಕರ್ ಭವನದ ತನಕ ಮೆರವಣಿಗೆಯಲ್ಲಿ ಕರೆದೊಯ್ಯಲಾಯಿತು. ಬೈಕ್ ರ್ಯಾಲಿಯ ಉದ್ದಕ್ಕೂ ವಂದೇ ಮಾತರಂ, ಭಾರತ್ ಮಾತಾಕಿ ಜೈ ಘೋಷಣೆ ಹಾಕಲಾಯಿತು.
ಇದನ್ನೂ ಓದಿ:31ರಿಂದ ಪೋಲಿಯೋ ಲಸಿಕೆ ಅಭಿಯಾನ
ಬೈಕ್ ರ್ಯಾಲಿಯಲ್ಲಿ ರಾಜ್ಯ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಜಿಪಂ ಸದಸ್ಯ ಮಂಜುಳಾ, ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಜಯಸುಂದರ, ಜಿಲ್ಲಾ ಮಾಧ್ಯಮ್ ಪ್ರಮುಖ್ ಮಂಜುನಾಥ್, ಸಹ ಪ್ರಮುಖ್ ಚಂದ್ರಶೇಖರ್ ವಿವಿಧ ಮೋರ್ಚಾಗಳ ಪಧಾದಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.