ನೀರಿಗಾಗಿ ಮಹಿಳೆಯರ ಪ್ರತಿಭಟನೆ
Team Udayavani, May 30, 2020, 5:04 AM IST
ಯಳಂದೂರು: ತಾಲೂಕಿನ ಕಂದಹಳ್ಳಿಯಲ್ಲಿ ಒಂದು ತಿಂಗಳಿಂದಲೂ ಕುಡಿಯುವ ನೀರು ಸರಬರಾಜಾಗುತ್ತಿಲ್ಲ ಎಂದು ಇಲ್ಲಿನ ಮಹಿಳೆಯರು ಖಾಲಿ ಕೊಡಗಳು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು
. ಗ್ರಾಮದ ನಾಯಕರ ಹೊಸ ಬಡಾವಣೆಗೆ ಓವರ್ ಹೆಡ್ ಟ್ಯಾಂಕ್ ನಿಂದ ಕುಡಿಯುವ ನೀರು ಪೂರೈಸುವ ಪೈಪ್ ಒಡೆದು ಹೋಗಿದೆ. ದುರಸ್ತಿಗೆಂದು ಇದಕ್ಕೆ ಹಳ್ಳ ತೆಗೆದು ಹಾಗೆ ಬಿಡಲಾಗಿದೆ. ಆದರೆ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಮಹಿಳೆಯರು ದೂರಿದರು. 50ಕ್ಕೂ ಹೆಚ್ಚು ಕುಟುಂಬಗಳು ನೆಲೆಸಿರುವ ಬಡಾವಣೆಯಲ್ಲಿ ನೀರಿಗೆ ತುಂಬಾ ಸಮಸ್ಯೆಯಾಗಿದೆ.
ಈಚೆಗೆ ಸುರಿದ ಮಳೆಯಿಂ ದ ಪೈಪ್ ಸರಿಪಡಿಸಲು ಅಗೆದ ಗುಂಡಿಯಲ್ಲಿ ಇಲ್ಲಿ ನೀರು ಸಂಗ್ರಹವಾಗಿದೆ. ರಾತ್ರಿ ವೇಳೆ ಗುಂಡಿಯಲ್ಲಿ ಬಿದ್ದು ಕೆಲವರು ಗಾಯಗೊಂಡಿದ್ದಾರೆ. ದುಗ್ಗಹಟ್ಟಿ ಗ್ರಾಪಂಗೆ ಹಲವು ಬಾರಿ ದೂರು ನೀಡಿದ್ದರೂ ಕ್ರಮ ವಹಿಸಿಲ್ಲ. ಈಗಲಾದರೂ ಸಂಬಂಧಪಟ್ಟವರು ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.ಗ್ರಾಮಸ್ಥರಾದ ಲಕ್ಷ್ಮೀ, ಕಂದಹಳ್ಳಿ ದೊರೆ, ಮಣಿಯಮ್ಮ, ಮಹಾದೇವಮ್ಮ, ಶಾಂತಮ್ಮ, ಶಾರದಮ್ಮ, ಸರೋಜಮ್ಮ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.