ಶ್ರಮವಹಿಸಿ ವ್ಯಾಸಂಗ ಮಾಡಿದ್ರೆ ಮಾತ್ರ ಯಶಸ್ಸು

ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಬಸಪ್ಪ ಸಲಹೆ

Team Udayavani, Jul 29, 2019, 10:35 AM IST

cn-tdy-2

ಚಾಮರಾಜನಗರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪ್ರತಿಭೆ ಇದ್ದರಷ್ಟೇ ಅವಕಾಶಗಳು ದೊರೆಯಲು ಸಾಧ್ಯ. ಆದ್ದರಿಂದ ವಿದ್ಯಾರ್ಥಿಗಳು ಶ್ರಮ ವಹಿಸಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕಗಳನ್ನು ಗಳಿಸಿ ತಮ್ಮ ಜೀವನ ರೂಪಿಸಿಕೊಳ್ಳಬೇಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ, ಬಸವೇಶ್ವರ ಪತ್ತಿನ ಸಹಕಾರ ಸಂಘ ಹಾಗೂ ಸಂಗಮ ಗೃಹ ನಿರ್ಮಾಣ ಸಹಕಾರ ಸಂಘಗಳು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸಪ್ಪ ಸಲಹೆ ನೀಡಿದರು.

ಜಿಲ್ಲಾ ವೀರಶೈವ- ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘ, ಬಸವೇಶ್ವರ ಪತ್ತಿನ ಸಹಕಾರ ಮತ್ತು ಸಂಗಮ ಗೃಹ ನಿರ್ಮಾಣ ಸಹಕಾರ ಸಂಘದ ವತಿ ಯಿಂದ ನಗರದ ನಂದಿ ಭವನದಲ್ಲಿ ನಡೆದ ವೀರಶೈವ ಲಿಂಗಾಯತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶ್ರಮ ವಹಿಸಿ ಓದಿ: ವಿದ್ಯಾರ್ಥಿಯ ಸಾಧನೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದೆ. ಇದು ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಬೇಕು. ಎಸ್‌ಎಸ್‌ಎಲ್ಸಿ, ಪಿಯುಸಿ ನಂತರ ಉತ್ತಮ ವ್ಯಾಸಂಗ ನಡೆಸಿ ಉದ್ಯೋಗಕ್ಕೆ ಅವಕಾಶವಿರುವ ಕೋರ್ಸ್‌ಗಳನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬೇಕು. ಶ್ರಮ ವಹಿಸಿ ಓದಿ, ಉನ್ನತ ಅಂಕಗಳನ್ನು ಗಳಿಸಿ ಜೀವನದಲ್ಲಿ ಮುಂದೆ ಬರಬೇಕು ಎಂದು ಹೇಳಿದರು.

ಸದಸ್ಯರಿಗೆ ನಿವೇಶನ: ಮೂರೂ ಸಂಘಗಳು ಜಿಲ್ಲೆಯಲ್ಲಿ ಸದಸ್ಯರ ಆಶೋತ್ತರವಾಗಿ ಸ್ಪಂದಿಸುವ ಮೂಲಕ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿವೆ. ಬಸವೇಶ್ವರ ಪತ್ತಿನ ಸಹಕಾರ ಸಂಘದಿಂದ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಸದಸ್ಯರ ಆರ್ಥಿಕ ಮಟ್ಟ ಸುಧಾರಿಸುವ ಕೆಲಸ ಮಾಡಲಾಗುತ್ತಿದೆ. ಮರಿಯಾಲದ ಬಳಿ ಸಂಘದ ಸದಸ್ಯರಿಗೆ ನಿವೇಶನ ನೀಡಲಾಗಿದೆ ಎಂದರು.

ನಿರಂತರವಾಗಿ ಪುಣ್ಯದ ಕೆಲಸ ಮಾಡಿ: ನಗರದ ವಿರಕ್ತ ಮಠದ ಚನ್ನಬಸವಸ್ವಾಮೀಜಿ ಮಾತನಾಡಿ, ಸಹಕಾರ ಸಂಘಗಳ ಮೂಲಕ ಸಮುದಾಯದ ಬಂಧುಗಳು ಆರ್ಥಿಕ ಅಭಿವೃದ್ಧಿಯನ್ನುಹೊಂದುವ ಜೊತೆಗೆ ಸಮಾಜವನ್ನು ಜಾಗೃತಿಗೊಳಿಸುವ ಪುಣ್ಯದ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರಲಾಗುತ್ತಿದೆ. ಮಹಾಮನೆಯ ಮೂಲಕ ಬಸವಣ್ಣನವರ ಪರಿಕಲ್ಪನೆಯನ್ನು 21ನೇ ಶತಮಾನದಲ್ಲಿ ಪ್ರಚಲಿತಗೊಳಿಸುವ ಕಾರ್ಯಕ್ರಮಗಳು ನಡೆಯುತ್ತಿವೆ. ಎಲ್ಲ ಸದಸ್ಯರೂ ಸಹ ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಯನ್ನು ಹೊಂದಲಿ ಎಂದು ಶುಭ ಕೋರಿದರು.

ಜಿಲ್ಲೆಗೆ ಕೀರ್ತಿ ತಂದಿದ್ದಾರೆ: ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಮಾತನಾಡಿ, ನಮ್ಮ ಸಮುದಾಯದ ಹಲವು ವಿದ್ಯಾರ್ಥಿಗಳು ಈ ಬಾರಿಯ ಎಸ್‌.ಎಸ್‌.ಎಲ್.ಸಿ. ಮತ್ತು ದ್ವಿತೀಯ ಪಿಯುಸಿಯಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾಗಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರಿಗೆ ಸಂಘದ ಪರವಾಗಿ ಶುಭಾಶಯಗಳನ್ನು ತಿಳಿಸುತ್ತೇನೆ ಎಂದರು. ಇದೇ ರೀತಿಯಾಗಿ ಅವರ ಮುಂದಿನ ಭವಿಷ್ಯವು ಉಜ್ವಲವಾಗಿರಲೆಂದು ಹಾರೈಸಿದರು.

ಮೂರು ಸಂಘಗಳ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾ ಪುರಸ್ಕಾರ, ನಿವೃತ್ತರಿಗೆ ಸನ್ಮಾನ, ಸಾಧಕರಿಗೆ ಅಭಿನಂದನೆ‌ ಹಾಗೂ ಸರ್ವ ಸದಸ್ಯರ ಸಭೆಯನ್ನು ನಡೆಸಲಾಯಿತು.

ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸಪ್ಪ, ಬಸವೇಶ್ವರ ಪತ್ತಿನ ಸಂಘದ ಅಧ್ಯಕ್ಷ ಯೋಗ ಪ್ರಕಾಶ್‌, ಸಂಗಮ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಎಲ್. ದೇವಣ್ಣ, ಸಂಘದ ಪದಾಧಿಕಾರಿಗಳಾದ ಸಿದ್ದಮಲ್ಲಪ್ಪ, ಎಚ್.ಎಂ.ಗುರುಸ್ವಾಮಿ, ಗಂಗಾಧರ್‌, ಕೆ.ಬಿ.ಜ್ಯೋತಿ, ಎನ್‌.ಮಹದೇವಸ್ವಾಮಿ, ಪಿ.ಬಸವಣ್ಣ, ಆರ್‌.ಜಿ. ಪುಷ್ಪಲತಾ, ಎಸ್‌.ಮಹದೇವಸ್ವಾಮಿ, ಜಿ.ಶಿವಮಲ್ಲಪ್ಪ, ವಿ.ನಂದೀಶ್‌, ಶಂಭುಲಿಂಗಸ್ವಾಮಿ, ಜಿ.ನಾಗರಾಜು, ನಾಗರಾಜಪ್ಪ, ಎಂ.ಕುಮಾರ್‌, ಜಯಶಂಕರಮೂರ್ತಿ, ಎಸ್‌.ಶಂಭುಲಿಂಗಪ್ಪ, ಅರ್ಕಪ್ಪ, ಪ್ರಸಾದ್‌, ಪರಶಿವಮೂರ್ತಿ ಸೇರಿದಂತೆ ಸಮುದಾಯದ ಮುಖಂಡರು ಮತ್ತು ವಿದ್ಯಾರ್ಥಿಗಳ ಪೋಷಕರು ಹಾಜರಿದ್ದರು.

ಟಾಪ್ ನ್ಯೂಸ್

Hubli: Fire incident at Ayyappa camp: Nine devotees seriously injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubli: Fire incident at Ayyappa camp: Nine devotees seriously injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.