ಪ್ರತಿಯೊಬ್ಬರಿಗೂ ಗ್ರಾಹಕರ ಹಕ್ಕುಗಳ ಅರಿವು ಅಗತ್ಯ
Team Udayavani, Mar 16, 2023, 11:56 AM IST
ಚಾಮರಾಜನಗರ : ಗ್ರಾಹಕರ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರಿಗೂ ಜಾಗೃತಿ ಅವಶ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿ, ಬುಧವಾರ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮೊಬಿಲಿಟಿ ಇಂಡಿಯಾ ಸಹಯೋಗದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನದ ಅಂಗವಾಗಿ ಪ್ರಾಧಿಕಾರದ ಕಾನೂನು ಸ್ವಯಂ ಸೇವಕರು ಮತ್ತು ದಿವ್ಯಾಂಗರಿಗೆ ಸಹಾಯಕ ಸಾಧನ ಸಲಕರಣೆ ವಿತರಣೆ ಕುರಿತು ಹಮ್ಮಿಕೊಳ್ಳಲಾಗಿದ್ದ ಅರಿವು ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರಿಗೆ ಅರಿವು ಅಗತ್ಯ: ಗ್ರಾಹಕರ ದಿನದ ಉದ್ದೇಶ ಮತ್ತು ಹಕ್ಕುಗಳ ಬಗ್ಗೆ ಜಾಗೃತಿ ಉಂಟಾದಾಗ ಮಾತ್ರ ಅರಿವು ಕಾರ್ಯಕ್ರಮಗಳು ಯಶಸ್ವಿ ಯಾಗಲೂ ಸಾಧ್ಯ. ಸರ್ಕಾರವು ಗ್ರಾಹಕರ ಹಕ್ಕುಗಳಿಗೆ ಸಂಬಂ ಧಿಸಿದಂತೆ ಹಲವಾರು ಜಾಗೃತಿ ಕಾರ್ಯ ಕ್ರಮಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಬೇಕು. ಎಲ್ಲಾ ವಸ್ತುಗಳು ನಿರ್ದಿಷ್ಟ ಕಾಲಾವಕಾಶ ಹೊಂದಿರುತ್ತದೆ. ಈ ಬಗ್ಗೆ ಸಾರ್ವಜನಿಕರಿಗೆ ಅರಿವು ಅಗತ್ಯವಾಗಿದೆ ಎಂದರು.
ವಸ್ತುವಿನ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ: ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತೂರು ಇಂದುಶೇಖರ್ ಮಾತನಾಡಿ, ಗ್ರಾಹಕರ ಹಕ್ಕುಗಳ ದಿನವು ಸರಕು ಮತ್ತು ಸೇವೆಗಳಿಗೆ ಸಂಬಂಧಿಸಿದ ದಿನವಾಗಿದೆ. ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಂಪೂರ್ಣವಾಗಿ ಅರಿಯಬೇಕು. ಪ್ರತಿಯೊಂದು ವಸ್ತುಗಳನ್ನು ಖರೀದಿಸುವ ಸಂದರ್ಭದಲ್ಲಿ ವಸ್ತುವಿನ ಬಗ್ಗೆ ಸರಿಯಾಗಿ ತಿಳಿದುಕೊಂಡು ವ್ಯವಹರಿಸಬೇಕು. ಮಾರುಕಟ್ಟೆಯಲ್ಲಿ ಕಂಡು ಬರುವ ಬಣ್ಣ ಬಣ್ಣದ ಪದಾರ್ಥಗಳಿಗೆ ಮಾರು ಹೋಗಬಾರದು ಎಂದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎಚ್. ಎನ್. ಶ್ರೀನಿಧಿ, ಮೊಬಿಲಿಟಿ ಇಂಡಿಯಾದ ಎಸ್. ಎನ್. ಆನಂದ್, ಕಾರ್ಮಿಕ ಇಲಾಖೆಯ ನಿರೀಕ್ಷಕಿ ವೀಣಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.