ಯಳಂದೂರಿನಲ್ಲೂ ‘ಪಂಚಲಿಂಗ ದರ್ಶನ’: ಐತಿಹ್ಯ ಸಾರುವ 450 ವರ್ಷಗಳ ‘ಬಳೇಮಂಟಪ’

Team Udayavani, Dec 14, 2020, 4:31 PM IST

yalandur-3

ಯಳಂದೂರು (ಚಾಮರಾಜನಗರ): ರಾಜ್ಯದಲ್ಲೇ ಜಿಲ್ಲೆಯ ಅತ್ಯಂತ ಚಿಕ್ಕ ತಾಲೂಕು ಹಾಗೂ ಪಟ್ಟಣವಾಗಿ ಗುರುತಿಸಿಕೊಂಡಿರುವ ಯಳಂದೂರು ಪಟ್ಟಣದ ಸಾಹಿತಿಕವಾಗಿ ಹಾಗೂ ಐತಿಹಾಸಿಕವಾಗಿ ಅತ್ಯಂತ ಮಹತ್ವ ಪಡೆದುಕೊಂಡಿದೆ.

ಇಲ್ಲಿನ ಬಳೇಮಂಟಪ ಇಡೀ ದೇಶದಲ್ಲೇ ಒಂದೇ ಕಲ್ಲಿನಲ್ಲಿ ಕೆತ್ತಿರುವ ವಿಶಿಷ್ಟ ಕಲ್ಲಿನ ಬಳೆಗಳಿಂದ ವಿಖ್ಯಾತವಾಗಿದೆ. ಗೌರೇಶ್ವರ ಹಾಗೂ ಪಾರ್ವತಾಂಬೆ ದೇಗುಲಗಳಿಗೆ ಇದು ದ್ವಾರ ಮಂಟಪವಾಗಿದೆ. ಇದಕ್ಕೆ 450 ಕ್ಕೂ ಹೆಚ್ಚು ವರ್ಷಗಳ ಐತಿಹ್ಯವಿದೆ. ಇದರ ಹಿಂಭಾಗದಲ್ಲೇ ಪಂಚಲಿಂಗಗಳೂ ಇವೆ. ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಸಮಯದಲ್ಲಿ ಇಲ್ಲೂ ಪಂಚಲಿಂಗಗಳ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಪಂಚಲಿಂಗ ದರ್ಶನ ನಡೆಸಲು ಸಿದ್ಧತೆಗಳು ಆರಂಭಗೊಂಡಿವೆ. ಇಲ್ಲಿರುವ ಮಲ್ಲಿಕಾರ್ಜುನೇಶ್ವರ, ಜಂಬುನಾಥೇಶ್ವರ, ಅರುಣಾಚಲೇಶ್ವರ, ತಾರಕೇಶ್ವರ, ಚಿದಂಬರೇಶ್ವರ ಎಂಬ 5 ಲಿಂಗಗಳು ಭಾನುವಾರ ರಾತ್ರಿಯಿಂದಲೇ ವಿಶೇಷ ಪೂಜೆಗಳು ನೆರವೇರಲಿವೆ. ಪ್ರತಿ ಲಿಂಗಕ್ಕೂ ಕೊಳಗಧಾರಣೆ ಮಾಡಿ, ವಿಶೇಷ ಅಲಂಕಾರ ಮಾಡಿ, ಗಣಪತಿ ಹೋಮ, ರುದ್ರಭಿಷೇಕ ನಡೆಯಲಿದ್ದು ಇದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರೊಂದಿಗೆ ಗೌರೇಶ್ವರ ಹಾಗೂ ಪಾರ್ವತಾಂಬೆಗೂ ವಿಶೇಷ ಪೂಜೆಗಳು ನಡೆಯಲಿವೆ. ಅಮವಾಸ್ಯೆ ದಿನವಾಗಿರು ಸೋಮವಾರ ಬೆಳಿಗ್ಗೆ ವಿಶೇಷ ಪೂಜೆಗಳು ನೆರವೇರಲಿದ್ದು ಪ್ರಸಾದ ವಿನಿಯೋಗಕ್ಕೂ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಸರಳ ಆಚರಣೆಗೆ ಕ್ರಮ:

ಐದು ಶ್ರಾವಣ ಹಾಗೂ ಐದು ಕಾರ್ತಿಕ ವಾರಗಳು ಬರುವ ವರ್ಷದಲ್ಲಿ ಪಂಚಲಿಂಗ ದರ್ಶನ ನಡೆಯುತ್ತದೆ. ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಸಮಯದಲ್ಲೇ ಯಳಂದೂರು ಪಟ್ಟಣದಲ್ಲಿರುವ ದೇಗುಲದಲ್ಲೂ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಈ ಬಾರಿ ಕೋವಿಡ್ ಇರುವುದರಿಂದ ಸರಳವಾಗಿ ದರ್ಶನಕ್ಕೆ ವ್ಯವಸ್ಥೆ ಮಾಡುವಂತೆ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳು ಸೂಚನೆನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರಬಾರದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು, ಸ್ಯಾನಿಟೈಜರ್ ಬಳಕೆ, ಕಡ್ಡಾಯ ಮಾಸ್ಕ್ ಬಳಕೆಗೆ ಈಗಾಗಲೇ ಪ್ರಚಾರ ಮಾಡಲಾಗಿದೆ. ಈ ದೇಗುಲ ಮುಜರಾಯಿ ಇಲಾಖೆ ವ್ಯಾಪ್ತಿಗೆ ಬಂದರೂ ಇದಕ್ಕಾಗಿ ವಿಶೇಷ ಅನುದಾನ ಬರುವುದಿಲ್ಲ. ಹಾಗಾಗಿ ಭಕ್ತರೇ ಕೆಲವು ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದು ಸರಳವಾಗಿ ಅರ್ಥಪೂರ್ಣವಾಗಿ ಉತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ದೇಗುಲದ ಅರ್ಚಕ ಮಹೇಶ್ ಚಂದ್ರಮೌಳಿ ದೀಕ್ಷಿತ್ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.