“ಈಶ್ವರಪ್ಪ ಮನಸ್ಸಲ್ಲಿ ಬಿಜೆಪಿ ಸೋಲಿನ ಬಯಕೆ’
Team Udayavani, Apr 4, 2017, 12:04 AM IST
ಚಾಮರಾಜನಗರ: “ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ಕೆ.ಎಸ್. ಈಶ್ವರಪ್ಪ ನಡುವೆ ವೈಮನಸ್ಯವಿದೆ. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಸೋಲಬೇಕು ಎಂಬುದು ಈಶ್ವರಪ್ಪನ ಮನಸ್ಸಿನಲ್ಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗೇಲಿ ಮಾಡಿದರು.
ಕ್ಷೇತ್ರ ವ್ಯಾಪ್ತಿಯ ಚಿಕ್ಕಾಟಿ ಗ್ರಾಮದಿಂದ ಚುನಾವಣಾ ಪ್ರಚಾರ ಆರಂಭಿಸಿ, ಪ್ರಚಾರ ಭಾಷಣ ಮಾಡಿದ ಸಂದರ್ಭದಲ್ಲಿ ಕಾರ್ಯಕರ್ತನೊಬ್ಬ ಈಶ್ವರಪ್ಪ ಹೆಸರು ಹೇಳಿದಾಗ, ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ಈಶ್ವರಪ್ಪನಿಗೆ ಮೆದುಳಿಲ್ಲ. ಆತನ ಬಗ್ಗೆ ಮಾತನಾಡಲ್ಲ’ ಎಂದರು.
ಮತ್ತೆ ಮಾತು ಮುಂದುವರಿಸಿದ ಅವರು, ಈಶ್ವರಪ್ಪ-ಯಡಿಯೂರಪ್ಪ ಪರಸ್ಪರ ಆಗದ ಕಾರಣ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲುವ ಬಯಕೆ ಈಶ್ವರಪ್ಪನಿಗಿದೆ. ಸಿಎಂ ಆಗಿದ್ದಾಗ ಜಿಲ್ಲಾ ಕೇಂದ್ರಕ್ಕೆ ಬಾರದ ಬಿಎಸ್‌ವೈಗೆ ಇದೀಗ ವೋಟು ಕೇಳಲು ನಾಚಿಗೆಯಾಗಬೇಕು ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಪರೇಷನ್ ಕಮಲದ ಮೂಲಕ ಚುನಾವಣಾ ವ್ಯವಸ್ಥೆ ಭ್ರಷ್ಟಗೊಳಿಸಿದವರೇ ಬಿಜೆಪಿಯವರು ಎಂದು ಕಿಡಿಕಾರಿದರು.
ಬಿಜೆಪಿ ಅಭ್ಯರ್ಥಿ ನಿರಂಜನ್ ಪತ್ನಿ ಕಣ್ಣೀರು
ಗುಂಡ್ಲುಪೇಟೆ: ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ನಿರಂಜನ್ ಕುಮಾರ್ ಮಾತನಾಡುತ್ತಾ, ಇದು ನನ್ನ ಬದುಕಿನ ಪ್ರಶ್ನೆ. ಚುನಾವಣೆಯಲ್ಲಿ ನಿರಂತರವಾಗಿ ಸೋಲು ಕಂಡು ಬದುಕನ್ನೇ ಕಳೆದುಕೊಳ್ಳುವ ಸ್ಥಿತಿಗೆ ಬಂದಿದ್ದೇನೆ ಎಂದರು. ಈ ವೇಳೆ ನಿರಂಜನ್ ಪಕ್ಕದಲ್ಲೇ ನಿಂತಿದ್ದ ಸವಿತಾ ಕಣ್ಣೀರು ಒರೆಸಿಕೊಂಡ ದೃಶ್ಯ ಸಾರ್ವಜನಿಕರನ್ನು ಕ್ಷಣಕಾಲ ಭಾವುಕರನ್ನಾಗಿಸಿತು.
ಸಿಪಿಐನಿಂದ ಕಾಂಗ್ರೆಸ್‌ಗೆ ಬೆಂಬಲ
ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಲು ಸಿಪಿಐ ನಿರ್ಧರಿಸಿದೆ. ಮಾರ್ಚ್ 30ರಂದು ಹಾಸನದಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಈ ತೀರ್ಮಾನ ತೆಗೆದುಕೊಂಡಿದ್ದು, ಕೋಮುವಾದದ ಜತೆಗೆ ಅರೆ ಫ್ಯಾಸಿಸ್ಟ್ ಮನೋಭಾವ ಹೊಂದಿರುವ ಬಿಜೆಪಿಯನ್ನು ಸೋಲಿಸುವ ದೃಷ್ಠಿಯಿಂದ ಕಾಂಗ್ರೆಸ್‌ಗೆ ಸ್ವಯಂಪ್ರೇರಣೆಯಿಂದ ಬೆಂಬಲ ನೀಡುತ್ತಿರುವುದಾಗಿ ತಿಳಿಸಿದೆ. ಕೇಂದ್ರದ ಬಿಜೆಪಿ ಸರ್ಕಾರ ಮಹದಾಯಿ, ಕಾವೇರಿ ವಿವಾದದಲ್ಲಿ ರಾಜ್ಯದ ಜನತೆಗೆ ಅನ್ಯಾಯ ಮಾಡಿರುವುದು, ಕಸ್ತೂರಿ ರಂಗನ್ ವರದಿ ಜಾರಿ, ರೈತರ ಸಾಲಮನ್ನಾ ಮಾಡಲು ವಿಫಲವಾಗಿರುದನ್ನು ವಿರೋಧಿಸಿ, ಕಾಂಗ್ರೆಸ್‌ಗೆ ಬೆಂಬಲ ಸೂಚಿಸಲು ತೀರ್ಮಾನಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.