ಯಳಂದೂರು: ಸರ್ಕಾರಿ ಶಾಲೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆ

ತಾಲೂಕಿನ ಬಹುತೇಕ ಶಾಲೆಗಳಲ್ಲಿ ಜೂಜಾಟ, ಅಕ್ರಮ ಚಟುವಟಿಕೆ

Team Udayavani, Sep 24, 2020, 3:47 PM IST

ಯಳಂದೂರು: ಸರ್ಕಾರಿ ಶಾಲೆಗಳಲ್ಲಿ ಕಾನೂನು ಬಾಹಿರ ಚಟುವಟಿಕೆ

ಯಳಂದೂರು: ತಾಲೂಕಿನ ಬಹುತೇಕ ಶಾಲೆಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಶಾಲೆಗಳು ಜೂಜಾಟ ತಾಣಗಳಾಗಿ ಮಾರ್ಪಟ್ಟಿವೆ ಎಂದು ತಾಲೂಕು ಪಂಚಾಯ್ತಿ ಸದಸ್ಯರು ದೂರಿದರು.

ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಮಂಗಳ ವಾರ ನಡೆದ ಸಾಮಾನ್ಯ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸದಸ್ಯರು, ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿರುವ ಶಾಲೆಗಳಲ್ಲಿ ಪೊಲೀಸರು ಗಸ್ತು ತಿರುಗಿ ಕಿಡಿಗೇಡಿಗಳ ವಿರುದ್ಧಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದಲ್ಲಿ ಸ್ವಿಫ್ಟ್ ಕಾರೊಂದು ಕೂಲಿಂಗ್‌ ಹಾಕಿಕೊಂಡುಅಕ್ರಮ ಮದ್ಯ ಸಾಗಿಸಿ ಗ್ರಾಮೀಣ ಭಾಗದಲ್ಲಿ ಅಂಗಡಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಕ್ರಮ ವಹಿಸಬೇಕು ಎಂದು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೈ. ಕೆ.ಮೋಳೆ ನಾಗರಾಜು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪಿಎಸ್‌ಐ ರವಿಕುಮಾರ್‌, ಅಕ್ರಮ ಮದ್ಯ ಸಾಗಾಟಸೇರಿದಂತೆ ಸದಸ್ಯರು ನೀಡಿರುವ ದೂರುಗಳ ಬಗ್ಗೆ ಕ್ರಮ ವಹಿಸುವ ಭರವಸೆ ನೀಡಿದರು.

ಪಿಂಚಣಿಗೆ ಪರದಾಟ: ಗ್ರಾಮೀಣ ಭಾಗದಲ್ಲಿ ಪಿಂಚಣಿ ಹಣ ನೀಡುವ ವ್ಯವಹಾರ ಪ್ರತಿನಿಧಿ ಗಳು (ಬಿಸಿ) ಅನಕ್ಷರಸ್ಥರನ್ನು ವಂಚಿಸುತ್ತಾರೆ. ಹೆಬ್ಬೆಟ್ಟು ಹಾಕಿಸಿ ಕೊಂಡು ಹಣ ನೀಡುತ್ತಿಲ್ಲ. ಕೆಲ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿ ಖಾತೆ ತೆರೆಯಲು ಹಿಂದೇಟು ಹಾಕಲಾಗುತ್ತಿದೆ. ಹಾಗಾಗಿ ವೃದ್ಧರು, ದಿವ್ಯಾಂಗರು, ವಿಧವೆಯರು ಪಿಂಚಣಿ ಹಣ ಪಡೆಯಲು ಪರದಾಡುವ ಸ್ಥಿತಿ ಇದೆ. ಇದನ್ನು ಸರಿಪಡಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.  ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವುದಾಗಿ ತಹಶೀಲ್ದಾರ್‌ ಭರವಸೆ ನೀಡಿದರು.

ವಿದ್ಯುತ್‌ ಸಮಸ್ಯೆ: ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಮಸ್ಯೆ ಹೆಚ್ಚಾಗಿದೆ. ರಾತ್ರಿ ವೇಳೆಯಲ್ಲಿ ಸಿಂಗಲ್‌ ಫೇಸ್‌ ಇರುತ್ತದೆ. ಆದರೆ, ಇದು ಸರಿ ಹೋಗಬೇಕಾದರೆ ಸಾಕಷ್ಟು ಸಮಯ ಹಿಡಿಯುತ್ತಿದೆ ಎಂದು ಸದಸ್ಯರು ದೂರಿದರು. ಈ ವೇಳೆ ಸೆಸ್ಕ್ ನಿಗಮದ ಎಇಇ ಸುರೇಶ್‌ ಕುಮಾರ್‌ ಮಾತನಾಡಿ, ತಾಲೂಕಿನ ಗುಂಬಳ್ಳಿ, ಯರಿಯೂರು, ಅಗರ, ಯರಗಂಬಳ್ಳಿಯಲ್ಲಿ ಈ ಸಮಸ್ಯೆ ಹೆಚ್ಚಾಗಿದೆ. ಒಂದೇ ವಿದ್ಯುತ್‌ ಪರಿವರ್ತಕಗಳ (ಟಿಸಿ) ಮೇಲೆ ಹೆಚ್ಚು ವಿದ್ಯುತ್‌ ಒತ್ತಡ ಬೀಳುವುದರಿಂದ ಈ ಸಮಸ್ಯೆ ಹೆಚ್ಚಾಗಿದೆ. ಬೆಳಕು ಯೋಜನೆಯಡಿ ಹೊಸ ಟಿಸಿಗಳನ್ನು ಶೀಘ್ರದಲ್ಲೇ ಅಳವಡಿಸಲಾಗುವುದು ಎಂದು ಭರವಸೆ ನೀಡಿದರು.

ಅಧಿಕಾರಿಗಳ ಗೈರು: ಸಭೆ ಶುರುವಾಗುತ್ತಿದ್ದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಗೈರಾಗಿದ್ದಾರೆ. ಹೀಗಾಗಿ ಸಭೆಯನ್ನು ಮುಂದೂಡವಂತೆ ಕೆಲ ಸದಸ್ಯರು ಆಗ್ರಹಿಸಿದರು. ಬಳಿಕ ಮುಂದಿನ ಸಭೆಗಳಿಗೆ ಎಲ್ಲಾ ಇಲಾಖೆ ಅಧಿಕಾರಿಗಳೂ ಭಾಗವಹಿಸಲು ಕ್ರಮ ವಹಿಸಲಾಗುವುದು ಎಂದು ತಾಪಂ ಇಒ ಭರವಸೆ ನೀಡಿದ ಮೇಲೆ ಸಭೆ ಆರಂಭಗೊಂಡಿತು. ಶಿಶು ಅಭಿವೃದ್ಧಿ, ಆರೋಗ್ಯ, ಶಿಕ್ಷಣ, ಲೋಕೋಪ ಯೋಗಿ, ನೀರಾವರಿ, ಸೆಸ್ಕ್, ಪಂಚಾಯತ್‌ ರಾಜ್‌, ಪಶುಪಾಲನೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ, ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ತಾಪಂ ಅಧ್ಯಕ್ಷ ಸಿದ್ದರಾಜು, ಉಪಾಧ್ಯಕ್ಷೆ ಭಾಗ್ಯ, ಸದಸ್ಯರಾದ ನಿರಂಜನ್‌, ವೆಂಕಟೇಶ್‌, ಪಲ್ಲವಿ, ಪುಟ್ಟು, ಮಲ್ಲಾಜಮ್ಮ, ಪದ್ಮಾವತಿ, ಮಣಿ, ಇಒ ಬಿ.ಎಸ್‌. ರಾಜು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14(1)

Gundlupete: 3 ತಿಂಗಳಿಂದ ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.