ಯಳಂದೂರು: 56 ಅರ್ಜಿಗಳು ಸ್ವೀಕಾರ

Team Udayavani, Feb 21, 2021, 1:45 PM IST

ಯಳಂದೂರು: 56 ಅರ್ಜಿಗಳು ಸ್ವೀಕಾರ

ಯಳಂದೂರು: ತಾಲೂಕಿನ ಕೆಸ್ತೂರು ಗ್ರಾಮದ ಪ್ರೌಢಶಾಲೆಯ‌ಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ 56 ಅರ್ಜಿಗಳು ಸ್ವೀಕಾರಗೊಂಡವು. ಕಂದಾಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮ ಬೆಳಗ್ಗೆ 10 ಗಂಟೆಗೆ ಆರಂಭಗೊಂಡಿತು. ಸಂಜೆ 5 ರ ತನಕ ನಡೆಯಿತು.

ಇದರಲ್ಲಿ ಸ್ಥಳದಲ್ಲೇ ಪಿಂಚಣಿ ಮಂಜೂರಾತಿ ಆದೇಶ ಪ್ರತಿಗಳನ್ನು ಕೆಲವು ಫ‌ಲಾನುಭವಿಗಳಿಗೆ ವಿತರಿಸಲಾಯಿತು. ಉಪ ತಹಶೀಲ್ದಾರ್‌ ವೈ.ಎಂ. ನಂಜಯ್ಯ ಮಾತನಾಡಿ, ಪ್ರತಿ ತಿಂಗಳ 3 ನೇ ಶನಿವಾರ ಜಿಲ್ಲಾದ್ಯಂತ ಪ್ರತಿ ತಾಲೂಕಿನಲ್ಲೂ ಈ ಕಾರ್ಯಕ್ರಮದ ಆಯೋಜಿಸಲಾಗುವುದು. ಆದರೆ ಒಂದು ಗ್ರಾಮದಲ್ಲಿ ಮಾತ್ರ ಜಿಲ್ಲಾಧಿಕಾರಿ ವಾಸ್ತವ್ಯ ಹೂಡುತ್ತಾರೆ. ಇತರೆ ಕಡೆಗಳಲ್ಲಿ ತಹಶೀಲ್ದಾರ್‌ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತದೆ. ವಿವಿಧ ಇಲಾಖೆಗಳ ವತಿಯಿಂದ ಕುಂದುಕೊರತೆ ಆಲಿಸಲಾಗುತ್ತದೆ. ಸಾಧ್ಯವಾದಲ್ಲಿ ಸ್ಥಳದಲ್ಲೇ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ವಹಿಸಲಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಒಟ್ಟು 56 ಅರ್ಜಿಗಳು ಬಂದಿವೆ. ಇದರಲ್ಲಿ ಕಂದಾಯ ಇಲಾಖೆಗೆ 26, ತಾಪಂಗೆ 9, ಸರ್ವೆ ಇಲಾಖೆಗೆ 15, ಸೆಸ್ಕ್ಗೆ 2, ಕೃಷಿ 1, ಹಿಂದುಳಿದ ವರ್ಗಗಳ ಇಲಾಖೆಗೆ 2 ಹಾಗೂ ಬ್ಯಾಂಕ್‌ ಸಂಬಂಧಿತ 2 ಅರ್ಜಿಗಳು ಸಲ್ಲಿಕೆಯಾಗಿವೆ. ಇದನ್ನು ಪರಿಶೀಲಿಸಿ ಸಾಧ್ಯವಾದಷ್ಟು ಬೇಗ ಕ್ರಮ ವಹಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಕೆಸ್ತೂರು ಗ್ರಾಮದ ಪರಿಶಿಷ್ಟ ಜಾತಿಯ ಬೀದಿಯಲ್ಲಿ ಸರ್ಕಾರಿ ರಸ್ತೆಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಗ್ರಾಮಸ್ಥರು ದೂರಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಉಪ ತಹಶೀಲ್ದಾರ್‌ ಈ ಬಗ್ಗೆ ಜಾಗದ ಸರ್ವೆ ನಡೆಸಿ ಆದಷ್ಟು ಬೇಗ ಇದನ್ನು ತೆರವುಗೊಳಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ಉಚಿತವಾಗಿ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಜಿಪಂ ಸದಸ್ಯೆ ಉಮಾವತಿ, ಗ್ರಾಪಂ ಅಧ್ಯಕ್ಷ ಬಾಲುಪ್ರಸಾದ್‌, ಉಪಾಧ್ಯಕ್ಷೆ ಶೋಭಾ, ಗ್ರಾಪಂ ಸದಸ್ಯರು ಡಾ. ಅಮರ್‌, ಡಾ. ಪ್ರವೀಣ್‌, ಕಂದಾಯ ಇಲಾಖೆಯ ನಂಜುಂಡ, ರಾಣಿ, ಸತೀಶ್‌, ಶರತ್‌, ಅನಿಲ್‌ ಇತರರಿದ್ದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-gundlupete

Gundlupete: ವಿದ್ಯುತ್ ಕಂಬಕ್ಕೆ ‌ಗುದ್ದಿದ್ದ ಕಾರು: ಸ್ಥಳದಲ್ಲೇ ‌ಇಬ್ಬರು ಸಾವು

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Mahadeshwara-Betta-CM-Dcm

Cabinet Meeting: ಮೊದಲ ಬಾರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

Kollegala: ಸ್ಕೂಟಿಯಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

Kollegala: ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ… ಸೊತ್ತು ಸಮೇತ ಆರೋಪಿ ಬಂಧನ

6-bandipura

New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.