Yelandur; ಅಪ್ರಾಪ್ತೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಯುವಕನ ಬಂಧನ
Team Udayavani, Jul 11, 2024, 8:10 PM IST
ಯಳಂದೂರು (ಚಾಮರಾಜನಗರ): ಸಮೀಪದ ಗ್ರಾಮವೊಂದರಲ್ಲಿ ಅಪ್ರಾಪ್ತ ವಯಸ್ಕಳೊಬ್ಬಳು ಗರ್ಭಿಣಿಯಾಗಿದ್ದು, ಈ ಸಂಬಂಧ ಯುವಕನೊಬ್ಬನನ್ನು ಬಂಧಿಸಲಾಗಿದೆ.
. ಮನು (26) ಎಂಬಾತ ಬಂಧಿತ ಆರೋಪಿ.17 ವರ್ಷದ ತರುಣಿಯನ್ನು ಬಿಳಿಗಿರಿರಂಗನ ಬೆಟ್ಟಕ್ಕೆ ಕರೆದೊಯ್ದು ಅಲ್ಲಿನ ಲಾಡ್ಜ್ ನಲ್ಲಿ ತಂಗಿದ್ದ ಎನ್ನಲಾಗಿದೆ. ಅಲ್ಲದೆ ಈಕೆಯ ತಾಯಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈಕೆಯ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಯುವತಿಗೆ ಹುಷಾರಿಲ್ಲದ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಕರೆದೊಯ್ದಿದ್ದ ಸಂದರ್ಭದಲ್ಲಿ 7 ತಿಂಗಳ ಗರ್ಭಿಣಿ ಎನ್ನುವುದು ತಿಳಿದು ಬಂದಿದೆ.
ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಡಿಯಲ್ಲಿ(POCSO) ದೂರು ದಾಖಲಾಗಿದ್ದು, ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.