Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ
Team Udayavani, Oct 15, 2024, 7:31 PM IST
ಯಳಂದೂರು: ಅಪರೂಪದ ನಕ್ಷತ್ರ ಆಮೆ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ಅ.14ರ ಸೋಮವಾರ ರಾತ್ರಿ ನಡೆದಿದೆ.
ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಕೋಡಿವೂರು ಗ್ರಾಮದ ಕಾಳಪ್ಪ ರಾಮಪ್ಪ ಹಾಗೂ ಜಿಲ್ಲೆಯ ಮಲ್ಲಿಗೆ ಬಾವಿದೊಡ್ಡಿ ಗ್ರಾಮದ ಮುತ್ತುರಾಜ್ ಎಂಬ ಇಬ್ಬರನ್ನು ಬಂಧಿಸಿ ಇವರಿಂದ ಜೀವಂತ ನಕ್ಷತ್ರ ಆಮೆ, 1 ಬೈಕ್ ಹಾಗೂ 1 ಬ್ಯಾಗನ್ನು ವಶಪಡಿಸಿಕೊಳ್ಳಲಾಗಿದೆ.
ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಆರಕ್ಷಕ ಉಪ ನಿರೀಕ್ಷಕ ವಿಜಯರಾಜ್ ನೇತೃತ್ವದ ತಂಡ ತಾಲೂಕಿನ ಮದ್ದೂರು ಗ್ರಾಮದ ಪಕ್ಕದಲ್ಲಿರುವ ಎಳೆ ಪಿಳ್ಳಾರಿ ದೇಗುಲದ ಬಳಿಯ ಕೊಳದ ಹತ್ತಿರ ಜೀವಂತ ನಕ್ಷತ್ರ ಆಮೆಯನ್ನು ಹಿಡಿದು ಸಾಗಿಸಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ಮುಂದಿನ ಕ್ರಮ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್ ನಿಲ್ದಾಣ
Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ
Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
S. Jayanna: ಕೊಳ್ಳೇಗಾಲ ಮಾಜಿ ಶಾಸಕ, ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷ ಎಸ್.ಜಯಣ್ಣ ನಿಧನ
Kollegala; ಮೆಕ್ಕೆಜೋಳ ತಿಂದು ಗಂಡಾನೆ ಹೊಲದಲ್ಲೇ ಸಾ*ವು
MUST WATCH
ಹೊಸ ಸೇರ್ಪಡೆ
Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ
Udupi: ಹಿರಿಯ ಮಾತೆ ಭಾಗ್ಯ ಸತ್ಯನಾರಾಯಣ್‌ಗೆ ಶ್ರೀಕೃಷ್ಣ ಗೀತಾನುಗ್ರಹ ಪ್ರಶಸ್ತಿ ಪ್ರದಾನ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
Waqf: ಅನ್ವರ್ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ
‘Pushpa 2: 10 ದಿನಗಳಲ್ಲಿ ಹೊಸ ದಾಖಲೆಯ ಕಲೆಕ್ಷನ್ ಕಂಡು ಮುನ್ನುಗ್ಗುತ್ತಿರುವ ಪುಷ್ಪ 2
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.