ಯೋಗದಿಂದ ರೋಗ ಮುಕ್ತ ಜೀವನ

Team Udayavani, Jun 22, 2019, 3:00 AM IST

yog-chama

ಚಾಮರಾಜನಗರ: ಅನೇಕ ಅಂತಾರಾಷ್ಟ್ರೀಯ ದಿನಗಳನ್ನು ಭಾರತೀಯರು ಆಚರಿಸುತ್ತೇವೆ. ಹಾಗೆಯೇ ಭಾರತ ದೇಶವು ವಿಶ್ವಕ್ಕೆ ನೀಡಿರುವ ಯೋಗ ದಿನವನ್ನು ಭಾರತೀಯರೆಲ್ಲ ಆಚರಿಸಿದರೆ ದೇಶಕ್ಕೆ ಗೌರವ ಸಲ್ಲಿಸಿದಂತೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಪೊಲೀಸ್‌ ಕವಾಯತು ಮೈದಾನದಲ್ಲಿ ಆಯುಷ್‌ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಎಸ್‌ಪಿವೈಎಸ್‌ಎಸ್‌ ಮತ್ತು ನೆಹರು ಯುವಕೇಂದ್ರದ ಸಂಯುಕ್ತಾಶ್ರಯದಲ್ಲಿ ನಡೆದ 5ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯೋಗದಿಂದ ಉತ್ತಮ ಆರೋಗ್ಯ: 2013-14ರಿಂದ ಇಡೀ ವಿಶ್ವದಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿದ್ದು, ಆಯುಷ್‌ ಇಲಾಖೆ ಹೇಳುವಂತೆ ಕೆಲವೇ ಕೆಲವು ಯೋಗಾಸನಗಳನ್ನು ಪ್ರತಿ ದಿನ ಒಂದು ಗಂಟೆ ಕಾಲ ಮಾಡಿದರೆ ಮಾನಸಿಕ ಮತ್ತು ದೈಹಿಕವಾಗಿ ಆರೋಗ್ಯವಂತ ರಾಗಿರಬಹುದು ಎಂದರು.

ಯೋಗ ದಿನ ಆಚರಿಸುವುದು ಹೆಮ್ಮೆ: ಇಡೀ ವಿಶ್ವಕ್ಕೆ ಭಾರತ ದೇಶದಿಂದ ಕೊಡುಗೆಯಾಗಿ ನೀಡಿರುವ ಏಕೈಕ ದಿನಾಚರಣೆ ಎಂದರೆ ಅದು ಯೋಗ ದಿನವಾಗಿದ್ದು, ದೇಶದ ಪ್ರತಿಯೊಬ್ಬರೂ ಯೋಗ ದಿನವನ್ನು ಆಚರಿಸುವಂತಾಗಬೇಕು. ಯೋಗ ದಿನವನ್ನು ಆಚರಿಸುವುದು ಭಾರತೀಯರೆಲ್ಲರ ಹೆಮ್ಮೆಯಾಗಿದೆ ಎಂದರು.

ಯೋಗ ಜೀವನದ ಒಂದು ಭಾಗ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಸ್‌. ಲತಾ ಕುಮಾರಿ ಮಾತನಾಡಿ, ಭಾರತೀಯರ ಯೋಗ ಮಹತ್ವದ ಘಟ್ಟವನ್ನು ಮುಟ್ಟುವ ಮೂಲಕ ಸಾಧನೆ ಮಾಡಿದೆ. ಯೋಗ ವ್ಯಾಯಾಮ ಅಷ್ಟೇ ಅಲ್ಲ. ಜೀವನದ ಭಾಗ ಹಾಗೂ ಜೀವನದ ವಿಧಾನವೂ ಆಗಿದೆ ಎಂದರು.

ಪ್ರತಿಯೊಬ್ಬರಿಗೂ ಯೋಗ ಅವಶ್ಯಕ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಡಿ. ಆನಂದ್‌ ಕುಮಾರ್‌ ಮಾತನಾಡಿ, ಪ್ರತಿಯೊಬ್ಬರ ಜೀವನಕ್ಕೂ ಯೋಗ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ಮಾನಸಿಕವಾಗಿ ಮತ್ತು ದೈಹಿಕವಾಗಿ ದೃಢವಾಗಿರಲು ಯೋಗ ಸಹಕಾರಿಯಾಗಿದೆ. ಆರೋಗ್ಯವಂತರಾಗಿ ಹೆಚ್ಚು ಕಾಲ ಬದುಕಬೇಕು ಎಂಬುದು ಯೋಗದ ಚಿಂತನೆಯಾಗಿದೆ ಎಂದರು.

ದೈಹಿಕ ಸಾಮರ್ಥ್ಯ ಹೆಚ್ಚಳ: ಯೋಗ ಅಭ್ಯಾಸ ಮತ್ತು ಕ್ರೀಡೆ ಪಠ್ಯದ ಜೊತೆಗೆ ವಿದ್ಯಾರ್ಥಿಗಳು ಕಲಿಯಬೇಕು. ಯೋಗ ವಿದ್ಯಾರ್ಥಿಗಳ ಮಾನಸಿಕ ಹಾಗೂ ದೈಹಿಕ ಸಾಮರ್ಥಯವನ್ನು ಹೆಚ್ಚಿಸಿಕೊಳ್ಳಲು ಅನುಕೂಲವಾಗಿದೆ ಎಂದರು.

ಎಎಸ್ಪಿ ಅನಿತಾ, ಜಿಪಂ ಉಪಕಾರ್ಯದರ್ಶಿ ಹನುಮನರಸಯ್ಯ, ಜಿಲ್ಲಾ ಆಯುಷ್‌ ಅಧಿಕಾರಿ ಡಾ. ಆರ್‌. ರಾಚಯ್ಯ, ಪ್ರಭಾರ ಡಿಡಿಪಿಐ ಮಂಜುನಾಥ್‌, ಡಾ. ಮಲ್ಲಣ್ಣ ತೋಟದಪ್ಪ , ಮೈಸೂರಿನ ಡಾ.ನಟರಾಜ್‌, ಶ್ರೀನಿವಾಸ ಕೊತಬಾಳ್‌, ಎಸ್‌ಪಿವೈಎಸ್‌ಎಸ್‌ ನ ಯೋಗಗುರು ಬಿ.ಪಿ. ಪ್ರಕಾಶ್‌ ಮತ್ತಿತರರು ಭಾಗವಹಿಸಿದ್ದರು. ಜಿಲ್ಲಾ ಪ್ರಕೃತಿ ಮತ್ತು ಯೋಗ ಕೇಂದ್ರದ ವೈದ್ಯೆ ಡಾ. ಎಲ್‌. ಮಾನಸಾ ಯೋಗಾಭ್ಯಾಸಗಳ ನಿರ್ದೇಶನ ನೀಡಿದರು.

ವಿವಿಧ ಆಸನಗಳು: ಬೆಳಗ್ಗೆ 6.45 ರಿಂದ 8 ಗಂಟೆಯವರೆಗೂ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ಶಿಥಲೀಕರಣ ವ್ಯಾಯಾಮ, ತಾಡಾಸನ, ವೃಕ್ಷಾಸನ, ಅರ್ಧಚಕ್ರಾಸನ, ಪಾದಹಸ್ತಾಸನ, ತ್ರಿಕೋನಾಸನ, ಸಮದಂಡಾಸನ, ವಜ್ರಾಸನ, ಭದ್ರಾಸನ, ಮಂಡೂಕಾಸನ, ವಕ್ರಾಸನ,

ಉಸಿರಾಟ ಶಶಾಂಕಾಸನ, ಭುಜಂಗಾಸನ, ಶಲಭಾಸನ, ಅರ್ಧ ಹಲಾಸನ, ಉತ್ತಿತ ಪಾದಾಸನ, ಸೇತುಬಂಧಾಸನ, ಪವನಮುಕ್ತಾಸನಗಳ ಅಭ್ಯಾಸ ನಡೆಯಿತು.ಬಳಿಕ ಕಪಾಲಬಾತಿ, ನಾಡಿಶೋಧನ, ಶೀತಲೀ, ಭ್ರಮರೀ ಪ್ರಾಣಾಯಾಮ ಮಾಡಿಸಲಾಯಿತು.

ಟಾಪ್ ನ್ಯೂಸ್

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.