ಕೆ. ಹೊಸಹಳ್ಳಿ ಕೆರೆಗೆ ಗ್ರಾಮಸ್ಥರೇ ನೀರು ಹರಿಸಿದ್ರು!
Team Udayavani, Nov 7, 2019, 11:26 AM IST
ಶಶೀಂದ್ರ ಸಿ.ಎಸ್.
ಚನ್ನಗಿರಿ: ಗ್ರಾಮೀಣ ಕೆರೆಗಳು ರೈತರ ಜೀವನಾಡಿಯಾಗಿವೆ. ಅಂತಹ ಕೆರೆಗಳು ನೀರಿಲ್ಲದೆ ಒಣಗಿದ ಮೇಲೆ ನಿರ್ಲಕ್ಷ್ಯಕ್ಕೆ ಒಳಗಾಗುವುದು ಸಾಮಾನ್ಯ. ಆದರೆ ಇಲ್ಲೊಂದು ಗ್ರಾಮದಲ್ಲಿ ಸರಕಾರದ ಯಾವುದೇ ಅನುದಾನ-ಯೋಜನೆ ಇಲ್ಲದೇ ದಶಕಗಳ ಹಿಂದೆ ಒಣಗಿದ್ದ ಕೆರೆಯನ್ನು ಗ್ರಾಮಸ್ಥರು ತುಂಬಿಸಿದ್ದಾರೆ.
ಹೌದು, ಇಂತದೊಂದು ವಿನೂತ ಪ್ರಯತ್ನವನ್ನು ತಾಲೂಕಿನ ಕೆ. ಹೊಸಹಳ್ಳಿ ಗ್ರಾಮಸ್ಥರು ಮಾಡಿದ್ದು, ತಾಲೂಕಿನ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಕೆ. ಹೊಸಹಳ್ಳಿ ಗ್ರಾಮದಲ್ಲಿ ಕೇವಲ 250ರಿಂದ 300 ಜನ ವಾಸವಾಗಿದ್ದಾರೆ. ಗ್ರಾಮದಲ್ಲಿನ ಕೆರೆ ಒಣಗಿ ಜನ-ಜಾನುವಾರಗಳಿಗೆ ಕುಡಿಯುವ ನೀರು ಸಿಗದೇ ಪರದಾಡುವ ಸ್ಥಿತಿ ಇವರದು. ಈ ಸಮಸ್ಯೆ ಪರಿಹಾರಕ್ಕೆ ಸರಕಾರ, ಜನಪ್ರತಿನಿಧಿ ಗಳ ಮೊರೆ ಹೋದರೂ ಪ್ರಯೋಜನವಾಗಿರಲಿಲ್ಲ.
ಮತ್ತಿಹಳ್ಳದಿಂದ ಕೆರೆಗೆ ನೀರು: ಗ್ರಾಮದ ಕೆರೆ ಸುಮಾರು 6 ಎಕರೆ ವಿಸ್ತೀರ್ಣ ಹೊಂದಿದ್ದು 15ಅಡಿಯಷ್ಟು ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಕೆರೆಯ ಸಮೀಪದಲ್ಲಿಯೇ ಮಳೆಗಾಲದಲ್ಲಿ ಮತ್ತಿಹಳ್ಳ ಹರಿಯುತ್ತದೆ. ಗ್ರಾಮಸ್ಥರೆಲ್ಲರೂ ಸ್ವಲ್ಪ ಹಣ ಒಗ್ಗೂಡಿಸಿ ಮತ್ತಿಹಳ್ಳಕ್ಕೆ ಮೋಟಾರ್ ಅಳವಡಿಸಿ ಪೈಪ್ ಜೋಡಣೆ ಮಾಡಿ ಕೆರೆಗೆ ನೀರು ಹರಿಸಿದ್ದಾರೆ. ಸತತ 20ದಿನ ನೀರು ಹರಿಸಿದ ನಂತರ ಕೆರೆ ತುಂಬಿ ಕೊಡಿ ಬಿದ್ದಿದೆ. ಗ್ರಾಮಸ್ಥರೇ ಕೆರೆಯನ್ನು ತುಂಬಿಸಿರುವ ವಿಷಯ ತಿಳಿದ ತಹಶೀಲ್ದಾರ್ ನಾಗರಾಜ್ ಕೆರೆಗೆ ಭೇಟಿ ನೀಡಿ ಬಾಗಿನ ಅರ್ಪಿಸುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.