ಅನುದಾನವಿಲ್ಲದೆ ಅರ್ಧಕ್ಕೆ ನಿಂತ ಹಾಸ್ಟೆಲ್ ಕಾಮಗಾರಿ
ವಿವಿಯ 40 ಲಕ್ಷ ರೂ.ಗಳಲ್ಲಿ ನಡೆದಿತ್ತು ಕಾಮಗಾರಿ ಸರ್ಕಾರಕ್ಕೆ ಸಲ್ಲಿಸಲಾಗಿತ್ತು 2.60 ಕೋಟಿ ರೂ. ಪ್ರಸ್ತಾವನೆ
Team Udayavani, Oct 10, 2019, 11:23 AM IST
ಶಶೀಂದ್ರ ಸಿ.ಎಸ್. ಮೇಕೆರ್
ಚನ್ನಗಿರಿ: ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಸ್ನಾತ್ತಕೋತ್ತರ ಕೇಂದ್ರದ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ದಾವಣಗೆರೆ ವಿಶ್ವವಿದ್ಯಾಲಯ ಅನುದಾನದಲ್ಲಿ ನಿರ್ಮಿಸುತ್ತಿರುವ ಮಹಿಳಾ ಪಿಜಿ ಹಾಸ್ಟೆಲ್ ಕಟ್ಟಡ ಕಾಮಗಾರಿ ಸರ್ಕಾರದ ಅನುದಾನ ದೊರೆಯದೇ ಅರ್ಧದಲ್ಲೇ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.
ಚನ್ನಗಿರಿಯ ಸ್ನಾತಕೋತ್ತರ ಕೇಂದ್ರದಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 2015ರಲ್ಲಿ ಯುಜಿಸಿಗೆ ಪತ್ರ ಬರೆದು ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರಾತಿ ಪಡೆಯಲಾಯಿತು. ದಾವಣಗೆರೆ ವಿವಿಯ ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ನಿರ್ಧರಿಸಲಾಯಿತು. ಮೊದಲ ಹಂತದಲ್ಲಿ ದಾವಣಗೆರೆ ವಿವಿ 40 ಲಕ್ಷ ರೂ. ಅನುದಾನ ಮಂಜೂರು ಮಾಡಿತು. ಉಳಿದ 2.60 ಕೋಟಿ ವೆಚ್ಚದ ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಯಿತು.
ಕಟ್ಟಡ ಕಾಮಗಾರಿ ಹೊಣೆಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ಆದರೆ ಸರ್ಕಾರದಿಂದ ಈವರೆಗೂ ಯಾವುದೇ ಅನುದಾನ ಬಂದಿಲ್ಲ. ಪ್ರಾರಂಭದಲ್ಲಿ ಹಾಸ್ಟೆಲ್ ಕಟ್ಟಡ ಕಾಮಗಾರಿ ಚೆನ್ನಾಗಿಯೇ ನಡೆಯಿತು. 40 ಲಕ್ಷ ರೂ. ಮುಗಿದ ನಂತರ ಹಣದ ಕೊರತೆಯಿಂದ ಸಂಬಂಧಪಟ್ಟವರು ಕೈಕಟ್ಟಿ ಕುಳಿತಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿಯವರು ಅನುದಾನಕ್ಕಾಗಿ ಕಳೆದ 4 ವರ್ಷಗಳಿಂದ ಕಾಯುತ್ತಿದ್ದಾರೆ. ಕಟ್ಟಡ ಪೂರ್ಣಗೊಳ್ಳದೆ ಪಾಳು ಬೀಳುವ ಸ್ಥಿತಿಗೆ ತಲುಪಿದೆ. ಸುತ್ತಲೂ ಗಿಡಗಂಟಿ ಬೆಳೆದು ಕಟ್ಟಡವನ್ನೆಲ್ಲ ಆವರಿಸಿವೆ.
ಖಾಸಗಿ ರೂಂಗಳ ಮೊರೆ: ಹೊರಗಿನಿಂದ ಬರುವ ವಿದ್ಯಾರ್ಥಿಗಳು ಅನಿವಾರ್ಯವಾಗಿ ದುಬಾರಿ ಖಾಸಗಿ ರೂಂಗಳು ಹಾಗೂ ಮೆಸ್ ಮೊರೆ ಹೋಗಬೇಕಿದೆ. ಇದರಿಂದ ಉನ್ನತ ಶಿಕ್ಷಣ ಪಡೆಯುವುದು ಹೊರೆಯಾಗಿದ್ದು, ಬಡ ವಿದ್ಯಾರ್ಥಿಗಳ ಸಮಸ್ಯೆ ಕೇಳ್ಳೋರಿಲ್ಲವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.