ಮಕ್ಕಳ ದಾಖಲಾತಿಗೆ ಪೋಷಕರ ಭಾರೀ ಪ್ರತಿಕ್ರಿಯೆ

ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭ ಸರ್ಕಾರ 30ಕ್ಕೆ ನಿಗದಿಪಡಿಸಿದ್ದು, ಸಂಖ್ಯೆ ಹೆಚ್ಚಿಸಲು ಮನವಿ

Team Udayavani, May 30, 2019, 3:17 PM IST

Udayavani Kannada Newspaper

ಎಂ.ಶಿವಮಾದು
ಚನ್ನಪಟ್ಟಣ:
ಸರ್ಕಾರ ಪ್ರಸಕ್ತ ಸಾಲಿನಿಂದ ಆರಂಭಿಸಿ ರುವ ಕರ್ನಾಟಕ ಪಬ್ಲಿಕ್‌ ಶಾಲೆ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಪೈಪೋಟಿ ಏರ್ಪಟ್ಟಿದೆ. ನಿಗದಿಗಿಂತ ಹೆಚ್ಚಿನ ಮಕ್ಕಳು ದಾಖಲಾತಿಗೆ ಬರುತ್ತಿದ್ದು ಶಾಲೆಗಳ ಮುಖ್ಯ ಶಿಕ್ಷಕ ರಿಗೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಹೊಸ ತಲೆನೋವು ಆರಂಭವಾಗಿದೆ.

ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯು ತ್ತಿದ್ದ ಪೋಷಕರು ಆಂಗ್ಲ ಮಾಧ್ಯಮ ಶಾಲೆ ಆರಂಭದ ಸುದ್ದಿ ತಿಳಿಯುತ್ತಿದ್ದಂತೆಯೇ ಪೋಷಕರು ತಮ್ಮ ಮಕ್ಕಳನ್ನು ಕಾನ್ವೆಂಟ್ನಿಂದ ಬಿಡಿಸಿ ಸರ್ಕಾರಿ ಶಾಲೆಗೆ ಕರೆತರುತ್ತಿದ್ದಾರೆ. ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಹಾಗೂ 1ನೇ ತರಗತಿ ದಾಖ ಲಾತಿಗೆ ಅವಕಾಶವಿದ್ದು, ಆಂಗ್ಲಮಾಧ್ಯಮ ಶಾಲೆ ಗಳಲ್ಲಿ 1ನೇ ತರಗತಿಗೆ ದಾಖಲಾತಿ ಆರಂಭವಾಗಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು: ತಾಲೂಕಿನಲ್ಲಿ ಒಟ್ಟು 8 ಆಂಗ್ಲ ಮಾಧ್ಯಮ ಶಾಲೆ ಹಾಗೂ ಒಂದು ಕರ್ನಾಟಕ ಪಬ್ಲಿಕ್‌ ಶಾಲೆ ಆರಂಭ ವಾಗುತ್ತಿವೆ. ಪ್ರಸ್ತುತ ಎಲ್ಕೆಜಿ, ಯುಕೆಜಿ ಹಾಗೂ 1ನೇ ತರಗತಿಗೆ ತಲಾ 30 ಮಕ್ಕಳ ದಾಖಲಾತಿಗೆ ಮಾತ್ರ ಸರ್ಕಾರ ಅವಕಾಶ ನೀಡಿದೆ. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಬರುತ್ತಿರುವುದರಿಂದ ಹೆಚ್ಚುವರಿ ಮಂಜೂರಾತಿಗೆ ಅಧಿಕಾರಿಗಳು ಸರ್ಕಾರ ದ ಮೊರೆಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅರಳಾಳುಸಂದ್ರ ಹಾಗೂ ಚಕ್ಕೆರೆ ಶಾಲೆಗಳಲ್ಲಿ ಹೆಚ್ಚಿನ ಪೈಪೋಟಿ ಎದುರಾಗಿದ್ದು, ಎಂ.ಎನ್‌. ಹೊಸ ಹಳ್ಳಿ ಶಾಲೆಯಲ್ಲಿ 2 ದಿನಗಳ ಹಿಂದೆ ದಾಖಲಾತಿಗೆ ಚಾಲನೆ ನೀಡಲಾಗಿದೆ. ಪೋಷಕರು ಶಾಲೆ ಮುಖ್ಯಸ್ಥ ರನ್ನು ಭೇಟಿ ಮಾಡಿ, ದಾಖಲಾತಿ ಮಾಡಿಕೊಳ್ಳುವಂತೆ ಒತ್ತಡ ಹಾಕುತ್ತಿದ್ದಾರೆ. ಆದರೆ ನಿಗದಿಗಿಂತ ಹೆಚ್ಚಿನ ಮಕ್ಕಳ ದಾಖಲಾತಿಗೆ ಅವಕಾಶ ಇಲ್ಲದ ಕಾರಣ ಮುಖ್ಯ ಶಿಕ್ಷಕರು ಅಧಿಕಾರಿಗಳ ಮೊರೆಹೋಗಿದ್ದಾರೆ.

ಅರಳಾಳುಸಂದ್ರ ಶಾಲೆಯಲ್ಲಿ 1ನೇ ತರಗತಿ ದಾಖಲಾತಿಗೆ 100ಕ್ಕೂ ಹೆಚ್ಚು ಪೋಷಕರು ಮಕ್ಕಳು ದಾಖಲಿಗೆ ಪಟ್ಟು ಹಿಡಿದಿದ್ದರು. ಸ್ವತಃ ಬಿಇಒ ಶಾಲೆಗೆ ಭೇಟಿ ನೀಡಿ ಪೋಷಕರಿಗೆ ಮನವರಿಕೆ ಮಾಡಿದರೂ ಪೋಷಕರು ಪಟ್ಟು ಬಿಡಲಿಲ್ಲ. ಆದರೆ ಬಿಇಒ, ಹೆಚ್ಚು ವರಿ ತರಗತಿಗಾಗಿ ಸರ್ಕಾರಕ್ಕೆ ಪತ್ರ ಬರೆದು, ಅನು ಮೋದನೆ ಪಡೆದ ನಂತರ ದಾಖಲಾ ತಿಗೆ ಕ್ರಮ ವಹಿಸುವುದಾಗಿ ಪೋಷಕರಿಗೆ ಭರವಸೆ ನೀಡಿದ್ದಾರೆ.

ಕಾನ್ವೆಂಟ್ ಬಿಡಿಸಿದ್ರು: ಪೋಷಕರು ತಮ್ಮ ಗ್ರಾಮ ದಲ್ಲೇ ಆಂಗ್ಲ ಮಾಧ್ಯಮ ಶಾಲೆ ಆರಂಭವಾಗಿದ್ದರಿಂದ, ಅದರಲ್ಲೂ ಸರ್ಕಾರಿ ಶಾಲೆಯಲ್ಲಿ ಖರ್ಚಿಲ್ಲದೆ ಆಂಗ್ಲ ಮಾಧ್ಯಮ ಶಿಕ್ಷಣ ಸಿಗಲಿದೆ ಎಂಬುದನ್ನು ಅರಿತು, ಕಾನ್ವೆಂಟ್‌ಗಳಲ್ಲಿದ್ದ ತಮ್ಮ ಮಕ್ಕಳನ್ನು ವಾಪಸ್‌ ಕರೆತಂದಿದ್ದಾರೆ ಎನ್ನುತ್ತಾರೆ ಅಧಿಕಾರಿಗಳು.

30ಕ್ಕೆ ನಿಗದಿ, ಅಸಮಾಧಾನ: ಶಾಲೆಯಲ್ಲಿ ದಾಖಲಾತಿ ಸಂಖ್ಯೆಯನ್ನು 30ಕ್ಕೆ ನಿಗದಿ ಪಡಿಸಿದ್ದಕ್ಕೆ ಪೋಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಮಕ್ಕಳನ್ನು ಇಂಗ್ಲಿಷ್‌ ಮಾಧ್ಯಮದಲ್ಲೇ ಓದಿಸಬೇ ಕೆಂಬ ಮಹತ್ವಾಕಾಂಕ್ಷೆಯಿಂದ ಎಷ್ಟೇ ಸಮಸ್ಯೆ ಎದುರಾಗುತ್ತಿದ್ದರೂ ಪಟ್ಟಣಕ್ಕೆ ಕಳುಸುತ್ತಿದ್ದರು. ಇದೀಗ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭ ವಾಗುತ್ತಿರುವುದು ಸಂತಸ ವನ್ನುಂಟು ಮಾಡಿದ್ದು, ಮಕ್ಕಳ ದಾಖಲಾತಿ ನಿಗದಿಪಡಿಸಿರು ವುದಕ್ಕೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಒಂದೆಡೆ ದಾಖಲಾತಿ ಕೊರತೆಯಿಂದಾಗಿ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತ ತಲುಪುತ್ತಿದ್ದರೆ ಆಂಗ್ಲಮಾಧ್ಯಮ ಶಾಲೆಗಳ ದಾಖಲಾತಿಗೆ ಪೈಪೋಟಿ ಆರಂಭವಾಗಿದೆ. ಸರ್ಕಾರ ಹೆಚ್ಚುವರಿ ತರಗತಿಗಳನ್ನು ಮಂಜೂರು ಮಾಡಿ ಹೆಚ್ಚು ದಾಖಲಾತಿ ಹಾಗೂ ಇನ್ನಷ್ಟು ಆಂಗ್ಲ ಶಾಲೆಗಳನ್ನು ಆರಂಭಿಸಲು ಅವಕಾಶ ನೀಡಿದರೆ ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಲಿವೆ.

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.