ಗೋಡೆ ಕುಸಿದು ತಾಯಿ-ಮಗು ಸಾವು
•ತಂದೆ-ಇನ್ನೋರ್ವ ಮಗುವಿಗೆ ಗಾಯ •ಪಕ್ಕದ ಮನೆಯಲ್ಲಿ ಮಲಗಿದ್ದ ಮೂರನೆಯ ಮಗು ಬಚಾವ್
Team Udayavani, Aug 15, 2019, 10:31 AM IST
ಚನ್ನಗಿರಿ: ಹೊದಿಗೆರೆ ಗ್ರಾಮದಲ್ಲಿ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದಿರುವುದು.
ಚನ್ನಗಿರಿ: ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ತಾಯಿ-ಮಗು ಮೃತಪಟ್ಟಿರುವ ಘಟನೆ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ಬುಧವಾರ ನಸುಕಿನ ಜಾವ ನಡೆದಿದೆ.
ತಾಯಿ ಉಮಾದೇವಿ (34) ಹಾಗೂ 2 ವರ್ಷದ ಮಗು ಧನುಷ್ ಮೃತ ದುರ್ದೈವಿಗಳು. ಪತಿ ಕುಮಾರ್ ಮತ್ತು ಇನ್ನೊಂದು ಮಗು ಗಾಯಗೊಂಡಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 8-10 ದಿನಗಳಿಂದ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಶಿಥಿಲಗೊಂಡಿತ್ತು ಎನ್ನಲಾಗಿದೆ. ಮಂಗಳವಾರ ರಾತ್ರಿ ಉಮಾದೇವಿ, ಪತಿ ಕುಮಾರ್ ಮತ್ತು ಇಬ್ಬರು ಮಕ್ಕಳು ಗಾಢನಿದ್ರೆಗೆ ಜಾರಿದ್ದಾರೆ. ಬುಧವಾರ ನಸುಕಿನ ಜಾವ ಮನೆಯ ಗೋಡೆ ಬೀಳುವ ಶಬ್ದ ಪತಿ ಕುಮಾರ್‌ಗೆ ಕೇಳಿಸಿದೆ. ತಕ್ಷಣ ಆತ ಹೆಂಡತಿ ಉಮಾದೇವಿ ಮತ್ತು ಮಕ್ಕಳನ್ನು ಎಚ್ಚರಗೊಳಿಸುವಷ್ಟರಲ್ಲಿ ಮನೆಯ ಗೋಡೆ ಮಲಗಿದ್ದವರ ಮೇಲೆ ಕುಸಿದಿದೆ. ಗಂಭೀರ ಗಾಯಗೊಂಡಿದ್ದ ತಾಯಿ ಉಮಾದೇವಿ ಮತ್ತು ಮಗು ಧನುಷ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಮತ್ತೂಂದು ಮಗು ಪಕ್ಕದಲ್ಲಿರುವ ಚಿಕ್ಕಪ್ಪನ ಮನೆಯಲ್ಲಿ ಮಲಗಿದ್ದರಿಂದ ಬಚಾವಾಗಿದೆ.
ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.