ಕಬ್ಬು ಬೆಳೆಗಾರರ ಮೊಗದಲ್ಲಿ ಚಿಗುರೊಡೆದ ಆಸೆ
ಈಡೇರುವುದೇ ಮುಖಂಡರ ಭರವಸೆ
Team Udayavani, May 29, 2019, 9:46 AM IST
ಚಿಂಚೋಳಿ: ಎರಡು ದಶಕಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆ.
ಶಾಮರಾವ ಚಿಂಚೋಳಿ
ಚಿಂಚೋಳಿ: ಮೀಸಲು ಚಿಂಚೋಳಿ ವಿಧಾನಸಭೆ ಮತಕ್ಷೇತ್ರಕ್ಕೆ ಮೇ 19 ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರು ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದರೆ ತಾಲೂಕಿನಲ್ಲಿ ಹೊಸದಾಗಿ, ಇಲ್ಲವೇ ನನೆಗುದಿಗೆ ಬಿದ್ದಿರುವ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲಾಗುವುದು ಎನ್ನುವ ಭರವಸೆಗಳ ಸುರಿಮಳೆಯನ್ನೇ ಸುರಿಸಿದ್ದರಿಂದ ಇಲ್ಲಿನ ಕಬ್ಬು ಬೆಳೆಗಾರ ಮೊಗದಲ್ಲಿ ಆಸೆ ಚಿಗುರೊಡಿದೆ.
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚುನಾವಣೆ ಸಂದರ್ಭದಲ್ಲಿ ಹಿಂದುಳಿದ ಭಾಗದಲ್ಲಿ ಸಕ್ಕರೆ ಕಾರಖಾನೆ ಪ್ರಾರಂಭಿಸಲು ಎಲ್ಲ ಅನುಕೂಲತೆ ಮಾಡಿಕೊಡುತ್ತೇನೆ. ಮೂಲ ಸೌಕರ್ಯ ಒದಗಿಸಲು ಚಿಂಚೋಳಿ ತಾಲೂಕನ್ನು ದತ್ತು ತೆಗೆದುಕೊಳ್ಳುತ್ತೇನೆ ಎನ್ನುವ ಭರವಸೆ ನೀಡಿದ್ದರು. ಬೀದರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆಪಿಸಿಸಿ (ಐ) ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಚುನಾವಣೆ ನಂತರ ಹೊಸದಾಗಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಭರವಸೆಯನ್ನು ರೈತರಿಗೆ ನೀಡಿದ್ದರು. ಆದರೆ ಬೀದರ ಲೋಕಸಭೆ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಭಾಶ ರಾಠೊಡ ಪರಾಜಯ ಆಗಿದ್ದರಿಂದ ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಈ ಕುರಿತು ಬೇಡಿಕೆ ಇಡಲು ಸಾಧ್ಯವಿಲ್ಲ ಎನ್ನುವ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಆರಂಭವಾಗಿದೆ. ಪಟ್ಟಣ ಹೊರ ವಲಯದ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ಎರಡು ದಶಕಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಬೇಕಾಗುವ ನೆರವು, ಸಹಕಾರ ನೀಡಲಾಗುವುದು. ಇಲ್ಲವೇ ಹೊಸ ಕಾರ್ಖಾನೆ ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಮಾಜಿ ಸಚಿವ ಬಸವನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದರು. ಅಲ್ಲದೇ ಬಿಜೆಪಿಯ ಅಭ್ಯರ್ಥಿಗಳಾಗಿದ್ದ ಡಾ| ಉಮೇಶ ಜಾಧವ, ಡಾ| ಅವಿನಾಶ ಜಾಧವ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರಿಂದ ಚಿಂಚೋಳಿಯಲ್ಲಿ ನನೆಗುದಿಗೆ ಬಿದ್ದ ಸಕ್ಕರೆ ಕಾರ್ಖಾನೆ ಪ್ರಾರಂಭವಾಗುವುದೇ ಇಲ್ಲವೇ ನೂತನ ಕಾರ್ಖಾನೆ ಆರಂಭವಾಗುವುದೇ ಎನ್ನುವ ಕುತೂಹಲ ರೈತರಲ್ಲಿ ಮನೆಮಾಡಿದೆ.
1998ರಲ್ಲಿ ಚಿಂಚೋಳಿ ಸಕ್ಕರೆ ಕಾರ್ಖಾನೆಗೆ ಆಗಿನ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರ ಅಡಿಗಲ್ಲು ಸಮಾರಂಭ ನೇರವೇರಿಸಿದ್ದರು. 200 ಎಕರೆ ಜಮೀನು ಪ್ರದೇಶ ಹೊಂದಿರುವ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಚೆನ್ನೈ ಕೊಯಮತ್ತೂರ ರಾಜಶ್ರೀಪತಿ ಮತ್ತು ಹೈದ್ರಾಬಾದ್‌ನ ಟರ್ಬೋ ಕಂಪನಿಗೆ ನೀಡಲಾಗಿತ್ತು. ಎರಡು ಕಂಪನಿಗಳು ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿದ ಕೆಲವು ದಿನಗಳ ನಂತರ ಹಣಕಾಸಿನ ಸಮಸ್ಯೆಯಿಂದಾಗಿ ಎಲ್ಲ ಕೆಲಸಗಳನ್ನು ಮಧ್ಯೆದಲ್ಲಿಯೇ ಬಿಟ್ಟು ಹೋಗಿದ್ದರು. ಹೀಗಾಗಿ ಕಾರ್ಖಾನೆ ಎರಡು ದಶಕಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ.
ಕುಂಚಾವರಂ ಗಡಿಭಾಗದಲ್ಲಿ ಬರುವ ಶಾದಿಪುರ, ಜಿಲವರ್ಷ, ವೆಂಕಟಾಪುರ, ಶಿವರಾಮಪುರ, ಮಗದಂಪುರ, ಪೋಚಾವರಂ, ಲಚಮಾಸಾಗರ, ಅಂತಾವರಂ, ಶಾದೀಪುರ, ಬೋನಸಪುರ, ಶಿವರೆಡ್ಡಿಪಳ್ಳಿ ಗ್ರಾಮಗಳಲ್ಲಿ ಅತಿ ಹೆಚ್ಚು ಕಬ್ಬು ಬೆಳೆಸಲಾಗುತ್ತಿದೆ. ಅಲ್ಲದೇ ಚಿಮ್ಮನಚೋಡ, ಚಿಂಚೋಳಿ, ಸುಲೇಪೇಟ, ದೇಗಲಮಡಿ, ಐನೋಳಿ, ಚಂದ್ರಂಪಳ್ಳಿ, ಅಣವಾರ, ಮೋತಕಪಳ್ಳಿ ಇನ್ನಿತರ ಗ್ರಾಮಗಳಲ್ಲಿ ಅಂದಾಜು 3500 ಹೆಕ್ಟೇರ್ ಜಮೀನು ಪ್ರದೇಶದಲ್ಲಿ ಕಬ್ಬು ಬೆಳೆಸಲಾಗುತ್ತಿದೆ. ಈ ಕಬ್ಬನ್ನು ಹುಮನಾಬಾದನ ಹಳ್ಳಿಖೇಡ, ಯಾದಗಿರಿ ಮತ್ತು ಮನ್ನಾಎಕ್ಕೆಳ್ಳಿಗೆ ಮಾರಾಟಕ್ಕಾಗಿ ಸಾಗಿಸುವಂತಾಗಿದೆ. ಚಿಂಚೋಳಿ ಪಟ್ಟಣದಲ್ಲಿಯೇ ಹೊಸದಾಗಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿದರೇ ಕಬ್ಬು ಬೆಳೆದ ರೈತರಿಗೆ ಅನುಕೂಲವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.