ಚಿಕಾಗೋ ವೀರಶೈವ ಸಮ್ಮೇಳನಕ್ಕೆ ತರಳಬಾಳು ಶ್ರೀ

•ಮೂರು ದಿನದ ಸಮ್ಮೇಳನ •ಜು.20 ರಂದು ಸ್ವದೇಶಕ್ಕೆ ವಾಪಸ್‌

Team Udayavani, Jul 3, 2019, 5:27 PM IST

3-July-37

ಸಿರಿಗೆರೆ: ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಚಿಕಾಗೋಗೆ ತೆರಳುವ ಪೂರ್ವದಲ್ಲಿ ಶಾಂತಿವನದ ಗೋಶಾಲೆಯಲ್ಲಿ ಜಾನುವಾರುಗಳಿಗೆ ಮೇವುಣಿಸಿದರು.

ಸಿರಿಗೆರೆ: ಅಮೇರಿಕಾದ ಚಿಕಾಗೋದಲ್ಲಿ ಜು. 5, 6 ಮತ್ತು 7 ರಂದು ವೀರಶೈವ ಸಮಾಜ ಆಫ್‌ ನಾರ್ತ್‌ ಅಮೇರಿಕ (ವಿ.ಎಸ್‌.ಎನ್‌.ಎ) ಸಂಘಟನೆಯ 42ನೇ ವಾರ್ಷಿಕ ಸಮ್ಮೇಳನ ನಡೆಯಲಿದೆ. ಈ ಸಮ್ಮೇಳನದಲ್ಲಿ ತರಳಬಾಳು ಜಗದ್ಗುರು ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಪಾಲ್ಗೊಳ್ಳಲಿದ್ದಾರೆ.

ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಮಂಗಳವಾರ ಸಂಜೆ 4 ಗಂಟೆಗೆ ಶ್ರೀಗಳು ಶ್ರೀಮಠದಿಂದ ತೆರಳಿದರು. ಇದಕ್ಕೂ ಮುನ್ನ ಬೃಹನ್ಮಠದ ಐಕ್ಯಮಂಟಪದಲ್ಲಿರುವ ಹಿರಿಯ ಗುರುಗಳ ಗದ್ದುಗೆಗೆ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿ, ವಿದ್ಯಾರ್ಥಿ ದೆಸೆಯಲ್ಲಿ 1976ರಲ್ಲಿ ಅಮೇರಿಕದ ಭಕ್ತರ ಮನೆಗಳಿಗೆ ಭೇಟಿ ನೀಡಿದ್ದೆವು. ಅಮೇರಿಕ ಮತ್ತು ಕೆನಡಾದ ವೀರಶೈವರು ಮತ್ತು ಬಸವ ತತ್ವಾಭಿಮಾನಿಗಳನ್ನು ಒಂದೇ ವೇದಿಕೆಗೆ ತರಲು ಇಂತಹ ಸಂಘಟನೆಯ ಅಗತ್ಯದ ಬಗೆಗೆ ಸಮಾಲೋಚನೆ ನಡೆಸಲಾಗಿತ್ತು. ಅಮೇರಿಕ, ಕೆನಡಾ ಹಾಗೂ ಬೇರೆ ದೇಶಗಳ ಬಸವ ತತ್ವಾಭಿಮಾನಿಗಳು ಒಂದೆಡೆ ಸೇರುವ ಈ ಸಮ್ಮೇಳನದಲ್ಲಿ ಮುಂದಿನ ಪೀಳಿಗೆಗೆ ಬಸವಣ್ಣನವರ ಬೋಧನೆಗಳನ್ನು ತಲುಪಿಸುವ ಬಗ್ಗೆ ಗಂಭೀರ ಚಿಂತನೆ ನಡೆಯಲಿದೆ ಎಂದು ಹೇಳಿದರು.

1978ರಲ್ಲಿ ಆರಂಭಗೊಂಡ ವಿ.ಎಸ್‌.ಎನ್‌.ಎ ಸಂಘಟನೆ ಈಗ ಅಮೇರಿಕ ಮತ್ತು ಕೆನಡಾಗಳಲ್ಲಿ 21 ರಾಜ್ಯ ಘಟಕಗಳನ್ನು ಹೊಂದಿದೆ. 2500 ನೋಂದಾಯಿತ ಸದಸ್ಯರಿದ್ದಾರೆ. ಪ್ರತಿ ವರ್ಷ ಬೇರೆ ಬೇರೆ ನಗರಗಳಲ್ಲಿ ವಾರ್ಷಿಕ ಸಮ್ಮೇಳನಗಳನ್ನು ನಡೆಸಲಾಗುತ್ತಿದೆ. ಬಸವ ತತ್ವಗಳ ಆಧಾರಿತ ಆಧ್ಯಾತ್ಮಿಕ ಸಂವಾದಗಳು ಮತ್ತು ಧಾರ್ಮಿಕ ಕಾರ್ಯಗಳನ್ನು ಈ ಸಂಘಟನೆ ನಡೆಸುತ್ತಿದೆ ಎಂದರು.

ಸಮ್ಮೇಳನದ ನಂತರ ಶ್ರೀಗಳು ಅಮೇರಿಕದ ಭಕ್ತರ ಮನೆಗಳಲ್ಲಿ ಅನೌಪಚಾರಿಕವಾಗಿ ಧಾರ್ಮಿಕ ಸಂವಾದ ನಡೆಸಲಿದ್ದಾರೆ. ಸಮಕಾಲೀನ ಸಂದರ್ಭದ ಜಾಗತಿಕ ಸವಾಲುಗಳಿಗೆ ಬಸವಣ್ಣನವರ ಬೋಧನೆಗಳು ಹೇಗೆ ಪ್ರಸ್ತುತವಾಗಿವೆ ಎಂಬ ಬಗ್ಗೆ ತಿಳಿಸಿಕೊಡಲಿದ್ದಾರೆ. ಜು. 20 ರಂದು ಶ್ರೀಗಳು ಸ್ವದೇಶಕ್ಕೆ ಆಗಮಿಸಲಿದ್ದಾರೆ. ಇದೇ ವೇಳೆ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ಶಾಂತಿವನದ ಬಳಿ ನಿರ್ಮಾಣಗೊಳ್ಳುತ್ತಿರುವ ಗೋಶಾಲೆಗೆ ತಂತಿ ಬೇಲಿ ಹಾಕಲು 10 ಲಕ್ಷ ರೂ. ಅನುದಾನ ನೀಡಿದರು.

ಟಾಪ್ ನ್ಯೂಸ್

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.