ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ
ಚಿಕ್ಕಮಗಳೂರು-ಉಡುಪಿ ಜಿಲ್ಲೆಯ ರಾಜ್ಯ ಹೆದ್ಧಾರಿಗಳು ರಾಷ್ಟ್ರೀಯ ಹೆದ್ಧಾರಿಯಾಗಿ ಮಾರ್ಪಾಡು
Team Udayavani, Apr 5, 2019, 3:09 PM IST
ಚಿಕ್ಕಮಗಳೂರು: ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಚಿಕ್ಕಮಗಳೂರು ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಶ್ರೀನಿವಾಸ್ ಪೂಜಾರಿ ಮತಯಾಚಿಸಿದರು.
ಚಿಕ್ಕಮಗಳೂರು: ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟಶ್ರೀನಿವಾಸ್ ಪೂಜಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಚಿಕ್ಕಮಗಳೂರು ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚಿಸಿದರು.
ಚಿಕ್ಕಮಗಳೂರು ಕ್ಷೇತ್ರದ ಮಲ್ಲೇನಹಳ್ಳಿ ಹೊಸಪೇಟೆ, ತರೀಕೆರೆ ಪಟ್ಟಣ, ತಣಿಗೆಬೈಲಿನಲ್ಲಿ ಪ್ರಚಾರ ಕಾರ್ಯ ಕೈಗೊಂಡು ದೇಶದ ಅಭಿವೃದ್ಧಿಗೆ ಪಕ್ಷ ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಐದು ವರ್ಷದ ಅವಧಿಯಲ್ಲಿ ಈ ಲೋಕಸಭಾ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಕಂಡಿದೆ. ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಯ ರಾಜ್ಯ ಹೆದ್ದಾರಿಗಳು ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಟ್ಟಿವೆ. ವಿವಿಧ ಯೋಜನೆಗಳು ಬಡವರನ್ನು ತಲುಪಿವೆ. ಉಜ್ವಲ್ ಯೋಜನೆಯು ಬಡ ಮಹಿಳೆಯರನ್ನು ಊದು ಕೊಳವೆಯಿಂದ ಹೊರ ತಂದು ಆರೋಗ್ಯ ರಕ್ಷಿಸಲಾಗಿದೆ ಎಂದು ತಿಳಿಸಿದರು.
ತರೀಕೆರೆ ಪಟ್ಟಣದಲ್ಲಿ ನಡೆದ ಸಮಾರಂಭದಲ್ಲಿ ಕೋಟೆಶ್ರೀನಿವಾಸ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ರಾಜಪ್ಪ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಲಾಯಿತು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ. ರಾಜಪ್ಪ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಸಮಾಜದ ಪ್ರಮುಖರಾದ ಶಿವರಾಜ್, ರಾಘವೇಂದ್ರ, ಪ್ರಕಾಶ್ ಬಂಗೇರ, ಗೋಪಾಲ್ ಪೂಜಾರಿ, ಮನೋಜ್, ಕೇಶವ, ಚನ್ನಯ್ಯ ಅಂಚನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.