ರಾಜ್ಯದಲ್ಲಿ ಬಿಜೆಪಿ ಪರ ವಾತಾವರಣ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬಂದ್ರೆ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿ, ದೇಶದಲ್ಲಿ 300ಕ್ಕೂ ಅಧಿಕ ಸ್ಥಾನದಲ್ಲಿ ಬಿಜೆಪಿಗೆ ಗೆಲುವು

Team Udayavani, Apr 12, 2019, 12:27 PM IST

12-April-11

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಖರಾಯಪಟ್ಟಣದಲ್ಲಿ ರೋಡ್‌ ಶೋ ನಡೆಸಿದರು.

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಕ್ಷಣ ಬಯಲುಸೀಮೆಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಅಯ್ಯನಕೆರೆ ಹಾಗೂ
ಮದಗದಕೆರೆಗೆ ನೀರು ಹರಿಸುವ ಹಾಗೂ ಶಾಶ್ವತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದು ಖಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಪರ ಸಖರಾಯಪಟ್ಟಣದಲ್ಲಿ ರೋಡ್‌ ಶೋ ನಡೆಸಿ ಚುನಾವಣಾ ಪ್ರಚಾರ ಮಾಡಿದ ನಂತರ ಮಾತನಾಡಿದ ಅವರು, ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಲಾಗುತ್ತದೆ. ದೇಶಾದ್ಯಂತ ನರೇಂದ್ರ ಮೋದಿ
ಅವರ ಗಾಳಿ ಬೀಸುತ್ತಿದೆ. 300ಕ್ಕೂ ಹೆಚ್ಚು ಸ್ಥಾನದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. 2014 ರ ಚುನಾವಣೆಗಿಂತ ಇನ್ನೂ ಉತ್ತಮ ವಾತಾವರಣ ಈ ಚುನಾವಣೆಯಲ್ಲಿ ಬಿಜೆಪಿ ಪರ ಕಂಡು ಬಂದಿದೆ ಎಂದರು.

ಈ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಇನ್ನೊಂದು ವಾರ ಪೂರ್ಣ ಸಮಯವನ್ನು ಪಕ್ಷ ಗೆಲ್ಲಿಸಲು ಮೀಸಲಿಡಬೇಕು. ಜೆಡಿಎಸ್‌, ಕಾಂಗ್ರೆಸ್‌
ಕಾರ್ಯಕರ್ತರನ್ನು ಭಿನ್ನಾಭಿಪ್ರಾಯ ಮರೆತು ಅವರಲ್ಲಿಗೆ ಹೋಗಿ ಮೋದಿ ಗೆಲ್ಲಿಸಲು ಬಿಜೆಪಿಗೆ ಮತ ಹಾಕಬೇಕೆಂದು ಮನವೊಲಿಸಬೇಕು. ಪ್ರತಿ ಬೂತ್‌ನಲ್ಲೂ ಶೇ.90ರಷ್ಟು ಮತ ಚಲಾವಣೆಯಾಗುವಂತೆ ನೋಡಿಕೊಳ್ಳಬೇಕೆಂದು ಮನವಿ ಮಾಡಿದರು.

ಪಕ್ಷದ ಪ್ರಣಾಳಿಕೆಯಲ್ಲಿ ಪ್ರತಿ ರೈತನಿಗೆ ವರ್ಷಕ್ಕೆ 6 ಸಾವಿರ ರೂ.ಗಳನ್ನು ಆತ ಬದುಕಿರುವವರೆಗೆ ನೀಡಲು ನಿರ್ಧರಿಸಲಾಗಿದೆ. 60 ವರ್ಷ ಮೀರಿದ ರೈತನಿಗೆ
ಪಿಂಚಣಿ, ಪಕ್ಕಾ ವಸತಿ ಸೌಲಭ್ಯ ನೀಡುವ ಭರವಸೆ ನೀಡಲಾಗಿದೆ. ರೈತರಿಗೆ ಒಂದು ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಹಾಗೂ ಶೇ.33ರಷ್ಟು ಸ್ಥಾನಗಳನ್ನು
ಮಹಿಳೆಯರಿಗೆ ಮೀಸಲಿಡಲು ಯೋಚಿಸಲಾಗಿದೆ.

ಪ್ರತಿ ಮನೆಗೆ ಶುದ್ಧ ನೀರು, ಉತ್ತಮ ಗ್ರಾಮೀಣ ರಸ್ತೆ, 60 ಸಾವಿರ ಕಿ.ಮೀ. ಹೆದ್ದಾರಿ ಅಭಿವೃದ್ಧಿ, ಜಮ್ಮು ಕಾಶ್ಮೀರಕ್ಕೆ ನೀಡಿರುವ 370ನೆಯ ವಿಧಿ ರದ್ದತಿ
ಮಾಡುವ ಭರವಸೆಗಳನ್ನು ನೀಡಲಾಗಿದೆ ಎಂದಾಗ, ಸಾರ್ವಜನಿಕರಿಂದ ಕರತಾಡನ ಮುಗಿಲು ಮುಟ್ಟಿತು. ಶಾಸಕ ಸಿ.ಟಿ.ರವಿ ಮಾತನಾಡಿ, ಈ ಬಾರಿ
ನಡೆಯುತ್ತಿರುವ ಚುನಾವಣೆ ದೇಶ ಉಳಿಸುವ ಚುನಾವಣೆ. ಚೋರರು ಮತ್ತು ಚೌಕಿದಾರರ ನಡುವಿನ ಚುನಾವಣೆ, ನರೇಂದ್ರ ಮೋದಿ ಚೌಕಿದಾರರಾದರೆ, ಚೋರರೆಲ್ಲರೂ ಒಂದೆಡೆ ಸೇರಿದ್ದಾರೆ. ಪ್ರಾಮಾಣಿಕತೆ ಮತ್ತು ಭ್ರಷ್ಟಾಚಾರದ
ನಡುವಿನ ಚುನಾವಣೆ, ನರೇಂದ್ರ ಮೋದಿ ಅತ್ಯಂತ ಪ್ರಾಮಾಣಿಕತೆಯಿಂದ 5 ವರ್ಷ ಆಡಳಿತ ನಡೆಸಿದ್ದಾರೆ. ಮತ್ತೊಂದೆಡೆ ಭ್ರಷ್ಟಾಚಾರಿಗಳೆಲ್ಲರೂ ಒಂದಾಗಿದ್ದಾರೆ.

ರಾಷ್ಟ್ರವಾದ ಮತ್ತು ತುಕಡೆ ಗ್ಯಾಂಗ್‌ ನಡುವಿನ ಚುನಾವಣೆ. ರಾಷ್ಟ್ರವಾಧವನ್ನು ಅಳವಡಿಸಿಕೊಂಡಿರುವ ಬಿಜೆಪಿ ಒಂದೆಡೆ ನೇತೃತ್ವ ವಹಿಸಿದ್ದರೆ, ಕಾಂಗ್ರೆಸ್‌ ತುಕಡೆ ಗ್ಯಾಂಗ್‌ನ ನೇತೃತ್ವ ವಹಿಸಿಕೊಂಡಿದೆ ಎಂದು
ಹೇಳಿದರು. ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ
ನನ್ನನ್ನು 26 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದ್ದೀರಿ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 40 ಸಾವಿರ ಮತಗಳ ಅಂತರದಿಂದ ಶೋಭ ಕರಂದ್ಲಾಜೆ ಅವರನ್ನು ಗೆಲ್ಲಿಸಬೇಕು. ಆ ಮೂಲಕ ನರೇಂದ್ರ ಮೋದಿ
ಮತ್ತೂಮ್ಮೆ ಪ್ರಧಾನಿಯಾಗುವಂತೆ ಮಾಡಬೇಕೆಂದು ಕರೆ ನೀಡಿದರು.

ಪಟ್ಟಣದ ಕಲ್ಮರಡಿ ಮಠದ ಗೇಟ್‌ ಮುಂಭಾಗದಿಂದ ಆರಂಭವಾದ ರೋಡ್‌ಶೋನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಜತೆ ಶಾಸಕರಾದ ಸಿ.ಟಿ.ರವಿ, ಬೆಳ್ಳಿಪ್ರಕಾಶ್‌, ವಿಧಾನಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌, ಜಿ.ಪಂ. ಸದಸ್ಯರಾದ ಬಿ.ಜೆ. ಸೋಮಶೇಖರಪ್ಪ, ವಿಜಯಕುಮಾರ್‌, ರವೀಂದ್ರ ಬೆಳವಾಡಿ, ಗ್ರಾಮಾಂತರ ಅಧ್ಯಕ್ಷ ಚಿಕ್ಕದೇವನೂರು ರವಿ, ಶಕ್ತಿ ಕೇಂದ್ರದ ಅಧ್ಯಕ್ಷ ಚಿದಾನಂದ್‌, ಮುಖಂಡರಾದ
ನಾಗರಾಳು ಚಂದ್ರಣ್ಣ, ದಿನೇಶ್‌, ನಾಯಕ್‌ ಕೃಷ್ಣಸ್ವಾಮಿ, ಶ್ರೀನಿವಾಸಗೌಡ ಭಾಗವಹಿಸಿದ್ದರು.

ಮುತ್ತಿಗೆ: ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ರೋಡ್‌ಶೋನಲ್ಲಿ ನೂರಾರು ಜನ ಕಾರ್ಯಕರ್ತರು ಪಾಲ್ಗೊಂಡಿದ್ದರು. ರೋಡ್‌
ಶೋ ಸಡಿರಾಯಪಟ್ಟಣದ ಬಸ್‌ ನಿಲ್ದಾಣದ ಸಮೀಪಕ್ಕೆ ಬಂದಾಗ ಚಿಕ್ಕಮಗಳೂರು ಕಡೆಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ವಿಧಾನ
ಪರಿಷತ್‌ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಅವರು ಕಾರಿನಲ್ಲಿ ಬಂದರು. ಗಾಯತ್ರಿ ಶಾಂತೇಗೌಡ ಅವರನ್ನು ನೋಡಿದಾಕ್ಷಣ ಕಾರ್ಯಕರ್ತರು ಮೋದಿ, ಮೋದಿ ಎಂಬ ಘೋಷಣೆ ಕೂಗುತ್ತ ಕಾರನ್ನು ಅಡ್ಡಗಟ್ಟಿ ಮುತ್ತಿಗೆ
ಹಾಕಿದರು. ಆ ಸಂದರ್ಭದಲ್ಲಿ ಕೆಲಕಾಲ ಬಿಜೆಪಿ ಕಾರ್ಯಕರ್ತರು ಹಾಗೂ ಗಾಯತ್ರಿಶಾಂತೇಗೌಡ ಅವರ ನಡುವೆ ಮಾತಿನ ಚಕಮಕಿ ನಡೆಯಿತು.
ಪರಿಸ್ಥಿತಿ ವಿಕೋಪಕ್ಕೆ ಹೋಗುವುದಕ್ಕೂ ಮೊದಲು ಎಚ್ಚೆತ್ತ ಬಿಜೆಪಿ ಮುಖಂಡರು ಹಾಗೂ ಪೊಲೀಸರು ಕಾರ್ಯಕರ್ತರನ್ನು ದೂರಕ್ಕೆ ಕಳುಹಿಸಿ ಗಾಯತ್ರಿ ಶಾಂತೇಗೌಡ ಅವರ ಕಾರನ್ನು ಮುಂದಕ್ಕೆ ಕಳುಹಿಸಿಕೊಟ್ಟರು.

ಪ್ರಚಾರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್‌.ಯಡಿಯೂರಪ್ಪ, ಪ್ರತಿ ಬಾರಿ ಬಿಜೆಪಿ ರಾಜ್ಯ ಸರ್ಕಾರ ಬೀಳುವುದಕ್ಕೆ
ಮುಹೂರ್ತ ನಿಗದಿ ಮಾಡುತ್ತಿದೆ. ಈಗ ಮತ್ತೂಮ್ಮೆ ನಿಗದಿ ಮಾಡಲು
ಮುಂದಾಗುವಿರಾ ಎಂಬ ಪ್ರಶ್ನೆ ಮುಂದಿಟ್ಟಾಗ, ಈ ಬಾರಿ ನಾವೇನೂ ಮುಹೂರ್ತ ಇಡಬೇಕಾಗಿಲ್ಲ. ರಾಜ್ಯದಲ್ಲಿ 22 ಸ್ಥಾನಗಳಲ್ಲಿ
ಬಿಜೆಪಿ ಗೆಲುವು ಶೇ.100ರಷ್ಟು ಖಚಿತ. ದೇಶದಲ್ಲಿ 300 ಸ್ಥಾನ ಪಡೆಯುವುದು ನಿಶ್ಚಿತ. ಹಾಗಾಗಿ ಚುನಾವಣಾ ಫಲಿತಾಂಶ ಬಂದಾಕ್ಷಣ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಭಿನ್ನಮತ ಉಲ್ಬಣಗೊಂಡು ರಾಜಕೀಯ ಏರುಪೇರು ಉಂಟಾಗಿ ಸರ್ಕಾರ ಬೀಳುತ್ತದೆ.

ಟಾಪ್ ನ್ಯೂಸ್

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

ಜಾನಪದದಲ್ಲಿ ಕನ್ನಡ ಕಟ್ಟುವ ಕೆಲಸ ಹೆಚ್ಚಾಗಲಿ…

1-kateel

Yakshagana; ಕಟೀಲು ದೇಗುಲದ ಆರು ಮೇಳಗಳ ತಿರುಗಾಟ ಆರಂಭ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Winter session: ವರ್ಷದ ಕೊನೆಯ ಸಂಸತ್‌ ಅಧಿವೇಶನ ಫ‌ಲಪ್ರದವಾಗಲಿ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.