ಚಾಲಕರು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ: ತಿಮ್ಮಯ್ಯ
ರಾಮಸ್ವಾಮಿ ಆಯೋಗ ವರದಿ ವಾಹನ ಚಾಲಕರಿಗೆ ಮರಣ ಶಾಸನ
Team Udayavani, May 13, 2019, 5:02 PM IST
ಚಿಕ್ಕಮಗಳೂರು: ಸರಕಾರಿ ವಾಹನ ಚಾಲಕರ ಸಂಘದ ಸಭೆಯಲ್ಲಿ ನಿವೃತ್ತಿಗೊಂಡ ವಾಹನ ಚಾಲಕರನ್ನು ಅಭಿನಂದಿಸಲಾಯಿತು.
ಚಿಕ್ಕಮಗಳೂರು: ಸರ್ಕಾರಿ ವಾಹನ ಚಾಲಕರು ತಮ್ಮ ಕರ್ತವ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸುವುದರ ಜೊತೆಗೆ ಸಂಘಟನೆಗೆ ಹೆಚ್ಚು ಗಮನ ನೀಡಿದಾಗ ನಮ್ಮ ಬೇಡಿಕೆಗಳು ಈಡೇರುತ್ತವೆ ಎಂದು ಸರ್ಕಾರಿ ವಾಹನ ಚಾಲಕರ ಸಂಘದ ರಾಜ್ಯಾಧ್ಯಕ್ಷ ತಿಮ್ಮಯ್ಯ ತಿಳಿಸಿದರು.
ನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಕಛೇರಿಯ ಸಭಾಂಗಣದಲ್ಲಿ ನಡೆದ ಸರ್ಕಾರಿ ವಾಹನ ಚಾಲಕರ ಸಂಘದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯಾದ್ಯಂತ ಸರ್ಕಾರಿ ವಾಹನ ಚಾಲಕರ ಸಮಸ್ಯೆಗಳಿಗೆ ಸ್ಪಂದಿಸಿ ಸಂಘಟನೆ ಕಟ್ಟಲು ಎಲ್ಲ ಜಿಲ್ಲೆಗಳಿಗೆ ಬೇಟಿ ನೀಡಿ ಸಮಸ್ಯೆಗಳನ್ನು ಅರಿತು ಸಂಘಟನೆ ಮಾಡಲು ಹೆಚ್ಚು ಗಮನ ನೀಡಲಾಗಿದೆ. ಪ್ರತಿಯೊಬ್ಬ ಸರ್ಕಾರಿ ವಾಹನ ಚಾಲಕರು ಸಂಘದಲ್ಲಿ ಸದಸ್ಯತ್ವವನ್ನು ಪಡೆದು ಸಂಘಟನೆಗೆ ಕೈಜೋಡಿಸಬೇಕು ಎಂದರು.
ರಾಮಸ್ವಾಮಿ ಆಯೋಗ ವರದಿಯನ್ನು ಸರ್ಕಾರಕ್ಕೆ ನೀಡಿದಾಗಿನಿಂದ ಸರ್ಕಾರಿ ವಾಹನ ಚಾಲಕರಿಗೆ ಮರಣ ಶಾಸನ ರೀತಿಯಲ್ಲಿ ಅನೇಕ ಸಮಸ್ಯೆಗಳು ಹುಟ್ಟಿಕೊಂಡಿವೆ. ಹೊರಗುತ್ತಿಗೆ ಮತ್ತು ದಿನಗೂಲಿ ನೌಕರರನ್ನಾಗಿ ವಾಹನ ಚಾಲಕರನ್ನು ತೆಗೆದುಕೊಳ್ಳುತ್ತಿರುವುದರಿಂದ ವಾಹನ ಚಾಲಕರ ಸಂಖ್ಯೆ ಕಡಿಮೆಯಾಗಿದೆ ಎಂದು ತಿಳಿಸಿದರು.
ಸರ್ಕಾರಿ ವಾಹನ ಚಾಲಕರನ್ನು ಸರ್ಕಾರ ನಿಲ್ಯರ್ಕ್ಷ ದೃಷ್ಠಿಯಿಂದ ನೋಡುತ್ತಿದೆ. ಇರುವ ವಾಹನ ಚಾಲಕರಾದರು ಸಂಘಟನೆಯಲ್ಲಿ ತೋಡಗಿಸಿಕೊಂಡಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರಿ ವಾಹನ ಚಾಲಕರೆ ಇಲ್ಲದಂತಾಗುತ್ತದೆ ಎಂದರು.
ರಾಜ್ಯ ಸಂಘದ ಮಾರ್ಗದರ್ಶನದಂತೆ ಜಿಲ್ಲಾ ಮತ್ತು ತಾಲೂಕು ಸಂಘಗಳು ಸಕ್ರಿಯವಾಗಿ ಕೆಲಸ ಮಾಡಿದಾಗ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ. ನಾನು ಅಧ್ಯಕ್ಷನಾದ ನಂತರ ಸಂಘಟನೆ ಮತ್ತು ಹೋರಾಟದ ಮೂಲಕ ಸರ್ಕಾರಿ ವಾಹನ ಚಾಲಕರಿಗೆ ಸಿಗಬಹುದಾದ ಎಲ್ಲ ಸವಲತ್ತುಗಳನ್ನು ನೀಡಲಾಗಿದೆ ಎಂದರು.
ಮಂಡ್ಯ ಜಿಲ್ಲಾ ಸಂಘದ ಅಧ್ಯಕ್ಷರಾದ ಆನಂದ್ ಮಾತನಾಡಿ, ಸಂಘಟನೆಗಳಲ್ಲಿ ಸೇವಾ ಮನೋಭಾವನೆಯಿಂದ ಕೆಲಸ ಮಾಡಬೇಕು. ಯಾವುದೆ ಜಾತಿ, ಬೇಧ ಮಾಡದೆ ನಮಗೆ ದೊರೆತ ಅವಕಾಶವನ್ನು ಅತ್ಯಂತ ಜವಾಬ್ದಾರಿಯಾಗಿ ನಿರ್ವಹಿಸಿ ಇತರರಿಗೆ ಆದರ್ಶವಾಗಿರಬೇಕು ಎಂದರು.
ನೂತನ ಜಿಲ್ಲಾಧ್ಯಕ್ಷ ಎಂ.ಪಿ. ಗೋಪಾಲ್ ಮಾತನಾಡಿ, ಜಿಲ್ಲೆಯಲ್ಲಿ ನಮ್ಮ ಸಂಘಕ್ಕೆ ನಿವೇಶನವಿದ್ದು, ನನ್ನ ಅವಧಿಯಲ್ಲಿ ಸಮುದಾಯ ಭವನ ನಿರ್ಮಿಸಲು ಹೆಚ್ಚಿನ ಶ್ರಮ ಹಾಕುತ್ತೇನೆ. ಜಿಲ್ಲೆಯ ಎಲ್ಲ ವಾಹನ ಚಾಲಕ ಮಿತ್ರರು ಮತ್ತು ಸದಸ್ಯರು ಅಭಿವೃದ್ಧಿ ಕೆಲಸಗಳಿಗೆ ಕೈ ಜೋಡಿಸಿ ತಮ್ಮ ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿವೃತ್ತಿಗೊಂಡ ಸರ್ಕಾರಿ ವಾಹನ ಚಾಲಕರನ್ನು ಸಂಘದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು. ಚಿತ್ರದುರ್ಗ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ್, ಶಿವಮೊಗ್ಗ ಜಿಲ್ಲಾಧ್ಯಕ್ಷ ಜಿ. ಹಾಲೇಶ್, ರಾಜ್ಯ ಸಂಘದ ಖಜಾಂಚಿ ಚೆಲುವರಾಜ್, ಸಂಚಾಲಕ ರಮೇಶ್, ಜಿಲ್ಲಾಕಾರ್ಯದರ್ಶಿ ರಮೇಶ್, ಸದಸ್ಯರಾದ ಶ್ಯಾಮ್‌ಸುಂದರ್, ಸೋಮಶೇಖರ್, ಶಂಕರೇಗೌಡ, ಜಾಫರ್, ಅಜ್ಮುಲಖಾನ್, ಅಬೂಬ್ಬಕರ್, ರಾಮು, ಶಶಿಕುಮಾರ್, ಹರೀಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್ ರಾಡಾರ್
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.