ಚಿಕ್ಕಬಳ್ಳಾಪುರದಲ್ಲಿಂದು ನಗರಸಭೆ ಆಯುಕ್ತ ಸೇರಿ 19 ಮಂದಿಗೆ ಸೋಂಕು ದೃಢ: ಇಬ್ಬರು ಸಾವು
Team Udayavani, Jul 10, 2020, 7:38 PM IST
ಚಿಕ್ಕಬಳ್ಳಾಪುರ: ಕೋವಿಡ್ -19 ಮಹಾಮಾರಿ ಅರ್ಭಟ ಜಿಲ್ಲೆಯಲ್ಲಿ ಮುಂದುವರೆದಿದ್ದು ಶುಕ್ರವಾರ ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಸೇರಿ ಒಟ್ಟು 19 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ 19 ಹೊಸ ಪ್ರಕರಣಗಳು ಸೇರಿ ಒಟ್ಟು ಇದುವರೆಗೂ ಬರೋಬ್ಬರಿ 351 ಮಂದಿ ಸೋಂಕಿತರು ಪತ್ತೆಯಾಗಿದ್ದು ಹೊಸದಾಗಿ ಕಂಡು ಬಂದಿರುವ 19 ಪ್ರಕರಣಗಳ ಪೈಕಿ ಚಿಕ್ಕಬಳ್ಳಾಪುರದಲ್ಲಿ 9, ಬಾಗೇಪಲ್ಲಿ, ಚಿಂತಾಮಣಿಯಲ್ಲಿ ತಲಾ 2 ಹಾಗೂ ಶಿಡ್ಲಘಟ್ಟ 4 ಹಾಗೂ ಗೌರಿಬಿದನೂರು, ಗುಡಿಬಂಡೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.
ಸಾವಿನ ಸಂಖ್ಯೆ 12ಕ್ಕೆ ಏರಿಕೆ: ಇದರ ಮಧ್ಯೆ ಜಿಲ್ಲೆಯಲ್ಲಿ ಕೋವಿಡ್-19ಗೆ ಬಲಿಯಾದವರ ಸಂಖ್ಯೆ ಏರುತ್ತಲೇ ಇದ್ದು ಶುಕ್ರವಾರ ಚಿಕ್ಕಬಳ್ಳಾಪುರ ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ ತಲಾ ಒಬ್ಬರು ಕೋವಿಡ್-19ಗೆ ಬಲಿಯಾಗಿರುವುದರಿಂದ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 12ಕ್ಕೆ ಏರಿಕೆ ಕಂಡಿದೆ. ಸಾವಿನ ಪ್ರಕರಣಗಳಲ್ಲಿ ಚಿಕ್ಕಬಳ್ಳಾಪುರ ಮೊದಲ ಸ್ಥಾನದಲ್ಲಿದೆ. ಚಿಕ್ಕಬಳ್ಳಾಪುರದಲ್ಲಿ ಒಟ್ಟು 6 ಮಂದಿ ಇದುವರೆಗೂ ಕೋವಿಡ್-19 ಬಲಿಯಾಗಿದ್ದರೆ ಉಳಿದಂತೆ ಶಿಡ್ಲಘಟ್ಟ 1, ಗೌರಿಬಿದನೂರು 4, ಚಿಂತಾಮಣಿ 1 ದಾಖಲಾಗಿದೆ.
ಒಟ್ಟು 351 ಮಂದಿ ಸೋಂಕಿತರ ಪೈಕಿ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 218 ಮಂದಿ ಮಾತ್ರ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ 12 ಮಂದಿ ಕೋವಿಡ್‌ಗೆ, 1 ಕೋವಿಡ್ ಅಲ್ಲದ ಅನ್ಯ ಕಾರಣಕ್ಕೆ ಮೃತ ಪಟ್ಟಿದ್ದಾರೆ. ಉಳಿದಂತೆ 120 ಸಕ್ರಿಯ ಪ್ರಕರಣಗಳು ಇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.