ಜಿಲ್ಲೆಯಲ್ಲಿ 323 ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗ

ವರ್ಗಾವಣೆಗೆ ತೆರೆ • 44 ಶಿಕ್ಷಕರಿಗೆ ಕಡ್ಡಾಯ ವರ್ಗ | ಪರಸ್ಪರ ವರ್ಗಾವಣೆಯಲ್ಲಿ 60 ಮಂದಿಗೆ ಅನುಕೂಲ

Team Udayavani, Sep 13, 2019, 12:13 PM IST

cb-tdy-1

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರ ವಲಯದಲ್ಲಿ ಸಾಕಷ್ಟು ಗೊಂದಲ ಹಾಗೂ ಕುತೂಹಲ ಕೆರಳಿಸಿದ್ದ 2018-19ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗೆ ಜಿಲ್ಲೆಯಲ್ಲಿ ತೆರೆ ಬಿದ್ದಿದ್ದು, ಜಿಲ್ಲಾದ್ಯಂತ ಒಟ್ಟು 323 ಪ್ರಾಥಮಿಕ ಶಾಲಾ ಶಿಕ್ಷಕರು ಒಂದು ಕಡೆಯಿಂದ ಮತ್ತೂಂದು ಕಡೆಗೆ ವರ್ಗಾವಣೆಗೊಂಡಿದ್ದಾರೆ.

ಎ ಪಟ್ಟಿ: ಶಿಕ್ಷಕರ ವರ್ಗಾವಣೆಗೆ ನಡೆದ ಕೌನ್ಸಿಲಿಂಗ್‌ ಪ್ರಕ್ರಿಯೆಯಲ್ಲಿ ಎ ಪಟ್ಟಿಯಲ್ಲಿದ್ದ ಸಹ ಶಿಕ್ಷಕರ ಪೈಕಿ 29 ಮಂದಿ ಕನ್ನಡ ಸಾಮಾನ್ಯ ಶಿಕ್ಷಕರು ಇದ್ದು, ಆ ಪೈಕಿ 28 ಮಂದಿ ಸ್ಥಳ ಆಯ್ಕೆಗೊಂಡು ವರ್ಗಾವಣೆಗೊಂಡಿ ದ್ದಾರೆ.

ಕನ್ನಡ ವಿಜ್ಞಾನದಲ್ಲಿ 1, ಕನ್ನಡ ಆಂಗ್ಲದಲ್ಲಿ 3, ಹಿಂದಿಗೆ 2ಕ್ಕೆ 1, ಉರ್ದು ಸಾಮಾನ್ಯ ಒಬ್ಬ ಶಿಕ್ಷಕರು ಸೇರಿ ಒಟ್ಟು 34 ಮಂದಿ ವರ್ಗಾವಣೆಗೊಂಡರೆ ಮುಖ್ಯ ಶಿಕ್ಷಕರ ಪೈಕಿ ಉರ್ದು ಹಾಗೂ ದೈಹಿಕ ಶಿಕ್ಷಕ ರೊಬ್ಬರು ಸೇರಿ ಒಟ್ಟು 36 ಮಂದಿ ವರ್ಗಾವಣೆ ಗೊಂಡಿದ್ದಾರೆ.

ಬಿ ಪಟ್ಟಿ: ಇನ್ನೂ ಶಿಕ್ಷಕರ ವರ್ಗಾವಣೆಯ ಬಿ.ಪಟ್ಟಿ ಯಲ್ಲಿದ್ದ 33 ಮಂದಿ ಸಹ ಶಿಕ್ಷಕರ ಪೈಕಿ ಉರ್ದು ಸಾಮಾನ್ಯ 31 ಶಿಕ್ಷಕರ ಪೈಕಿ ಕೇವಲ 6 ಮಂದಿ ವರ್ಗಾವಣೆಗೊಂಡಿದ್ದಾರೆ. ಉರ್ದು ವಿಜ್ಞಾನದಲ್ಲಿ 1, ದೈಹಿಕ ಶಿಕ್ಷಣ ಶಿಕ್ಷಕರು 1 ಸೇರಿ ಒಟ್ಟು 8 ಮಂದಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಸ್ಥಳ ಆಯ್ಕೆಗೊಂಡಿದ್ದಾರೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್‌.ಜಿ.ನಾಗೇಶ್‌ ತಿಳಿಸಿದರು.

ಕೋರಿಕೆ ವರ್ಗಾವಣೆಯಲ್ಲಿ 175: ಜಿಲ್ಲೆಯ ಪ್ರಾಥ ಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಕೋರಿಕೆ ಮೇಲೆ ನಡೆದ ವರ್ಗಾವಣೆಯಲ್ಲಿ ಒಟ್ಟು 1,626 ಮಂದಿ ಸಹ ಶಿಕ್ಷಕರು ಅರ್ಜಿ ಸಲ್ಲಿಸಿದ್ದು, ಆ ಪೈಕಿ 160 ಶಿಕ್ಷಕರು ಮಾತ್ರ ವರ್ಗಾವಣೆಗೊಂಡಿದ್ದಾರೆ.

ಮುಖ್ಯ ಶಿಕ್ಷಕರು 32 ಮಂದಿ ಪೈಕಿ ಕೇವಲ 13 ಮಂದಿ ಮಾತ್ರ ವರ್ಗಾವಣೆಗೊಂಡರೆ ಅರ್ಜಿ ಸಲ್ಲಿಸಿದ್ದ 36 ಮಂದಿ ದೈಹಿಕ ಶಿಕ್ಷಕರ ಪೈಕಿ 02 ಮಾತ್ರ ವರ್ಗಾವಣೆಗೊಂಡಿದ್ದಾರೆ. ಈ ಬಾರಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗೆ ಕೌನ್ಸಿಲಿಂಗ್‌ ನಡೆಯಿತು. ಯಾವುದೇ ಗೊಂದಲಗಳಿಗೆ ಅವಕಾಶ ಇಲ್ಲದೇ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಮುಕ್ತಾಯಗೊಂಡಿದೆ.

ಕೇಂದ್ರ ಕಚೇರಿಯಲ್ಲಿ ಪ್ರೌಢ ಶಿಕ್ಷಕರ ವರ್ಗಾ: ಜಿಲ್ಲಾ ಕೇಂದ್ರದಲ್ಲಿ ಕೇವಲ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆಗೆ ಮಾತ್ರ ಕೌನ್ಸಿಲಿಂಗ್‌ ನಡೆದ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಉಳಿದಂತೆ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ವಿಭಾಗೀಯ ಮಟ್ಟದಲ್ಲಿ ನಡೆಯಲಿದೆ.

ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯಲ್ಲಿ ಕಡ್ಡಾಯ ವರ್ಗಾವಣೆ ವಿರೋಧಿಸಿ ಈಗಾಗಲೇ ಶಿಕ್ಷಕರು ಪ್ರತಿ ಭಟನೆ ನಡೆಸಿದ್ದಾರೆ. ಆದರೂ ಜಿಲ್ಲೆಯ ಬಾಗೇಪಲ್ಲಿ ತಾಲೂಕಿಗೆ ಸುಮಾರು 30 ಕ್ಕೂ ಹೆಚ್ಚು ಪ್ರೌಢ ಶಾಲಾ ಶಿಕ್ಷಕರನ್ನು ಕಡಾಯ ವರ್ಗಾವಣೆ ಮೂಲಕ ವರ್ಗಾ ವಣೆ ಮಾಡಲಾಗಿದ್ದು, ಬಾಗೇಪಲ್ಲಿ ತಾಲೂಕಿನಲ್ಲಿ ಸ್ವಲ್ಪ ಮಟ್ಟಿಗೆ ಶಿಕ್ಷಕರ ಕೊರತೆ ನೀಗಲಿದೆ.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.