ದುರಸ್ತಿಗೆ ಕಾದಿವೆ 437 ಶಾಲಾ ಕೊಠಡಿಗಳು! 


Team Udayavani, Jun 17, 2023, 3:22 PM IST

ದುರಸ್ತಿಗೆ ಕಾದಿವೆ 437 ಶಾಲಾ ಕೊಠಡಿಗಳು! 

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿ 15 ದಿನಗಳು ಕಳೆಯುತ್ತಿವೆ. ಮಕ್ಕಳು ಉತ್ಸಾಹದಿಂದ ಸರ್ಕಾರಿ ಶಾಲೆಗಳಲ್ಲಿ ದಾಖಲಾಗುತ್ತಿದ್ದಾರೆ. ಆದರೆ ಶಾಲೆಗೆ ಬರುವ ಮಕ್ಕಳು ಮಾತ್ರ ಅಭದ್ರತೆಯಲ್ಲಿ ಪಾಠ ಪ್ರವಚನ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸುರಕ್ಷತೆ ಮರೀಚಿಕೆ: ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಬರೋಬ್ಬರಿ 437ಕ್ಕೂ ಹೆಚ್ಚು ಕೊಠಡಿಗಳು ಶಿಥಿಲಗೊಂಡು ದುರಸ್ತಿಗಾಗಿ ಎದುರು ನೋಡುವಂತಾಗಿದ್ದು, ಇದರ ಪರಿಣಾಮ ಶಾಲೆಗಳಲ್ಲಿ ಮಕ್ಕಳ ಪಾಲಿಗೆ ಸುರಕ್ಷತೆ ಎನ್ನುವುದು ಮರೀಚಿಕೆಯಾಗಿದೆ.

ಗೋಡೆ, ಚಾವಣಿ ಕುಸಿಯುವ ಭೀತಿ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದಲೂ ಸರ್ಕಾರಿ ಶಾಲೆಗಳಿಗೆ ಹೊಸ ಕಟ್ಟಡಗಳ ನಿರ್ಮಾಣ ನಿರೀಕ್ಷಿತ ಮಟ್ಟದಲ್ಲಿ ಆಗದ ಕಾರಣ ಹಳೆಯ ಓಬಿ ರಾ ಯನ ಕಾಲದಲ್ಲಿ ನಿರ್ಮಿಸಿರುವ ದಶಕಗಳು ಪೂರೈಸಿರುವ ಹಳೆ ಕಟ್ಟಡಗಳಲ್ಲಿಯೇ ಅನಿವಾರ್ಯವಾಗಿ ಮಕ್ಕಳಿಗೆ ತರಗತಿ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸದ್ಯ ಮಳೆಗಾಲ ಶುರುವಾಗಿರುವ ಪರಿಣಾಮ ದುರಸ್ತಿಗೊಳ್ಳದ ಕೊಠಡಿಗಳು ಮಳೆಗೆ ಸೋರುವುದರ ಜೊತೆಗೆ ಕೆಲವೊಂದು ಕೊಠಡಿಗಳ ಗೋಡೆಗಳು ಬಿರುಕು ಬಿಟ್ಟು ಚಾವಣಿ ಕುಸಿದು ಬೀಳುವ ಭೀತಿ ಶಾಲಾ ಮಕ್ಕಳು, ಪೋಷಕರು ಹಾಗೂ ಶಿಕ್ಷಕರದ್ದಾಗಿದೆ.

ಸರ್ಕಾರಿ ಶಾಲೆಗಳು 1,449 ಶಾಲೆಗಳು: ಜಿಲ್ಲೆಯಲ್ಲಿ 1,680 ಪ್ರಾಥಮಿಕ ಶಾಲೆಗಳಿದ್ದು, ಆ ಪೈಕಿ ಸರ್ಕಾರಿ ಶಾಲೆಗಳು 1,449 ಇದ್ದರೆ ಅನುದಾನಿತ ಶಾಲೆಗಳು 47 ಕಾರ್ಯನಿರ್ವಹಿಸುತ್ತಿವೆ. ಉಳಿದಂತೆ 177 ಅನುದಾನರಹಿತ ಶಾಲೆಗಳು ಶಾಲೆಗಳು ಇವೆ. ಇನ್ನೂ ವಸತಿ ಶಾಲೆಗಳು 6 ಮತ್ತು ಇತರೆ 1 ಶಾಲೆ ಇದ್ದು ಜಿಲ್ಲೆಯಲ್ಲಿ 349 ಪ್ರೌಢಶಾಲೆಗಳಿದ್ದು, ಇದರಲ್ಲಿ 111 ಸರ್ಕಾರಿ ಶಾಲೆಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಅನುದಾನಿತ ಶಾಲೆಗಳು 46 ಇವೆ. ಅನುದಾನರಹಿತ ಶಾಲೆಗಳು 164, ವಸತಿ ಶಾಲೆಗಳು 26 ಮತ್ತು 2 ಕೇಂದ್ರೀಯ ಪ್ರೌಢಶಾಲೆಗಳು ಜಿಲ್ಲೆಯಲ್ಲಿವೆ.

ಶಿಥಿಲ ಕೊಠಡಿಗಳ ತೆರವಿಗೆ ಪಟ್ಟಿ ಸಿದ್ಧ!: ಜಿಲ್ಲೆಯ ಸರ್ಕಾರಿ ಕಿರಿಯ, ಹಿರಿಯ ಹಾಗೂ ಪ್ರೌಢ ಶಾಲೆಗಳಲ್ಲಿ ಬಳಕೆಗೆ ಯೋಗ್ಯವಲ್ಲದ ಬರೋಬ್ಬರಿ 288 ಕೊಠಡಿಗಳನ್ನು ತೆರವು ಗೊಳಿಸಲು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಪಟ್ಟಿಸಿದ್ಧಪಡಿಸಿದ್ದಾರೆ. ಈ ಕೊಠಡಿಗಳು ದುರಸ್ತಿ ಮಾಡಿದರೂ ಬಳಕೆಗೆ ಬಾರದಷ್ಟು ತೀವ್ರವಾಗಿ ಶಿಥಿಲಗೊಂಡಿರುವುದರಿಂದ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ 288 ಕೊಠಡಿಗಳನ್ನು ತೆರವುಗೊಳಿಸಿ ಹೊಸ ಕೊಠಡಿಗಳ ನಿರ್ಮಾಣಕ್ಕೆ ಯೋಜನೆ ರೂಪಿಸುತ್ತಿದೆ.

ಶಾಲೆಗಳಲ್ಲಿನ ಕಳಪೆ ಕಾಮಗಾರಿಗೆ ಇಲ್ಲ ಬ್ರೇಕ್‌ : ಸಾಮಾನ್ಯವಾಗಿ ಜಿಲ್ಲೆಯಲ್ಲಿನ ಸರ್ಕಾರಿ ಶಾಲೆಗಳಲ್ಲಿ ವಾರ್ಷಿಕವಾಗಿ ನಡೆಯುವ ದುರಸ್ತಿ ಕಾಮಗಾರಿಗಳು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿರುವ ಪರಿಣಾಮ ಪದೇ ಪದೆ ಕೊಠಡಿಗಳು ಶಿಥಿಲಗೊಳ್ಳುತ್ತಿರುವುದು ಎದ್ದು ಕಾಣುತ್ತಿದೆ. ಇತ್ತೀಚೆಗೆ ಚೇಳೂರು ತಾಲೂಕಿನ ಯರಗುಡಿ ಗ್ರಾಮದ ಸರ್ಕಾರಿ ಶಾಲೆಯ ಚಾವಣಿಯ ಸಿಮೆಂಟ್‌ ಕಳಚಿ ಬಿದ್ದು ಇಬ್ಬರು ಮಕ್ಕಳ ತಲೆಗೆ ಪೆಟ್ಟು ಬಿದ್ದಿತ್ತು. ಅಲ್ಲದೇ ಚಿಂತಾಮಣಿಯ ಕೆಲವು ಸರ್ಕಾರಿ ಶಾಲೆಗಳಲ್ಲಿ ಚಾವಣಿ ಕಿತ್ತು ಬಂದಿದೆ. ಹೀಗೆ ಬಹುತೇಕ ಶಾಲೆಗಳಲ್ಲಿ ಕಳಪೆ ಕಾಮಗಾರಿ ಪರಿಣಾಮ ಶಾಲಾ ಕೊಠಡಿಗಳು ನಿರ್ಮಾಣಗೊಂಡ ವರ್ಷದಲ್ಲಿಯೇ ಕಳಪೆ ಕಾಮಗಾರಿಗೆ ದುರಸ್ತಿಗೆ ಎದುರಾಗುತ್ತಿರುವುದು ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ.

– ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.