4ನೇ ಹಂತದ ಲಾಕ್‌ಡೌನ್‌ ಭಿನ್ನ: ಸುಧಾಕರ್‌


Team Udayavani, May 17, 2020, 6:02 AM IST

4ne-hanta

ಚಿಕ್ಕಬಳ್ಳಾಪುರ: ಪ್ರತಿಯೊಬ್ಬರು ಜೀವದ ಜೊತೆಗೆ ಜೀವನ ನಡೆಸುವುದು ಮುಖ್ಯ ಆಗಿರುವುದರಿಂದ ನಾಲ್ಕನೇ ಹಂತದ ಲಾಕ್‌ ಡೌನ್‌ ಮೊದಲಿನಂತೆ ಇರುವುದಿಲ್ಲ. ಕೊರೊನಾ ಸಂಕಷ್ಟವನ್ನು ನಾವು ಇನ್ನೂ ಸೆಪ್ಪೆಂಬರ್‌ವರೆಗೂ  ಎದುರಿಸಬೇಕಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕೋವಿಡ್‌-19 ಪ್ರಯೋಗಾಲಯ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಲಾಕ್‌ಡೌನ್‌  ಪರಿಣಾಮ ಸತತ ಎರಡು ತಿಂಗಳಿಂದ ಎಲ್ಲ ವಲಯಗಳು ಬಂದ್‌ ಆಗಿದ್ದರಿಂದ ಇಡೀ ವಿಶ್ವ, ದೇಶ, ರಾಜ್ಯ ಆರು ತಿಂಗಳು ಹಿಂದಕ್ಕೆ ಹೋಗಿದೆ ಎಂದರು.

ಅಂತ್ಯವಾಗುವ ಲಕ್ಷಣ ಇಲ್ಲ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಂತ ಹಂತವಾಗಿ ಲಾಕ್‌ಡೌನ್‌ ಸಡಿಲಿಕೆ ಮಾಡಲಿದೆ. ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವ ಪ್ರಕಾರ ಕೊರೊನಾ ವೈರಾಣು ಅಂತ್ಯವಾಗುವ ಲಕ್ಷಣಗಳು ಕಾಣುತ್ತಿಲ್ಲ. ಅದರ ವಿರುದಟಛಿ ನಾವು ಹೋರಾಡುವ ಮೂಲಕ ಬದುಕಬೇಕೆಂದರು.

40 ಲ್ಯಾಬ್‌ ಸ್ಥಾಪನೆ: ಈ ಮೊದಲು ರಾಜ್ಯದಲ್ಲಿ ಕೊರೊನಾ ಪರೀಕ್ಷೆಗೆ ಕೇವಲ ಎರಡು ಲ್ಯಾಬ್‌ ಮಾತ್ರ ಇತ್ತು. ಎರಡು ತಿಂಗಳಲ್ಲಿ 40 ಲ್ಯಾಬ್‌ ಸ್ಥಾಪಿಸಲಾಗಿದೆ. ಈ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ 60 ಲ್ಯಾಬ್‌ ಸ್ಥಾಪಿಸಲಾಗುವುದು. ಜಿಲ್ಲೆಯಲ್ಲಿ  ಕೊರೊನಾ ಸೋಂಕು ನಿಯಂತ್ರಣದಲ್ಲಿ ಇದೆ. ಆರು ಸಾವಿರ ಮಂದಿಗೆ ಪರೀಕ್ಷೆ ನಡೆದಿದ್ದು, ಅದರಲ್ಲಿ ಕೇವಲ 24 ಪ್ರಕರಣಗಳು ಮಾತ್ರ ಪತ್ತೆಯಾಗಿವೆ ಎಂದರು.

ಕನ್ನಡಿಗರ ರಕ್ಷಣೆ ಮುಖ್ಯ: ದೇಶ, ವಿದೇಶಗಳಲ್ಲಿ ಇರುವರನ್ನು ಕರೆ ತರುತ್ತಿರುವುದಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ ಎನ್ನುವುದು ಸತ್ಯ. ಕನ್ನಡಿಗರನ್ನು ರಕ್ಷಿಸುವುದು ಸರ್ಕಾರದ ಧರ್ಮ. ಕೊರೊನಾ ಸಂಕಷ್ಟ  ರಾಜ್ಯದಲ್ಲಿ ಇನ್ನೂ ಎರಡು ತಿಂಗಳು ಇರುತ್ತದೆ. ಸೆಪ್ಪಂಬರ್‌ ವರೆಗೂ ನಾವು ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್‌. ಲತಾ, ಸಿಇಒ ಬಿ.ಫೌಝೀಯಾ ತರುನ್ನುಮ್‌, ಎಸ್ಪಿ ಮಿಥುನ್‌ ಕುಮಾರ್‌, ಉಪ ವಿಭಾಗಾಧಿಕಾರಿ ರಘುನಂದನ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯೋಗೇಶ್‌ಗೌಡ, ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ರಮೇಶ್‌ ಉಪಸ್ಥಿತರಿದ್ದರು.

ರಾಜ್ಯ ಕೋವಿಡ್‌-19 ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಆರಂಭದಲ್ಲಿ 2ನೇ ಸ್ಥಾನದಲ್ಲಿದ್ದ ಕರ್ನಾಟಕ ಇಂದು 13ನೇ ಸ್ಥಾನದಲ್ಲಿದೆ. 4ಟಿ ಮೂಲಕ ಪರಿಣಾಮಕಾರಿ ಕಾರ್ಯತಂತ್ರ ರೂಪಿಸಿ ವೈರಸ್‌ ಹರಡದಂತೆ ಮುನ್ನೆಚ್ಚರಿಕೆ  ವಹಿಸಲಾಗಿದೆ.
-ಡಾ.ಕೆ.ಸುಧಾಕರ್‌, ವೈದ್ಯಕೀಯ ಶಿಕ್ಷಣ ಸಚಿವರು

ಟಾಪ್ ನ್ಯೂಸ್

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

4

Mangaluru: ಗಾಂಜಾ ಮಾರಾಟ; ಇಬ್ಬರು ಯುವಕರ ಬಂಧನ

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.