ಜಿಲ್ಲಾದ್ಯಂತ ಸಕಾಲ ದಶಮಾನೋತವ ಸಂಭ್ರಮ

ಸಕಾಲ ಸೇವೆಗಳಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಲ್ಲಿ ಜಿಎಸ್‌ಸಿ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು

Team Udayavani, Apr 21, 2022, 6:16 PM IST

ಜಿಲ್ಲಾದ್ಯಂತ ಸಕಾಲ ದಶಮಾನೋತವ ಸಂಭ್ರಮ

ಚಿಕ್ಕಬಳ್ಳಾಪುರ: ಸರ್ಕಾರವು ಜಾರಿಗೆ ತಂದ ಸಕಾಲ ಯೋಜನೆ ಜಾರಿಯಾಗಿ ಯಶಸ್ವಿ 10 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ “ಸಕಾಲ ಅರಿವು ಜಾಥಾ’ ಕಾರ್ಯಕ್ರಮ ಜಿಲ್ಲಾದ್ಯಂತ ಬುಧವಾರ ನಡೆಯಿತು.

ಅದರ ಭಾಗವಾಗಿ ಆಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ ಅವರು ಸಕಾಲ ಅರ್ಜಿದಾರರಿಗೆ ಮ್ಯೂಟೇಷನ್‌ ಹಾಗೂ ಪಹಣಿಗಳನ್ನು ವಿತರಿಸಿದರು. ಜತೆಗೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಸಕಾಲ ಅರಿವು ಜಾಥಾ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು “ಇಂದು ನಾಳೆ ಇನ್ನಿಲ್ಲ ಹೇಳಿದ ದಿನ ತಪ್ಪೋಲ್ಲ!’ ಎಂಬ ಧ್ಯೇಯ ವಾಕ್ಯದ ಸಕಾಲ ಯೋಜನೆಯ ಸೌಲಭ್ಯಗಳನ್ನು ಸಾರ್ವಜನಿಕರು ಹೆಚ್ಚು ಸದುಪಯೋಗಪಡಿಸಿಕೊಳ್ಳಬೇಕು ಯಾವುದೇ ಇಲಾಖೆಯಲ್ಲಿ ಸಕಾಲ ಸೇವೆಗಳಿಗಾಗಿ ಅರ್ಜಿಯನ್ನು ಸಲ್ಲಿಸಿದ್ದಲ್ಲಿ ಜಿಎಸ್‌ಸಿ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಕಾಲ ಯೋಜನೆಯ ವಿವಿಧ ಸೌಲಭ್ಯಗಳ ಕುರಿತು ಜಾಥಾ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ಜಾಥಾದಲ್ಲಿ ಜಿಪಂ ಸಿಇಒ ಪಿ.ಶಿವಶಂಕರ್‌, ಅಪರ ಜಿಲ್ಲಾ ಧಿಕಾರಿ ಎಚ್‌.ಅಮರೇಶ್‌, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅ ಧಿಕಾರಿಗಳು ಪಾಲ್ಗೊಂಡಿದ್ದರು.

ತಾಲೂಕುವಾರು ಜಾಥಾ: ಚಿಕ್ಕಬಳ್ಳಾಪುರ ನಗರದ ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ಬುಧವಾರ ಸಕಾಲ ದಶಮನೋತ್ಸವದ ಅಂಗವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಬೋಧನಾ ಆಸ್ಪತ್ರೆ ವತಿಯಿಂದ ಬ್ಯಾನರ್‌ಗಳನ್ನು ಹಿಡಿದು ಸಕಾಲ ಯೋಜನೆಯ ಸೌಲಭ್ಯ ಸದುಪಯೋಗಕ್ಕೆ ಅರಿವು ಮೂಡಿಸಿದರು.

ಈ ಜಾಥಾದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್‌.ಕಬಾಡೆ, ತಾಲೂಕು ಆರೋಗ್ಯ ಕಲ್ಯಾಣಾ ಧಿಕಾರಿ ಆರ್‌.ಮಂಜುಳಾ ಆರೋಗ್ಯಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳಿದ್ದರು.

ಬಾಗೇಪಲ್ಲಿ ತಾಲೂಕಿನಲ್ಲಿ ಬುಧವಾರ ತಾಲೂಕು ಆಡಳಿತ, ಪ್ರಾದೇಶಿಕ ಅರಣ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಸಕಾಲ ದಶಮಾನೋತ್ಸವ ಅಂಗವಾಗಿ ಯೋಜನೆಗಳ ಮಹತ್ವವನ್ನು ನಗರದ ಮುಖ್ಯ ರಸ್ತೆ ಹಾಗೂ ಬೀದಿಗಳಲ್ಲಿ ಬ್ಯಾನರ್‌ ಗಳನ್ನು ಹಿಡಿದು ಜಾಥಾದ ಮೂಲಕ ಸಾರಿದರು. ಜಾಥಾದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು. ಇದೇ ರೀತಿ ಚಿಂತಾಮಣಿ, ಶಿಡ್ಲಘಟ್ಟ, ಗುಡಿಬಂಡೆಯಲ್ಲಿಯೂ ಕಾರ್ಯಕ್ರಮಗಳು ಜರುಗಿದವು.

ಗಮನಾರ್ಹ ಸಾಧನೆ: ಸಕಾಲ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ ಸತತವಾಗಿ ಮುಂಚೂಣಿಯಲ್ಲಿದ್ದು, ಸದರಿ ಯೋಜನೆ ಆರಂಭವಾದಾಗಿನಿಂದ (2012 ರಿಂದ) ಈ ವರೆಗೆ ಸರ್ಕಾರ ಈ ಯೋಜನೆಯ ಪ್ರಗತಿಯ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದ ಮಾಹೆಗಳ ಪೈಕಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯದಲ್ಲಿಯೇ 49 ಬಾರಿ (ತಿಂಗಳು) ಪ್ರಥಮ ಸ್ಥಾನ ಉಳಿಸಿಕೊಂಡಿದೆ.

ಜಿಲ್ಲಾ ಡಳಿತದ ತ್ವರಿತ ಸ್ಪಂದನೆಯ ಆಡಳಿತಕ್ಕೆ ಹಾಗೂ ಸರ್ಕಾರದ ಎಲ್ಲಾ ಯೋಜನೆಗಳ ಅನುಷ್ಠಾನಕ್ಕೆ ಕೈಗನ್ನಡಿಯಾಗಿದೆ ಕರ್ನಾಟಕ ಸಕಾಲ ಸೇವೆಗಳ ಅ ನಿಯಮದಡಿ ಸಕಾಲ ಯೋಜನೆ ಆರಂಭದಿಂದ ಈ ವರೆಗೆ ಸರಾಸರಿ ಶೇ. 99.15ರ ಸರಾಸರಿಯಲ್ಲಿ ವಿಲೇವಾರಿ ಮಾಡಿದೆ. ಈ ಪೈಕಿ 49 ಬಾರಿ ಪ್ರಥಮ, 14 ಬಾರಿ ದ್ವಿತೀಯ ಹಾಗೂ 10 ಬಾರಿ ತೃತೀಯ ಸ್ಥಾನ ಗಳಿಸಿದೆ. ಒಟ್ಟಾರೆ 49 ಬಾರಿ (ಮಾಹೆ) ರಾಜ್ಯ ದಲ್ಲಿಯೇ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ
ಸ್ಥಾನ ಗಳಿಸಿ ಜಿಲ್ಲಾಡಳಿತ ಗಮನಾರ್ಹ ಸಾಧನೆ ಮಾಡಿದೆ.

ಜಿಲ್ಲೆಗೆ ಪ್ರಶಂಸನೀಯ ಪತ್ರ
ಚಿಕ್ಕಬಳ್ಳಾಪುರ ಜಿಲ್ಲಾ ಸಕಾಲ ತಂಡಕ್ಕೆ ಅತ್ಯುತ್ತಮ ಹಾಗೂ ಅಸಾಧಾರಣ ನಾಯಕತ್ವವನ್ನು ನೀಡಿ ಮಾರ್ಚ್‌ 2022 ಮಾಹೆಯಲ್ಲಿ ರಾಜ್ಯದ 31 ಜಿಲ್ಲೆಗಳ ಪೈಕಿ ಪ್ರಥಮ ಶ್ರೇಯಾಂಕವನ್ನು ಪಡೆವ ಮೂಲಕ ಜಿಲ್ಲಾ ಧಿಕಾರಿ ಆರ್‌.ಲತಾ ಅವರು ಏ. 4 ರಂದು ರಾಜಧಾನಿ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಪ್ರಶಂಸನೀಯ ಪತ್ರ ಪಡೆದಿದ್ದರು.ಜಿಲ್ಲೆಯಲ್ಲಿ ಮಾರ್ಚ್‌ ಮಾಹೆಯಲ್ಲಿ ಒಟ್ಟು 81,842 ಅರ್ಜಿಗಳನ್ನು ಸಕಾಲ ಯೋಜನೆಯಡಿ ಸ್ವೀಕರಿಸಿ, ಹಿಂದಿನ ತಿಂಗಳೂ ಸೇರಿ 92,786 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. , 4,699 ಅರ್ಜಿಗಳು ಸೂಕ್ತ ದಾಖಲೆಗಳಿಲ್ಲದ ಕಾರಣ ತಿರಸ್ಕೃತಗೊಂಡಿವೆ. 2,165 ಅರ್ಜಿಗಳು ಬಾಕಿಯಿದೆ.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.