ಎಟಿಎಂನಲ್ಲಿ ಜನರ ಗಮನ ಬೇರೆ ಕಡೆ ಸೆಳೆದು ವಂಚನೆ ಮಾಡುತ್ತಿದ್ದ ಆರೋಪಿಯ ಬಂಧನ
Team Udayavani, Oct 16, 2022, 7:17 PM IST
ಚಿಕ್ಕಬಳ್ಳಾಪುರ: ಎಟಿಎಂಗಳಲ್ಲಿ ಸಾರ್ವಜನಿಕರ ಗಮನ ಬೇರೆಯಡೆ ಸೆಳೆದು ಹಣ ಡ್ರಾ ಮಾಡಿ ನಯವಾಗಿ ವಂಚನೆ ಮಾಡುತ್ತಿದ್ದ ಅಂತರ್ ಜಿಲ್ಲಾ ವಂಚಕನನ್ನು ಗ್ರಾಮಾಂತರ ಪೊಲೀಸರು ಬಂಧಿಸುವುದರಲ್ಲಿ ಯಶಸ್ವಿಯಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹುಡ್ಕೋ ಕಾಲೋನಿಯ ನಿವಾಸಿ ಎನ್.ಸಾಗರ್ ಬಿನ್ ಜೆ. ನಾರಾಯಣಮೂರ್ತಿ (29) ಬಂಧಿತ ಆರೋಪಿ.
ಸಾರ್ವಜನಿಕರಿಂದ ಖಚಿತ ಮಾಹಿತಿ ಮೇರೆಗೆ ನಾಯನಹಳ್ಳಿ ಗ್ರಾಮದ ಕೆನರಾ ಬ್ಯಾಂಕ್ ಬಳಿ ಅನುಮಾನಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದಾಗ ಆರೋಪಿಯೂ ಶಿವಮೊಗ್ಗ, ಯಾದಗಿರಿ, ಕೆ.ಆರ್. ನಗರ ಕುಣಿಗಲ್ ಪೊಲೀಸ್ ಠಾಣಾ ಸರಹದ್ದಿನಲ್ಲಿ ಎಟಿಎಂ ಕೇಂದ್ರಗಳ ಬಳಿ ಸಾರ್ವಜನಿಕರ ಗಮನವನ್ನು ಬೇರೆ ಕಡೆ ಸೆಳೆದು ಅವರ ಎಟಿಎಂ ಕಾರ್ಡ್‍ಗಳನ್ನು ಮೋಸದಿಂದ ಪಡೆದುಕೊಂಡು ಹಣ ಡ್ರಾ ಮಾಡಿಕೊಂಡಿರುವ ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುತ್ತದೆ.
ಇದಲ್ಲದೆ ಗೌರಿಬಿದನೂರು ನಗರ, ತುಮಕೂರು ಜಿಲ್ಲೆಯ ಗುಬ್ಬಿ, ಶಿರಾ ಹಾಗೂ ಐಜೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಎಟಿಎಂ ಕೇಂದ್ರಗಳ ಬಳಿ ಸಾರ್ವಜನಿಕರಿಗೆ ಮೋಸ ಮಾಡಿರುವುದಾಗಿ ಅರೋಪಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯಿಂದ 1 ಲಕ್ಷ 45 ಸಾವಿರ ನಗದು ಹಾಗೂ ಕೆನರಾ ಬ್ಯಾಂಕ್, ಕರ್ನಾಟಕ ಗ್ರಾಮೀಣ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಬ್ಯಾಂಕ್‍ಗಳ ಎಟಿಎಂ ಕಾರ್ಡ್‍ಗಳನ್ನು ವಶಪಡಿಸಲಾಗಿದೆ ಚಿಕ್ಕಬಳ್ಳಾಪುರ ಉಪವಿಭಾಗದ ಡಿವೈಎಸ್‍ಪಿ ವಿ.ಕೆ. ವಾಸುದೇವ್ ಹಾಗೂ ಸಿಪಿಐ ರಾಜು ಅವರ ಮಾರ್ಗದರ್ಶನದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ಕೆ.ಪ್ರದೀಪ್ ಪೂಜಾರಿ ಅವರ ನೇತೃತ್ವದಲ್ಲಿ ಮತ್ತು ಸಿಬ್ಬಂದಿಯರಾದ ರಾಜೇಶ್,ರವಿಕುಮಾರ್,ವಿ.ಮುರಳಿ,ವಿಜಯಕುಮಾರ್ ಆರೋಪಿಯನ್ನು ಬಂಧಿಸಿದ್ದಾರೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಅವರು ಶ್ಲಾಘನೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.